ZP, TP Elections 2027: ರಾಜ್ಯದಲ್ಲಿ ಜಿಪಂ, ತಾಪಂ ಚುನಾವಣೆಗೆ ಮುಹೂರ್ತ ಫಿಕ್ಸ್!

ಬೆಂಗಳೂರು: ರಾಜ್ಯದಲ್ಲಿ ಬಹಳ ದಿನಗಳಿಂದ ಮುಂದೂಡಲ್ಪಟ್ಟಿರುವ ಜಿಲ್ಲಾ ಪಂಚಾಯತಿ (ಜಿಪಂ) ಮತ್ತು ತಾಲೂಕು ಪಂಚಾಯತಿ (ತಾಪಂ) ಚುನಾವಣೆ ನಡೆಸಲು ಸಿದ್ಧತೆಗಳು ಚುರುಕುಗೊಂಡಿವೆ. ರಾಜ್ಯ ಸರ್ಕಾರ ಜಿಪಂ ಮತ್ತು ತಾಪಂ ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಮುಂಬರುವ ಜನವರಿ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ZP TP Elections 2027 Karnataka Zilla Panchayat and Taluk Panchayat Polls Likely in January eshwar kendra

30 ಜಿಲ್ಲೆಗಳ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮ

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರ ಬಿ. ಖಂಡ್ರೆ, ರಾಜ್ಯದ 30 ಜಿಲ್ಲೆಗಳ ಒಟ್ಟು 1,101 ಜಿಲ್ಲಾ ಪಂಚಾಯತಿ ಕ್ಷೇತ್ರಗಳು ಹಾಗೂ 234 ತಾಲೂಕು ಪಂಚಾಯತಿಗಳ 3,580 ಸದಸ್ಯ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದರು.

ಈ ಮೂಲಕ ಜಿಪಂ ಮತ್ತು ತಾಪಂ ಚುನಾವಣೆ ನಡೆಸಲು ರಾಜ್ಯ ಸರ್ಕಾರದ ಕಡೆಯಿಂದ ಅಗತ್ಯ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಮುಂದಿನ ಹಂತದಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ ಮತದಾನ ಪ್ರಕ್ರಿಯೆ ನಡೆಸಲಿದೆ ಎಂದು ಹೇಳಿದರು.

ಹಿರಿಯೂರು ಚುನಾವಣೆ ಡಿಕೆಶಿಗೆ ಪ್ರತಿಷ್ಠೆಯ ಕಣ: ₹2,000 ಕೋಟಿ ಅನುದಾನ, 3 ಸಾವಿರ ಮನೆ, 17,434 ನಿವೇಶನ ಘೋಷಣೆ!
ಹಿರಿಯೂರು ಚುನಾವಣೆ ಡಿಕೆಶಿಗೆ ಪ್ರತಿಷ್ಠೆಯ ಕಣ: ₹2,000 ಕೋಟಿ ಅನುದಾನ, 3 ಸಾವಿರ ಮನೆ, 17,434 ನಿವೇಶನ ಘೋಷಣೆ!

2022ರಲ್ಲೇ ಅವಧಿ ಪೂರ್ಣ, ಚುನಾವಣೆ ವಿಳಂಬವೇಕೆ?

ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳ ಅವಧಿ 2022ರಲ್ಲಿಯೇ ಪೂರ್ಣಗೊಂಡಿತ್ತು. ಆದರೆ ಹಿಂದಿನ ಸರ್ಕಾರದ ಅವಧಿಯಲ್ಲಿ ಚುನಾವಣೆ ನಡೆದಿರಲಿಲ್ಲ. ಬಳಿಕ ರಾಜ್ಯದಲ್ಲಿ ಆಡಳಿತ ಬದಲಾವಣೆಯಾದ ನಂತರ ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಹಲವು ಪ್ರಕ್ರಿಯೆಗಳು ಎದುರಾದವು ಎಂದು ಸಚಿವರು ವಿವರಿಸಿದರು.

ರಾಜ್ಯ ಸರ್ಕಾರ ಕೆಲವು ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸಿತ್ತು. ಇದರ ಜತೆಗೆ ಕೆಲವು ಗ್ರಾಮ ಪಂಚಾಯತಿ ಕ್ಷೇತ್ರಗಳು ನಗರಸಭೆ, ನಗರಪಾಲಿಕೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗಿದ್ದವು. ಈ ಬದಲಾವಣೆಗಳಿಂದಾಗಿ ಹಳೆಯ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವ್ಯತ್ಯಾಸ ಉಂಟಾಗಿತ್ತು. ಹೀಗಾಗಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡುವುದು ಅನಿವಾರ್ಯವಾಗಿತ್ತು. ಈ ಕಾರಣದಿಂದ ಚುನಾವಣೆ ಪ್ರಕ್ರಿಯೆ ವಿಳಂಬವಾಯಿತು ಎಂದು ಖಂಡ್ರೆ ಸ್ಪಷ್ಟಪಡಿಸಿದರು.

2028ರ ಚುನಾವಣೆ: ಕೊನೆಗೂ ರಾಜ್ಯ ರಾಜಕಾರಣಕ್ಕೆ ಎಚ್‌.ಡಿ. ಕುಮಾರಸ್ವಾಮಿ ರೀ-ಎಂಟ್ರಿ? ಹೆಚ್‌ಡಿಕೆ ಹೇಳಿದ್ದೇನು?
2028ರ ಚುನಾವಣೆ: ಕೊನೆಗೂ ರಾಜ್ಯ ರಾಜಕಾರಣಕ್ಕೆ ಎಚ್‌.ಡಿ. ಕುಮಾರಸ್ವಾಮಿ ರೀ-ಎಂಟ್ರಿ? ಹೆಚ್‌ಡಿಕೆ ಹೇಳಿದ್ದೇನು?

ಜನವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ

ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದೆ. ಇನ್ನು ಚುನಾವಣೆ ನಡೆಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ್ದಾಗಿದೆ. ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದರು. ಬಹುತೇಕ ಜನವರಿ ತಿಂಗಳಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ

ಗ್ರಾಮೀಣ ಭಾಗದಲ್ಲಿ ರಾಜಕೀಯವಾಗಿ ಮಹತ್ವ ಹೊಂದಿರುವ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಂಪೂರ್ಣ ಸಜ್ಜಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು. ಮೀಸಲಾತಿ ಅಧಿಸೂಚನೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಲಿವೆ. ಹಲವು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿದ್ದ ಸ್ಥಳೀಯ ಸಂಸ್ಥೆಗಳಿಗೆ ಮತ್ತೆ ಜನಪ್ರತಿನಿಧಿಗಳು ಆಯ್ಕೆಯಾಗುವ ನಿರೀಕ್ಷೆ ಮೂಡಿದೆ.

ಮಾನವ-ಆನೆ ಸಂಘರ್ಷಕ್ಕೆ "ಆನೆಧಾಮ'' ಪರಿಹಾರ

ರಾಜ್ಯದ ಕಾಡಿನಂಚಿನ ಗ್ರಾಮಗಳಲ್ಲಿನ ಆನೆ-ಮಾನವ ಸಂಘರ್ಷಕ್ಕೆ ಆನೆಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಪರಿಹಾರವಾಗಬಲ್ಲದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ತೋಟಗಳಲ್ಲೇ ಹುಟ್ಟಿ, ತೋಟದಲ್ಲೇ ಬೆಳೆಯುವ ಆನೆಗಳಿಂದ ಸಮಸ್ಯೆ ಹೆಚ್ಚಾಗಿದೆ. ಇಂತಹ ಆನೆಗಳನ್ನು ಆನೆಧಾಮದಲ್ಲಿ ಬಿಟ್ಟರೆ ಸಮಸ್ಯೆ ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು. ರಾಮಲಿಂಗಾರೆಡ್ಡಿ ಅವರು ಹಿರಿಯ ಮತ್ತು ಅನುಭವಿ ಸಚಿವರಾಗಿದ್ದು, ಅವರು ಈಗಾಗಲೇ ಸಬೆ ನಡೆಸುವುದಾಗಿ ತಿಳಿಸಿದ್ದಾರೆ. ಅವರು ಈ ಸಮಸ್ಯೆಗೆ ಪರಿಹಾರ ಒದಗಿಸುತ್ತಾರೆ ಎಂದು ತಿಳಿಸಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+