ಕಾರವಾರದಲ್ಲಿ ಬೃಹತ್ ರಾಷ್ಟ್ರ ಧ್ವಜ ಮೆರವಣಿಗೆ
ಕಾರವಾರ, ಜನವರಿ 26: ಗಣರಾಜ್ಯೋತ್ಸವದ ಅಂಗವಾಗಿ ಕಾರವಾರದ ಮಾಲಾದೇವಿ ಮೈದಾನದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ನಗರದಲ್ಲಿ 1 ಕಿ.ಮೀ. ಉದ್ದದ ಬೃಹತ್ ರಾಷ್ಟ್ರ ಧ್ವಜವನ್ನು ಮೆರವಣಿಗೆ ನಡೆಸಲಾಯಿತು.
ಕರಾವಳಿಯ ಭಾಗದಲ್ಲಿ ಇದೇ ಮೊದಲ ಬಾರಿಗೆ ಹಮ್ಮಿಕೊಂಡ ಅತೀ ಉದ್ದದ ರಾಷ್ಟ್ರ ಧ್ವಜದ ಮೆರವಣಿಗೆ ಇದಾಗಿದ್ದು, ಎನ್ಎಸ್ ಯುಐ ರಾಜ್ಯ ಕಾರ್ಯದರ್ಶಿ ಸಿದ್ಧಾರ್ಥ ನಾಯಕ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು.
ಸಾರ್ವಜನಿಕರಲ್ಲಿ ದೇಶಪ್ರೇಮ ಉತ್ತೇಜಿಸಲು ಈ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ಸೇರಿದಂತೆ ಸುಮಾರು ಮೂರು ಸಾವಿರ ಮಂದಿ ಭಾಗವಹಿಸಿದ್ದರು.

ಬೃಹತ್ ರಾಷ್ಟ್ರಧ್ವಜವನ್ನು ಮನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ರಾಷ್ಟ್ರಧ್ವಜದ ಚಿತ್ರಗಳನ್ನು ತೆಗೆಯಲು ಸಾರ್ವಜನಿಕರು, ಮಾಧ್ಯಮದವರು ಮುಗಿಬಿದ್ದರು.













Click it and Unblock the Notifications