ಮತದಾನಕ್ಕಾಗಿ ಫೆ.13, 20ರಂದು ಸರ್ಕಾರಿ ರಜೆ

ಬೆಂಗಳೂರು, ಫೆಬ್ರವರಿ 02 : ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಮತದಾನ ಫೆ.13 ಮತ್ತು 20ರಂದು ನಡೆಯಲಿದ್ದು, ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಒಟ್ಟು ಎರಡು ಹಂತದಲ್ಲಿ 175 ತಾಲೂಕು ಮತ್ತು 30 ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಮತದಾನದ ದಿನ ಎಲ್ಲಾ ಸರ್ಕಾರಿ ಕಚೇರಿ, ಸರ್ಕಾರಿ ಕಾರ್ಖಾನೆ, ಕೈಗಾರಿಕಾ ಸಂಸ್ಥೆ, ಶಿಕ್ಷಣ ಸಂಸ್ಥೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮತಗಟ್ಟೆಗಳನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ ಫೆ.12 ಮತ್ತು 19 ರಂದು ಪೂರ್ವ ತಯಾರಿಗಾಗಿ ರಜೆ ಘೊಷಿಸಲು ರಾಜ್ಯ ಚುನಾವಣಾ ಆಯೋಗ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ. [ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ವಿವರ]

election

ಈ ಸಾರ್ವತ್ರಿಕ ರಜೆ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ. ಬ್ಯಾಂಕ್​, ಎಲ್‌ಐಸಿ, ಇಂಡಸ್ಟ್ರಿಯಲ್ ಅಂಡರ್​ಟೇಕಿಂಗ್ ಅಥವಾ ಇನ್ನಿತರ ಎಸ್ಟಾಬ್ಲಿಷ್​ವೆುಂಟ್​ಗಳಲ್ಲಿ ಮತ್ತು ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಮತದಾನದ ದಿನ ವೇತನ ಸಹಿತ ರಜೆಗೆ ಪಡೆಯಲು ಅರ್ಹರು. [2016ರ ಸರ್ಕಾರಿ ರಜೆ ಪಟ್ಟಿ]

15 ಜಿಲ್ಲೆಗಳಲ್ಲಿ ಚುನಾವಣೆ : ಫೆಬ್ರವರಿ 13ರಂದು ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

ಫೆ.20ರಂದು ಚುನಾವಣೆ : ಫೆಬ್ರವರಿ 20ರಂದು ಎರಡನೇ ಹಂತದಲ್ಲಿ ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬಳ್ಳಾರಿ, ಕಲಬುರಗಿ, ಯಾದಗಿರಿ, ರಾಯಚೂರು ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+