ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಫಲಿತಾಂಶ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಿಷ್ಟು

|
Google Oneindia Kannada News

ಬೆಂಗಳೂರು, ಫೆಬ್ರವರಿ 22 : 'ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಜಿಲ್ಲಾ ಪಂಚಾಯಿತಿಯಲ್ಲಿ 16 ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಮತದಾರರು ನೀಡಿದ ತೀರ್ಪಿಗೆ ತಲೆ ಬಾಗುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ, ಮಂಗಳವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು, 'ಈ ಫಲಿತಾಂಶ ಸರ್ಕಾರದ ಕಾರ್ಯಕ್ರಮಗಳಿಗೆ ಮಾನದಂಡವಲ್ಲ. ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಸ್ಥಳೀಯ ವಿಷಯಗಳ ಬಗ್ಗೆ ಚರ್ಚೆಯಾಗುತ್ತದೆ' ಎಂದು ತಿಳಿಸಿದರು. [ಚುನಾವಣಾ ಫಲಿತಾಂಶ : ಜೆಡಿಎಸ್ ಪ್ರತಿಕ್ರಿಯೆ]

siddaramaiah

'ಬಜೆಟ್ ಅಧಿವೇಶನದ ನಂತರ ಸಚಿವ ಸಂಪುಟ ಪುನಾರಚನೆ ಮಾಡುತ್ತೇನೆ' ಎಂದು ಹೇಳಿದ ಸಿದ್ದರಾಮಯ್ಯ ಅವರು, ಅತಂತ್ರ ಫಲಿತಾಂಶ ಬಂದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲು ಪಕ್ಷೇತರ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸಲಾಗುತ್ತದೆ' ಎಂದು ಹೇಳಿದರು. [ಜಿಲ್ಲಾ ಪಂಚಾಯತ್ ಚುನಾವಣೆ ಗೆದ್ದವರು ಯಾರು?]

ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ಮುಖ್ಯಾಂಶಗಳು

* ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. 16 ರಿಂದ 20 ಸ್ಥಾನಗಳಲ್ಲಿ ಜಯಗಳಿಸುವ ವಿಶ್ವಾಸವಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲವು ಬಾರಿ ನಿರೀಕ್ಷೆಗಳು ನಿಜವಾಗುವುದಿಲ್ಲ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. [ತಾಲೂಕು ಪಂಚಾಯಿತಿ ಚುನಾವಣೆ ಫಲಿತಾಂಶ]

* 1080 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ 496 ಸ್ಥಾನಗಳು ಬಂದಿವೆ. ಬಿಜೆಪಿಗೆ 410 ಸ್ಥಾನಗಳು ಬಂದಿವೆ. ಜೆಡಿಎಸ್‌ಗೆ 104 ಸ್ಥಾನ ಸಿಕ್ಕಿದೆ. ತಾಲೂಕು ಪಂಚಾಯಿತಿಯಲ್ಲಿ 1700 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದೆ.

* ಈ ಫಲಿತಾಂಶ ಸರ್ಕಾರದ ಕಾರ್ಯಗಳನ್ನು ಅಳೆಯಲು ಮಾನದಂಡವಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವ್ಯಕ್ತಿ, ಜಾತಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತದೆ. ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬೇರೆ-ಬೇರೆ ವಿಚಾರದ ಬಗ್ಗೆ ಚರ್ಚೆ ನಡೆಯುತ್ತದೆ. ಅದರಂತೆ ಮತದಾನ ನಡೆಯುತ್ತದೆ.

* ಫಲಿತಾಂಶದ ಮೂಲಕ ನಮ್ಮ ಸರ್ಕಾರದ ಮೇಲೆ ಜನರು ವಿಶ್ವಾಸವಿಟ್ಟುಕೊಂಡಿದ್ದಾರೆ ಎಂಬುದು ಖಚಿತವಾಗಿದೆ. ನಾವು ಜನತೆಯ ಆಶೋತ್ತರಗಳಿಗೆ ಮತ್ತಷ್ಟು ಸ್ಪಂದಿಸಿ ಜನರಿಗೆ ಹತ್ತಿರವಾಗಬೇಕಾದ ಅಗತ್ಯವನ್ನು ಮನವರಿಕೆ ಮಾಡಿದೆ. ಇದರಂತೆ ಮುಂದಿನ ದಿನಗಳಲ್ಲಿ ಸರ್ಕಾರವು ಜನರ ಸಮಸ್ಯೆಗಳಿಗೆ ಹೆಚ್ಚು ಸ್ಪಂದಿಸುತ್ತಾ ಉತ್ಸಾಹದಿಂದ ಕೆಲಸ ಮಾಡುತ್ತಾ, ಜನರ ಸಂಪೂರ್ಣ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತದೆ.

* ಅತಂತ್ರ ಫಲಿತಾಂಶ ಬಂದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲು ಪಕ್ಷೇತರ ಅಭ್ಯರ್ಥಿಗಳ ಜೊತೆ ಮಾತುಕತೆ ನಡೆಸುತ್ತೇವೆ. ಸ್ಥಳೀಯ ಮಟ್ಟದ ನಾಯಕರು ಈ ಕುರಿತು ಅಂತಿಮ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ.

* ಬಜೆಟ್ ಅಧಿವೇಶನದ ನಂತರ ಸಚಿವ ಸಂಪುಟ ಪುನಾರಚನೆ ಮಾಡುತ್ತೇನೆ. ಈ ಫಲಿತಾಂಶಕ್ಕೂ ಅದಕ್ಕೂ ಸಂಬಂಧವಿಲ್ಲ. ಮೊದಲು ಘೋಷಣೆ ಮಾಡಿದಂತೆ ಪುನಾರಚನೆ ಮಾಡಲಾಗುತ್ತದೆ.

English summary
After taluk and Zilla panchayat election result, Karnataka Chief Minister Siddaramaiah addressed press conference in Bengaluru on Tuesday 23rd Feb 2016, Here is highlights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X