'ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ'

ಬೆಂಗಳೂರು, ಆಗಸ್ಟ್ 14: ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು

ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಸಚಿವರು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸಿನಂತೆ ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ರಾಜ್ಯದ ಎಲ್ಲಾ ಕ್ಷೇತ್ರಗಳ ಸೀಮಾ ಗಡಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಸದಸ್ಯರ ಸಂಖ್ಯೆ ನಿಗದಿ ಪಡಿಸುವ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಜೊತೆಗೆ ಕ್ಷೇತ್ರಗಳ ಸೀಮಾ ಗಡಿಯನ್ನು ಗುರುತಿಸಿ ಅಧಿಸೂಚಿಸಲಾಗಿದೆ. ಕ್ಷೇತ್ರಗಳ ಮೀಸಲು ನಿಗದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅದು ಪೂರ್ಣಗೊಂಡ ನಂತರ ಚುನಾವಣೆ ನಡೆಸಲಾಗುವುದೆಂದರು.

Zilla Panchayat And Taluk Panchayat Elections Will Be Held Soon Priyank Kharge

ವಿಧಾನಸಭಾ ಅಧಿವೇಶನದಲ್ಲಿಂದು 9 ವಿಧೇಯಕಗಳ ಮಂಡನೆ

ವಿಧಾನಸಭೆಯ ಅಧಿವೇಶನದಲ್ಲಿಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾದ ಹೆಚ್.ಕೆ. ಪಾಟೀಲ್ ಅವರು 2025 ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ (ತಿದ್ದುಪಡಿ)ವಿಧೇಯಕ,2025 ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ)ವಿಧೇಯಕ,2025 ನೇ ಸಾಲಿನ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ,2025 ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ)ವಿಧೇಯಕ.

2025 ನೇ ಸಾಲಿನ ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2025 ನೇ ಸಾಲಿನ ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ,2025 ನೇ ಸಾಲಿನ ಕರ್ನಾಟಕ ಮುನಿಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ,2025 ನೇ ಸಾಲಿನ ಕರ್ನಾಟಕ ದೇವದಾಸಿ (ಪ್ರತಿಬಂಧಕ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ ಹಾಗೂಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರು 2025 ನೇ ಸಾಲಿನ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಮಯ ಹಾಗೂ ನಿಯಂತ್ರಣ)(ತಿದ್ದುಪಡಿ)ವಿಧೇಯಕ ಪ್ರಸ್ತಾವನೆಯನ್ನು ಮಂಡಿಸಿದರು. ನಂತರ ಪ್ರಸ್ತಾವನೆಗಳನ್ನು ಅಂಗೀಕರಿಸಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವ ಪೌರಾಡಳಿತ ಸಚಿವ ರಹೀಂ ಖಾನ್, ಅನಧಿಕೃತವಾಗಿ ತ್ಯಾಜ್ಯವನ್ನು ಸುರಿಯುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೋಲಾರದ ಕೆಂದಟ್ಟಿ ಗ್ರಾಮದ ಹತ್ತು ಎಕರೆ ಜಮೀನಿನಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕವನ್ನು ಸ್ಥಾಪಿಸಲಾಗಿದ್ದು, ಕೋಲಾರ ನಗರಸಭೆ ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣೆಯನ್ನು ಆ ಮೂಲಕ ನಿರ್ವಹಿಸಲಾಗುತ್ತಿದೆ. ಪ್ರತಿ ನಿತ್ಯ 35 ಟನ್ ಹಸಿ ತ್ಯಾಜ್ಯವನ್ನು ಸಂಸ್ಕರಿಸಿ ಕೋಲಾರ ಅಗ್ರಿಗೋಲ್ಡ್ ಬ್ರಾಂಡ್ ಹೆಸರಿನಲ್ಲಿ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಇದರ ಜೊತೆಗೆ ಮಣಿಘಟ್ಟ ರಸ್ತೆಯ ಬಳಿ ಹಾಗೂ ಕೆಂದಟ್ಟಿಯ ಸಂಗ್ರಹಣಾ ಘಟಕದಲ್ಲಿ ತ್ಯಾಜ್ಯವನ್ನು ಸಂಸ್ಕರಿಸಿ ಮರು ಬಳಕೆದಾರರಿಗೆ ಮಾರಾಟ ಮಾಡಿ ಬಂದ ಹಣವನ್ಬು ನಗರಸಭೆಗೆ ಪಾವತಿ ಮಾಡಿಕೊಳ್ಳಲಾಗುತ್ತಿದೆ ಎಂದರು

ನಿರಂತರವಾಗಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹಾಗಿದ್ದೂ ಅನಧಿಕೃತವಾಗಿ ಹೆಚ್ಚು ತ್ಯಾಜ್ಯ ಸುರಿಯುತ್ತಿರುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜೊತೆಗೆ ದಂಡ ಸಹ ವಿಧಿಸಲಾಗುತ್ತಿದ್ದು, ಮುಂದುವರೆದು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಚಿವ ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+