ರಾಜ್ಯದ ಆರು ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್ ಪ್ರಕರಣ: ಇಂದು ಇಬ್ಬರು ಸಾವು

ಬೆಂಗಳೂರು, ಫೆಬ್ರವರಿ 9: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 366 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

513 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 9,43,212ಕ್ಕೆ ತಲುಪಿದೆ. ಒಟ್ಟು 9,25,167 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೂ ಒಟ್ಟು 12,241 ಜನರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು 5,785ಕ್ಕೆ ಇಳಿಕೆಯಾಗಿವೆ. 143 ಮಂದಿ ಐಸಿಯುದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Zero Covid-19 Cases Reported In Six Districts Of Karnataka On Tuesday

ಬೆಂಗಳೂರಿನಲ್ಲಿ 195 ಪ್ರಕರಣಗಳು ದಾಖಲಾಗಿವೆ. ಅದರ ನಂತರದ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿದ್ದು 29 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 20, ಮೈಸೂರಿನಲ್ಲಿ 15, ಬೆಳಗಾವಿಯಲ್ಲಿ 12 ಮತ್ತು ತುಮಕೂರು ಜಿಲ್ಲೆಯಲ್ಲಿ 17 ಪ್ರಕರಣಗಳು ಪತ್ತೆಯಾಗಿವೆ.

ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಎರಡಂಕಿಗಿಂತ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಇನ್ನು ಬಾಗಲಕೋಟೆ, ಚಾಮರಾಜನಗರ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೂ ಪ್ರಕರಣಗಳು ದಾಖಲಾಗಿಲ್ಲ. ಯಾದಗಿರಿ, ಮಂಡ್ಯ, ಕೋಲಾರ, ದಾವಣಗೆರೆ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಮಂಗಳವಾರ ಸಂಜೆಯವರೆಗೂ 630 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಈವರೆಗೂ 102273 ಮಂದಿಗೆ ಕೋವಿಡ್ ಲಸಿಕೆ ನೀಡಲು ಉದ್ದೇಶಿಸಲಾಗಿತ್ತು. ಅವರಲ್ಲಿ 22,623 ಜನರು ಲಸಿಕೆ ಪಡೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+