ಜಿ.ಪಂ-ತಾ.ಪಂ ಚುನಾವಣೆ ಬಾಕಿ: ಕ್ಷೇತ್ರ ಪುನರ್ ವಿಂಗಡಣೆಗೆ 10 ದಿನದಲ್ಲಿ ಅಧಿಸೂಚನೆ: ಸರ್ಕಾರ

ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ 10 ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರವು ಮಂಗಳವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬೆಂಗಳೂರು, ಫೆಬ್ರವರಿ 14: ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಯುವುದು ಬಾಕಿ ಇದೆ. ಈ ಸಂಬಂಧ ಮುಂದಿನ ಹತ್ತು ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಜಿಲ್ಲಾ, ತಾಲೂಕು ಪಂಚಾಯಿತಿ ಕ್ಷೇತ್ರ ವಿಂಗಡಣೆ ಕುರಿತು ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ಮಂಗಳವಾರ ನಡೆಯಿತು. ಈ ವೇಳೆ ನ್ಯಾಯಪೀಠಕ್ಕೆ ಸರ್ಕಾರ ಪರ ಹಿರಿಯ ವಕೀಲರಾದ ಎಜಿ ಪ್ರಭುಲಿಂಗ್ ನಾವದಗಿ ಅವರು ವಾದ ಮಾಡಿದರು. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯ ಕ್ಷೇತ್ರ ಪುನರ್ ವಿಂಗಡಣೆಗಾಗಿ 10 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ತಿಳಿಸಿದರು.

Zilla-Taluka Panchayat Election: Notification for constituency allocation will be issued in 10 days

ರಾಜ್ಯ ಸರ್ಕಾರಕ್ಕೆ ಕಳೆದ ತಿಂಗಳು ಜನವರಿ 30ರಂದು ಕ್ಷೇತ್ರ ಪುನರ್ ವಿಂಗಡಣೆ ಕುರಿತು ಸಮಿತಿಯ ವರದಿಯೊಂದನ್ನು ನೀಡಲಾಗಿದೆ. ಆ ವರದಿಯನ್ವಯಸಿ ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ. ಸಾರ್ವಜನಿಕರ ಆಕ್ಷೇಪಣೆಗಳನ್ನು ಪರಿಗಣಿಸಲಾಗುತ್ತದೆ ಎಂದು ಅವರು ವಿವರಿಸಿದರು.

ಸರ್ಕಾರದ ಪರ ವಾದ ಹಾಗೂ ಮಾಹಿತಿ ದಾಖಲಿಸಿಕೊಂಡ ಹೈಕೋರ್ಟ್ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಎರಡು ವಾರ ಮುಂದೂಡಿ ಆದೇಶಿಸಿತು.

Zilla-Taluka Panchayat Election: Notification for constituency allocation will be issued in 10 days

ಈ ಹಿಂದೊಮ್ಮೆ ಇದೇ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಐದು ಲಕ್ಷ ರೂಪಾಯಿ ದಂಡ ವಿಧಿಸಿತ್ತು. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿದಂತೆ ಇತರೆ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಬೇಕಿತ್ತು. ಈ ನಿಟ್ಟಿನಲ್ಲಿ ವಿಫಲವಾಗಿದ್ದ ರಾಜ್ಯ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್ ಹೈಕೋರ್ಟ್ ನ್ಯಾಯಪೀಠ ರೂಪಾಯಿ 5 ಲಕ್ಷ ದಂಡ ವಿಧಿಸಿತ್ತು. ಅಷ್ಟೇ ಅಲ್ಲದೇ ಪ್ರಕ್ರಿಯೆ ಪೂರ್ಣಗೊಳಿಸಲು ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗಕ್ಕೆ ಫೆಬ್ರವರಿವರೆಗೆ ಕಾಲಾವಕಾಶ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+