ಮನಸು ಮಾಡಿದ್ರೆ.. ಎರಡೇ ದಿನದಲ್ಲಿ ಪಾಕಿಸ್ತಾನ ಉಡೀಸ್ ಎಂದ ಜಮೀರ್
B.Z.Zameer Ahmed Khan: ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರನ್ನು ಬಲಿ ಪಡೆದಿದ್ದರು. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರವಾಗಿ ಪಾಕ್‌ಗೆ ನುಗ್ಗಿ ಅಲ್ಲಿನ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಆದರೂ ಬುದ್ಧಿ ಕಲಿಯದ ನರಿ ಬುದ್ಧಿ ಪಾಪಿಸ್ತಾನಕ್ಕೆ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಅಡಿಯಲ್ಲಿ ತಿರುಗೇಟು ಕೊಡುವ ಕೆಲಸವನ್ನು ಮಾಡುತ್ತಿದ್ದು, ಇದಕ್ಕೆ ಬರೀ ದೇಶದ ಜನರಷ್ಟೇ ಅಲ್ಲದೆ, ವಿದೇಶಿಗರು ಸಹ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಚಿವ ಜಮೀರ್ ಅಹ್ಮದ್ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ.
ಭಾರತ-ಪಾಕಿಸ್ತಾನದ ನಡುವೆ ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಲಿದೆ. ಪಾಕಿಸ್ತಾನ ತನ್ನ ನರಿ ಬುದ್ಧಿ ಮುಂದುವರೆಸಿದ್ದು, ಇದಕ್ಕೆ ಭಾರತೀಯ ಸೇನೆಯು 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಅಡಿಯಲ್ಲಿ ತಕ್ಕ ಪ್ರತ್ಯುತ್ತರ ಕೊಡುತ್ತಿದೆ. ಈ ಕಾರ್ಯಾಚರಣೆ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರು ಪ್ರತಿಕ್ರಿಯಿಸಿ ತಮಗೆ ಅವಕಾಶ ಸಿಕ್ಕರೆ ಏನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಇಂದು (ಮೇ 10) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮನಸು ಮಾಡಿದರೆ ಎರಡೇ ದಿನದಲ್ಲಿ ಪಾಕಿಸ್ತಾನವನ್ನು ಸರ್ವನಾಶ ಮಾಡಬಹುದು. ಪಾಕಿಸ್ತಾನದವರ ಬಳಿ ಏನು ಇಲ್ಲ, ಅದು ಠುಸ್ ಪಟಾಕಿ ಇದ್ದಂತೆ ಎಮದು ಹೇಳಿದ್ದಾರೆ.
ನೀವು ದೇಶಕ್ಕಾಗಿ ಏನು ಮಾಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಒಂದೇ ಒಂದು ಅವಕಾಶ ಕೊಟ್ಟರೆ ನಾನು ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ. ಪಾಕಿಸ್ತಾನ ಒಂದು ಖಾಲಿ ಡಬ್ಬ, ಠುಸ್ ಪಟಾಕಿಯಂತಿದೆ. ನಮ್ಮ ದೇಶಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧ ಎಂದು ಹೇಳಿದರು
ಈಗಾಗಲೇ 'ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿ ಆಗಲಿ ಎಂದು ಶುಕ್ರವಾರ ನಾವು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿದ್ದೇವೆ. ದೇಶಕ್ಕೋಸ್ಕರ ನಾವು ಏನು ಮಾಡಿದರೂ ಕಡಿಮೆ. ಕೇಂದ್ರ ಸರ್ಕಾರ ಉತ್ತಮ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ವಿಧಾನಸೌಧದಲ್ಲಿ ಕಂದಾಯ ಮತ್ತು ಗೃಹ ಇಲಾಖೆ ಅಧಿಕಾರಿಗಳೊಂದಿಗೆ ಸಭೆಯ ನಂತರ ಸುದ್ಧಿಗೋಷ್ಠಿ ನಡೆಸಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ಯುದ್ಧ ವಿರಾಮ ಘೋಷಣೆಯಾಗಿದೆ ಎಂದು ಸರ್ಕಾರ ಏನೂ ಕೈಕಟ್ಟಿ ಕೂರುವುದಿಲ್ಲ. ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುವುದು ನಮ್ಮ ಗುರಿ ಎಂದು ಹೇಳಿದರು.
ರಾಜ್ಯದಲ್ಲಿ ಇಲ್ಲ ಎಲ್ಲ ಪಾಕಿಸ್ತಾನೀಯರನ್ನು ವಾಪಸ್ಸು ಕಳುಹಿಸಲಾಗಿದೆ. ಅದರೆ, ಮೈಸೂರಲ್ಲಿ 6 ವರ್ಷದೊಳಗಿನ ಮೂರು ಮಕ್ಕಳು ಉಳಿದುಕೊಂಡು ಬಿಟ್ಟಿವೆ. ಅವರ ತಂದೆ ಪಾಕಿಸ್ತಾನಿ ಮತ್ತು ತಾಯಿ ಮೈಸೂರಿನವರು. ಅವರನ್ನು ಬಾರ್ಡರ್ವರೆಗೆ ಕರೆದೊಯ್ಯಲಾಗಿತ್ತು. ಅದರೆ ಪಾಕಿಸ್ತಾನದೊಳಗೆ ಕರೆದೊಯ್ಯಲು ಯಾರೂ ಬಾರದ ಕಾರಣ ವಾಪಸ್ಸು ತರಲಾಗಿದೆ ಎಂದು ಸಿಎಂ ಸಿದ್ಹೇದರಾಮಯ್ಯ ಅವರು ತಿಳಿಸಿದರು.
ಕೇಂದ್ರ ಸರ್ಕಾರದ ಸೂಚನೆ ಏನು?: ಭಾರತ-ಪಾಕಿಸ್ತಾನದ ನಡುವೆ ಗಡಿಯಲ್ಲಿ ಸಂಘರ್ಷದ ವಾತಾವರಣ ಹಾಗೂ ಡ್ರೋನ್ ದಾಳಿಗಳ ಹಿನ್ನೆಲೆ ಎಲ್ಲೆಡೆ ಕಟ್ಟೆಟ್ಟರ ವಹಿಸಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗುವಂತೆ ಈಗಾಗಲೇ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆ ಕರ್ನಾಟಕ ವಿದ್ಯುತ್ ನಿಗಮ ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ ಮುಖ್ಯವಾಗಿದ್ದು, ಎಲ್ಲಾ ಜಲಾಶಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ರಾಜ್ಯ ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಸಂಪೂರ್ಣ ಭದ್ರತೆ ಒದಗಿಸಬೇಕು. ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಲೋಪವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದೆ.












Click it and Unblock the Notifications