ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೂನ್ಯ ಕಲಿಕಾ ವರ್ಷ; ಶಿಕ್ಷಣ ಸಚಿವರ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ನವೆಂಬರ್ 23: ಕೋವಿಡ್ ಭೀತಿ ಹಿನ್ನಲೆಯಲ್ಲಿ ದೇಶಾದ್ಯಂತ ಶಾಲಾ-ಕಾಲೇಜುಗಳು ಮುಚ್ಚಿವೆ. ಕೆಲವು ರಾಜ್ಯಗಳಲ್ಲಿ ಹಂತ-ಹಂತವಾಗಿ ಶಾಲೆ, ಕಾಲೇಜು ಪುನಃ ಆರಂಭವಾಗುತ್ತಿದೆ. 'ಶೂನ್ಯ ಕಲಿಕಾ ವರ್ಷ' ಎಂದು ಘೋಷಣೆ ಮಾಡಬೇಕು ಎಂಬ ಒತ್ತಾಯವೂ ಇದೆ.

ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೋಮವಾರ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ. 'ಶೂನ್ಯ ಕಲಿಕಾ ವರ್ಷ' ಎಂಬ ಬಗ್ಗೆ ವಿವರಣೆಯನ್ನು ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ಶಾಲೆ ಪುನರಾರಂಭ ಸೂಕ್ತವಲ್ಲ ತಜ್ಞರ ಅಭಿಪ್ರಾಯ ಕರ್ನಾಟಕದಲ್ಲಿ ಶಾಲೆ ಪುನರಾರಂಭ ಸೂಕ್ತವಲ್ಲ ತಜ್ಞರ ಅಭಿಪ್ರಾಯ

"ಶೂನ್ಯ ಕಲಿಕಾ ವರ್ಷ ಎಂಬ ಕಲ್ಪನೆ ಸಹ ಶಿಕ್ಷಣ ಇಲಾಖೆಯಲ್ಲಿ ಇಲ್ಲ. ನಾನು ಇಂದು ಈ ಕುರಿತು ಬಹಳ ಸ್ಪಷ್ಟ ವಾಗಿ ತಿಳಿಸಿದ್ದೇನೆ" ಎಂದು ಸಚಿವರು ಹೇಳಿದ್ದಾರೆ. ಅವರ ಫೇಸ್ ಬುಕ್ ಪೋಸ್ಟ್ ಕೆಳಗಿನಂತಿದೆ.

ಡಿಸೆಂಬರ್‌ ಕೊನೆಯ ವಾರದಲ್ಲಿ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ!ಡಿಸೆಂಬರ್‌ ಕೊನೆಯ ವಾರದಲ್ಲಿ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ!

2020-21 will not be a zero academic year, says Minister Suresh Kumar

ಫೇಸ್ ಬುಕ್ ಪೋಸ್ಟ್; ಶೈಕ್ಷಣಿಕ ಶೂನ್ಯ ಕಲಿಕಾ ವರ್ಷ ಅಥವಾ zero_academic_year ಎಂಬ ಪದ ಇತ್ತೀಚೆಗೆ ಹುಟ್ಟಿದೆ. ಮತ್ತು ಈ ಕುರಿತು ಅನಗತ್ಯ ಗೊಂದಲ ಉಂಟಾಗುತ್ತಿದೆ. ಆ ರೀತಿಯ ಶೂನ್ಯ_ಕಲಿಕಾ_ವರ್ಷ ಎಂಬ ಕಲ್ಪನೆ ಸಹ ಶಿಕ್ಷಣ ಇಲಾಖೆಯಲ್ಲಿ ಇಲ್ಲ. ನಾನು ಇಂದು ಈ ಕುರಿತು ಬಹಳ ಸ್ಪಷ್ಟ ವಾಗಿ ತಿಳಿಸಿದ್ದೇನೆ.

ಶಾಲೆ ಆರಂಭಿಸುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆ!ಶಾಲೆ ಆರಂಭಿಸುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆ!

ಈಗಾಗಲೇ ಒಂದನೇ ತರಗತಿಯಿಂದ ಏಳನೇ ತರಗತಿವರೆಗೂ ನಾವು ವಿವಿಧ ರೀತಿಯಲ್ಲಿ ಮಕ್ಕಳಿಗೆ ಪಾಠ ಕಲಿಸಿದ್ದೇವೆ. ಕೆಲವು ಶಾಲೆಗಳು ಆನ್ಲೈನ್ ಮೂಲಕ ಶಿಕ್ಷಣ ನೀಡಿವೆ. ಇನ್ನುಳಿದ ಶಾಲೆಗಳಲ್ಲಿ ದೂರದರ್ಶನದ ಚಂದನ ಕಾರ್ಯಕ್ರಮದ ಮೂಲಕ ಹಾಗೂ ಆಯಾ ಶಾಲೆಗಳ ಶಿಕ್ಷಕರು ನಡೆಸಿದ ವಿದ್ಯಾಗಮ ಕಾರ್ಯಕ್ರಮದ ಮೂಲಕ ಈ ತರಗತಿಯ ಮಕ್ಕಳಿಗೆ ಪಾಠವನ್ನು ಹೇಳಿಕೊಡಲಾಗುತ್ತಿದೆ.

ಇಂದಿನಿಂದ 5,6 ಮತ್ತು 7 ತರಗತಿಗಳಿಗೆ ಪ್ರತಿದಿನ ಚಂದನದ ಸಂವೇದ ಕಾರ್ಯಕ್ರಮದ ಮೂಲಕ ನಿಗದಿತ ವೇಳೆಯಲ್ಲಿ ಪಾಠ ಪ್ರಾರಂಭವಾಗಿದೆ. ರಾಜ್ಯದ ಎಲ್ಲಾ ಮಕ್ಕಳಿಗೂ ಪಠ್ಯ ಪುಸ್ತಕಗಳನ್ನು ಜೂನ್-ಜುಲೈ ತಿಂಗಳಲ್ಲೇ ತಲುಪಿಸಿದೆ. ಹಿಂದಿನ ವರ್ಷ ಸಹ ಒಂದನೇ ತರಗತಿಯಿಂದ 9ರವರೆಗೂ ಪರೀಕ್ಷೆ ಇಲ್ಲದೆ ಎಲ್ಲ ಮಕ್ಕಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗಿತ್ತು.

ಯಾವುದೇ ಕಾರಣಕ್ಕೂ ಯಾವುದೇ ಶಾಲೆಯಲ್ಲಿ ಯಾವುದೇ ತರಗತಿಗಳಿಗೆ ಶೂನ್ಯ ವರ್ಷ ಎಂಬುದು ಇಲ್ಲ ಇರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇನೆ.

English summary
Due to COVID pandemic demand to declare 2020-21 a zero academic year. Karnataka education minister Suresh Kumar clarification in issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X