ಝಿಕಾ ಭೀತಿ: ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್

Subscribe to Oneindia Kannada

ಬೆಂಗಳೂರು, ಫೆಬ್ರವರಿ 04: ಜಾಗತಿಕ ಮಟ್ಟದಲ್ಲಿ ಆತಂಕ, ಭಯ ಸೃಷ್ಟಿ ಮಾಡಿರುವ ಝಿಕಾ ವೈರಾಣು ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿದೆ.

ನಾವು ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿಒದ್ದೇವೆ. ರೋಗ ಪತ್ತೆ ಕಿಟ್ಟ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಿಗೂ ಸೂಚನೆ ಕಳುಹಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ.[ಝಿಕಾ ವೈರಸ್ ಎಂದರೇನು? ಹೇಗೆ ಹರಡುತ್ತದೆ?]

Zika Virus alert: Karnataka Government set up screening at airports

ನಗರದ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣದ ಕುರಿತು ಜಾಗೃತಿ ಹಮ್ಮಿಕೊಳ್ಳಲಾಗಿದೆ.ಕಸ ವಿಲೇವಾರಿ ಘಟಕಕ್ಕೂ ಮಾರ್ಗದರ್ಶಿ ಸೂಚನೆ ಕಳಿಸಲಾಗಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ಸಂಸ್ಥೆಯ ನೋಡಲ್ ಅಧಿಕಾರಿ ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.[ಜಾಗತಿಕ ಮಹಾಮಾರಿ ಝಿಕಾ ವೈರಾಣುಗೆ ಔಷಧಿ ಇದೆಯಂತೆ!]

ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಶೇಷವಾಗಿ ವಿಮಾನ ನಿಲ್ದಾಣದ ಮೇಲೆ ಗಮನ ಕೇಂದ್ರಿಕರಿಸಲಾಗುತ್ತಿದೆ.

ಜನವರಿ ತಿಂಗಳಲ್ಲಿ 85 ಡೆಂಘೆ ಪ್ರಕರಣಗಳು ದಾಖಲಾದ ವರದಿಯಿದೆ. ಹಾಗಾಗಿ ಗರ್ಭಿಣಿಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು ಸೊಳ್ಳೆ ನಿಯಂತ್ರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಕಾಶ್ ಕುಮಾರ್ ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
With the increasing cases of Zika virus patients globally, Karnataka government is also taking all steps to set up screening process at Bengaluru and Mangaluru airports. "We will take all initiatives to control vector-control activities in all the districts of Karnataka," Health minister U T Khadar said.
Please Wait while comments are loading...