ಕಾರವಾರ; 2,220 ಕೆ.ಜಿ ಗೋಮಾಂಸ ಸಾಗಾಟ; ಐವರು ಆರೋಪಿಗಳು ಅಂದರ್
ಕಾರವಾರ, ಅಕ್ಟೋಬರ್ 02: ಹುಬ್ಬಳ್ಳಿಯಿಂದ ಗೋವಾಕ್ಕೆ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಮೂರು ವಾಹನ ಸಹಿತ ಐವರು ಆರೋಪಿಗಳನ್ನು ಜೊಯಿಡಾದ ಅನಮೋಡ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯಿಂದ ಗೋವಾ ಕಡೆಗೆ ಹಸುಗಳನ್ನು ವಧೆ ಮಾಡಿ ಮಾಂಸವನ್ನು ಎರಡು ಮಹೀಂದ್ರ ಬುಲೆರೋ ಹಾಗೂ ಒಂದು ಟಾಟಾ ವಾಹನದಲ್ಲಿ ಸಾಗಿಸುತ್ತಿದ್ದರು. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ನಾ ಫೆನ್ನೇಕರ್ ಅವರಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಅದರಂತೆ ಪಿಎಸ್‌ಐ ಪ್ರಮೇನಗೌಡ ಪಾಟೀಲ್ ನೇತೃತ್ವದಲ್ಲಿ ರಾಮನಗರ ಪಿಎಸ್‌ಐ ಯಲ್ಲಾಲಿಂಗ ಕುನ್ನೂರು ಮತ್ತು ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.
ಬೆಳಗ್ಗೆ 5:30ರ ಸುಮಾರಿಗೆ ಕಾರ್ಯಾಚರಣೆ
ಬೆಳಗ್ಗೆ 5:30ರ ಸುಮಾರಿಗೆ ಪೊಲೀಸ್ ತಂಡ ಜೊಯಿಡಾದ ಅನಮೋಡ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ಕಾಯುತ್ತಿದ್ದ ವೇಳೆ ಮಾಂಸ ತುಂಬಿಕೊಂಡಿದ್ದ ಮೂರು ವಾಹನಗಳು ಸಾಲಿನಲ್ಲಿ ಬಂದಿದೆ. ಈ ವೇಳೆ ಅವುಗಳನ್ನು ತಡೆದು ಪರಿಶೀಲಿಸಿದಾಗ ತಮ್ಮ ಬಳಿ ಮಾಂಸ ಸಾಗಾಟದ ಪರವಾನಗಿ ಇದೆ ಎಂದು ಹೇಳಿ ಆರೋಪಿತರು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ದಾಖಲೆಗಳು ಇರಲಿಲ್ಲ ಎನ್ನುವುದು ವಿಚಾರಣೆಯ ವೇಳೆಗೆ ತಿಳಿದುಬಂದಿದೆ. ತಕ್ಷಣ ಮೂರು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು, 3.10 ಲಕ್ಷ ರೂಪಾಯಿ ಮೌಲ್ಯದ 2,220 ಕೆ.ಜಿ ದನದ ಮಾಂಸ ಜಪ್ತಿ ಮಾಡಿಕೊಂಡಿದ್ದಾರೆ. ಪ್ರಕರಣದಲ್ಲಿ ಅಳ್ನಾವರದ ಸಾದಿಕ್, ಇಲಿಯಾಸ್, ದಾವಲ್, ಖಾನಾಪುರದ ರಾಜಾಸಾಬ ಹಾಗೂ ಶಾಹೀದ್ ಗುಡುಸಾಬ ಎನ್ನುವವರನ್ನು ವಶಕ್ಕೆ ಪಡೆಯಲಾಗಿದೆ.

ಅಕ್ರಮ ಗೋಮಾಂಸ ಸಾಗಾಟ; ಕೇಸ್ ದಾಖಲು
ಆರೋಪಿಗಳ ವಿರುದ್ಧ ಕರ್ನಾಟಕ ಗೋಹತ್ಯೆ ತಡೆ ಕಾಯ್ದೆ- 2020ರ ಕಲಂ 4, 7, 12 ಮತ್ತು ಮೋಟಾರು ವಾಹನ ಕಾಯ್ದೆ 192 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ಪೊಲೀಸ್ ಠಾಣೆಯ ತನಿಖಾ ಪಿಎಸ್‌ಐ ಲಕ್ಷ್ಮಣ ಪೂಜಾರಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ. ಗಾಂಧಿ ಜಯಂತಿಯಂದು ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟ ನಿಷೇಧ ಇರುತ್ತದೆ. ಹೀಗಾಗಿ ನಿನ್ನೆ ತಡರಾತ್ರಿಯೇ ಹಸುಗಳನ್ನು ಹುಬ್ಬಳ್ಳಿಯಲ್ಲಿ ವಧೆ ಮಾಡಿದ್ದಾರೆ. ಇಂದು ಗಾಂಧಿ ಜಯಂತಿ ಆಗಿರುವುದರಿಂದ ಮಾಂಸದ ಬಗ್ಗೆ ಯಾರಿಗೂ ಅನುಮಾನ ಬರಲ್ಲ ಎಂಬ ಆಲೋಚನೆಯಲ್ಲಿ ಆರೋಪಿಗಳು ಮಾಂಸ ಸಾಗಿಸುತ್ತಿದ್ದರು ಎನ್ನಲಾಗಿದೆ.

ಅದರಲ್ಲೂ, ಹುಬ್ಬಳ್ಳಿ ಭಾಗದಿಂದ ಗೋವಾಕ್ಕೆ ತರಕಾರಿ ವಾಹನಗಳು ನಿರಂತರವಾಗಿ ಓಡಾಡುತ್ತಿರುವೆ. ಭಾನುವಾರ ಈ ವಾಹನಗಳ ಸಂಖ್ಯೆ ಹೆಚ್ಚಾಗಿಯೇ ಇರುತ್ತದೆ. ಈ ನೆಪದಲ್ಲಿ ಆರೋಪಿಗಳು ಮಾಂಸ ಸಾಗಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಸಾಮಾನ್ಯವಾಗಿ ಇಂತಹ ಅಕ್ರಮ ಮಾಂಸ ಸಾಗಾಟಕಾರರು ಒಂದು ವಾಹನದಲ್ಲಿ ಮಾಂಸ ಸಾಗಿಸಿ, ಅದು ತಮ್ಮ ನಿಗದಿತ ಸ್ಥಳ ತಲುಪಿದ ಬಳಿಕ ಮತ್ತೊಂದು ವಾಹನ ಕಳುಹಿಸುತ್ತಾರೆ. ಆದರೆ ಇದೇ ಮೊದಲ ಬಾರಿಗೆ ಮೂರೂ ವಾಹನಗಳನ್ನು ಸರದಿಯಲ್ಲಿ ಕಳುಹಿಸಿದ್ದು, ದಂಧೆಕೋರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂರೂ ವಾಹನದಲ್ಲಿ ಸಾಗಿಸುತ್ತಿದ್ದ ಮಾಂಸ ಕೂಡ ಒಬ್ಬನೇ ಮಾಲಕನಿಗೆ ಸೇರಿದ್ದು ಎಂದು ತನಿಖೆಯಲ್ಲಿ ಬಯಲಾಗಿದೆ. ಸದ್ಯ ಪೊಲೀಸರು ಅಕ್ರಮ ಕಸಾಯಿ ಖಾನೆ ಹಾಗೂ ಮೂಲ ದಂಧೆಕೋರನ ಪತ್ತೆಗೆ ಶೋಧ ಮುಂದುವರೆಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications