Zika Virus: ಕರ್ನಾಟಕದಲ್ಲಿ ಝೀಕಾ ವೈರಸ್ಗೆ ಮೊದಲ ಬಲಿ
ಬೆಂಗಳೂರು, ಆಗಸ್ಟ್ 20: ಝೀಕಾ ವೈರಸ್ ಸೋಂಕಿನ ಕುರಿತು ರಾಜ್ಯದ ಜನತೆ ಭಯ ಬೀತರಾಗಿದ್ದು,ಝೀಕಾ ವೈರಸ್ ಆತಂಕ ಮೂಡಿಸಿರುವ ಹೊತ್ತಲ್ಲೇ ಶಿವಮೊಗ್ಗದಲ್ಲಿ ಮೊದಲ ಬಲಿಯಾಗಿದೆ. ಝೀಕಾ ವೈರಸ್ಗೆ 73 ವರ್ಷದ ವೃದ್ಧ ಬಲಿಯಾಗಿದ್ದಾರೆ. ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ (ಆಗಸ್ಟ್ 19) ಮೃತಪಟ್ಟಿದ್ದಾರೆ.
ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಕೋಮಾರ್ಬಿಟಿಸ್ ಇದ್ದು, ಜೊತೆಗೆ ಝೀಕಾ ವೈರಸ್ ಅಟ್ಯಾಕ್ ಆಗಿತ್ತು. ಈ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗುಣಮುಖರಾಗಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಝೀಕಾ ವೈರಸ್ ಭೀತಿ ಎದುರಾಗಿದ್ದು, ಇದುವರೆಗೆ 9 ಝೀಕಾ ವೈರಸ್ ಕೇಸ್ ಪತ್ತೆ ಆಗಿವೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6, ಶಿವಮೊಗ್ಗ ಜಿಲ್ಲೆಯಲ್ಲಿ 3, ಝೀಕಾ ವೈರಸ್ ಕೇಸ್ ಪತ್ತೆ ಆಗಿವೆ. ಈ ಬಗ್ಗೆ ಝೀಕಾ ವೈರಸ್ ಸೋಂಕಿತರ ವಿವರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ.

ಝೀಕಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಆರೋಗ್ಯ ಇಲಾಖೆ, ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ 3ಕಿ.ಮೀ ವ್ಯಾಪ್ತಿಯಲ್ಲಿ ಕಂಟೋನ್ಮೆಂಟ್ ಝೋನ್ ಘೋಷಣೆ ಮಾಡಿದೆ. ಝೀಕಾ ಸೋಂಕು ಸೊಳ್ಳೆಗಳಿಂದ ಹರಡಲಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಕ್ರಮ ವಹಿಸಲಾಗಿದೆ. ಝೀಕಾ ವೈರಸ್ ಸೋಂಕಿನ ಕುರಿತು ರಾಜ್ಯದ ಜನತೆ ಭಯ ಬೀತರಾಗಿದ್ದು, ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ. ಗಂಧೆಗಳು (ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ.
ಬಾಣಂತಿ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಜಿಗಣಿಯಲ್ಲಿ ಝೀಕಾ ಸೋಂಕಿತೆಗೆ ಹೆರಿಗೆಯಾಗಿದ್ದು ತಾಯಿ, ಮಗು ಆರೋಗ್ಯವಾಗಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಫಾಗಿಂಗ್, ಲಾರ್ವ ನಾಶ ಸೇರಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ.
ರಾಜ್ಯದಲ್ಲಿ ಒಟ್ಟು 9 ಝೀಕಾ ವೃರಸ್ ಪ್ರಕರಣಗಳು ಪತ್ತೆಯಾಗಿದ್ದು, ಝೀಕಾ ಹೆಚ್ಚಾಗಿ ಕಂಡುಬಂದಿರುವ ಸ್ಥಳಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಿ. ಶಿವಮೊಗ್ಗ 3 ಹಾಗೂ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಜನರಿಗೆ ಝೀಕಾ ವೈರಸ್ ಪತ್ತೆಯಾಗಿದೆ. ಬೆಂಗಳೂರಿನ ಜಿಗಣಿಯಲ್ಲಿ 5 ಮಹಿಳೆಯರಿಗೆ ಝೀಕಾ ಪತ್ತೆಯಾಗಿದ್ದು, ವೈರಸ್ ಗೆ ತುತ್ತಾದ ಗರ್ಭೀಣಿ ಸ್ತ್ರೀಯರ ಆರೈಕೆಗೆ ಹೆಚ್ಚಿನ ಒತ್ತು ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಅವರ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸಿ. ಜಿಗಣಿ ಪ್ರದೇಶದ ಸುತ್ತಮುತ್ತ ಹೆಚ್ಚಿನ ಮೇಲ್ವೀಚಾರಣೆ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೊರದೇಶಗಳಲ್ಲಿ ಮಂಕಿಪಾಕ್ಸ್ ವೈರಸ್ ಕಂಡಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತೆ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕುರಿತು ಚರ್ಚೆ ನಡೆಸಿದ ಸಚಿವರು, ಏರ್ಪೋರ್ಟ್ ಗಳಲ್ಲಿ ಮಂಕಿಪಾಕ್ಸ್ ವೈರಸ್ ಗುಣಲಕ್ಷಣಗಳು ಕಂಡುಬಂದರೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ವೇಳೆ ಮಂಕಿಪಾಕ್ಸ್ ವೈರಸ್ ಪತ್ತೆಯಾದರೆ ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾಸ್ಪತ್ರೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಬೇಕು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಇಲ್ಲಿಯ ವರೆಗೆ ಮಂಕಿಪಾಕ್ಸ್ ಬಂದಿಲ್ಲ. ಮೆಡಿಕಲ್ ಏಮರ್ಜನ್ಸಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ ಹೊರದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಹಿನ್ನೆಲೆಯಲ್ಲಿ ವಿಶ್ವಾರೋಗ್ಯ ಸಂಸ್ಥೆ ಮೆಡಿಕಲ್ ಏಮರ್ಜೆನ್ಸಿ ಘೋಷಿಸಿದೆ. ಇದನ್ನ ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗೃತೆ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ತಯಾರಿಗಳನ್ನ ಮಾಡಿಕೊಳ್ಳಿ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.












Click it and Unblock the Notifications