Lok Sabha Election; ಕಾಂಗ್ರೆಸ್‌ಗೆ ನಿರಾಸೆ ತಂದ ಮತ್ತೊಂದು ಸಮೀಕ್ಷೆ
ಬೆಂಗಳೂರು, ಫೆಬ್ರವರಿ 29; ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಪ್ರಕಟಗೊಳ್ಳಲು ಕೆಲವೇ ದಿನಗಳು ಬಾಕಿ ಇದೆ. ಈ ಬಾರಿ ಎನ್‌ಡಿಎ ಅಥವ ಇಂಡಿಯಾ ಯಾವ ಮೈತ್ರಿಕೂಟಕ್ಕೆ ಅಧಿಕಾರ? ಎಂಬ ಲೆಕ್ಕಾಚಾರ ಜೋರಾಗಿದೆ. ಇದರ ನಡುವೆಯೇ ಚುನಾವಣಾ ಪೂರ್ವ ಸಮೀಕ್ಷೆಗಳು ಪ್ರಕಟಗೊಳ್ಳುತ್ತಿವೆ.
Zee News-Matriz ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ, ಎನ್‌ಡಿಎ ಮೈತ್ರಿಕೂಟಕ್ಕೆ ಹೊಸ ಹೊಸ ಪಕ್ಷಗಳು ಸೇರಿದ ಬಳಿಕ ನಡೆಸಿದ ಸಮೀಕ್ಷೆಯ ವರದಿ ಇದಾಗಿದೆ. ಫೆಬ್ರವರಿ 5 ರಿಂದ 27ರ ತನಕ ನಡೆಸಿದ ಸಮೀಕ್ಷೆ ಇದು.

ಈಗ ಚುನಾವಣೆ ನಡೆದರೆ 543 ಸೀಟುಗಳ ಪೈಕಿ ಎನ್‌ಡಿಎ ಮೈತ್ರಿಕೂಟ 377 ಮತ್ತು ಇಂಡಿಯಾ ಮೈತ್ರಿಕೂಟ 94 ಸ್ಥಾನ ಗೆಲ್ಲಲಿದೆ. ಮೋದಿ ಅಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ ಆಗಲಿದೆ. ಎನ್‌ಡಿಎ ಮೈತ್ರಿಕೂಟ ಈ ಬಾರಿ 400 ಸ್ಥಾನಗಳಲ್ಲಿ ಗೆಲ್ಲುವ ಗುರಿಯನ್ನು ಹೊಂದಿದೆ.
ಕರ್ನಾಟಕದಲ್ಲಿನ ಸಮೀಕ್ಷೆ: Zee News-Matriz ವಿವಿಧ ರಾಜ್ಯಗಳಲ್ಲೂ ಚುನಾವಣಾ ಪೂರ್ವ ಸಮೀಕ್ಷೆಯನ್ನು ಮಾಡಿದೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವ ಪ್ರಮುಖ ರಾಜ್ಯ ಕರ್ನಾಟಕ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿವೆ.
ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಪ್ರತಿಪಕ್ಷ ಬಿಜೆಪಿ ಜೆಡಿಎಸ್ ಜೊತೆ ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಲಿದೆ. ಸಮೀಕ್ಷೆಯ ವರದಿ ಪ್ರಕಾರ ಬಿಜೆಪಿ ಮೈತ್ರಿಕೂಟ 23 ಮತ್ತು ಆಡಳಿತ ಪಕ್ಷ ಕಾಂಗ್ರೆಸ್ 5 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ.
ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ ಈ ಬಾರಿ 20+ ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬ ಗುರಿ ಹಾಕಿಕೊಂಡಿದೆ. ಆದರೆ ಈ ಚುನಾವಣಾ ಪೂರ್ವ ಸಮೀಕ್ಷೆ ಕಾಂಗ್ರೆಸ್ ನಾಯಕರಿಗೆ ನಿರಾಸೆ ತಂದಿದೆ. ಪಕ್ಷದ ಹೈಕಮಾಂಡ್ ಸಹ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ನಾಯಕರಿಗೆ ಟಾಸ್ಕ್ ನೀಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದವರು. ಆದ್ದರಿಂದ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದು ಅವರಿಗೆ ಶಕ್ತಿ ತೋರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ತಂತ್ರ ರೂಪಿಸುತ್ತಿದ್ದಾರೆ.
2019ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಿದ್ದವು. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವೇ ಅಧಿಕಾರದಲ್ಲಿತ್ತು. ಆದರೆ ಕಾಂಗ್ರೆಸ್ (ಬೆಂಗಳೂರು ಗ್ರಾಮಾಂತರ) ಮತ್ತು ಜೆಡಿಎಸ್ (ಹಾಸನ) ಕ್ಷೇತ್ರವನ್ನು ಮಾತ್ರ ಗೆದ್ದಿತ್ತು. ಬಿಜೆಪಿ 25 ಸ್ಥಾನದಲ್ಲಿ ಜಯಗಳಿಸಿತ್ತು.
ಈ ಬಾರಿ ಜೆಡಿಎಸ್ ಎನ್‌ಡಿಎ ಮೈತ್ರಿಕೂಟ ಸೇರಿದ್ದು ರಾಜ್ಯದಲ್ಲಿ 2 ಅಥವ 5 ಸೀಟುಗಳಲ್ಲಿ ಕಣಕ್ಕಿಳಿಯಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಸೀಟು ಹಂಚಿಕೆ ಇನ್ನೂ ಸಹ ಅಂತಿಮಗೊಂಡಿಲ್ಲ. ಆದರೆ ಚುನಾವಣಾ ಪೂರ್ವ ಸಮೀಕ್ಷೆ ಬಿಜೆಪಿ ಮೈತ್ರಿಕೂಟ 25 ಸ್ಥಾನ ಗೆಲ್ಲಲಿದೆ ಎಂದು ಅಂದಾಜಿಸಿದೆ.
ಲೋಕಸಭೆ ಚುನಾವಣೆ ಕುರಿತು ಇದುವರೆಗೂ ಪ್ರಕಟವಾದ ಎಲ್ಲಾ ಸಮೀಕ್ಷೆಗಳು ಸಹ ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚು ಸೀಟು ಎಂದು ಅಂದಾಜಿಸಿವೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸಚಿವರನ್ನು ಸಹ ಲೋಕಸಭಾ ಚುನಾವಣಾ ಕಣಕ್ಕಿಳಿಸಲು ತಂತ್ರವನ್ನು ರೂಪಿಸುತ್ತಿದೆ.
2019ರಲ್ಲಿ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದ್ದರು. ಈ ಬಾರಿ ಜೆಡಿಎಸ್ ಬಿಜೆಪಿ ಮೈತ್ರಿ ಕಾರಣ ಮಂಡ್ಯ ಸೀಟು ಯಾರಿಗೆ? ಎಂಬುದು ಇನ್ನೂ ಕುತೂಹಲವಾಗಿದೆ. ಜೆಡಿಎಸ್ ಪ್ರಭಾವ ಹೆಚ್ಚಿರುವ ಮಂಡ್ಯವನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಳ್ಳಲಿದೆಯೇ? ಎಂದು ಕಾದು ನೋಡಬೇಕಿದೆ.
ಕರ್ನಾಟಕದ ಪಕ್ಕದ ತೆಲಂಗಾಣದಲ್ಲಿಯೂ ಕಾಂಗ್ರೆಸ್ ಅಧಿಕಾರದಲ್ಲಿದೆ. ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 9, ಬಿಜೆಪಿ 5, ಬಿಆರ್‌ಎಸ್ 2, ಇತರರು 1 ಸ್ಥಾನದಲ್ಲಿ ಜಯಗಳಿಸಲಿದ್ದಾರೆ ಎಂದು ಸಮೀಕ್ಷೆ ಅಂದಾಜಿಸಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications