ಕುಮಟಾ: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ

By: ಕಾರವಾರ ಪ್ರತಿನಿಧಿ
Subscribe to Oneindia Kannada

ಕುಮಟಾ, ನವೆಂಬರ್ 11: ಸಮದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜೀವರಕ್ಷಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ.

ಬೆಂಗಳೂರಿನಿಂದ ಏಳು ಜನ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಕಡಲ ತೀರದಲ್ಲಿ ನೀರಿಗೆ ಇಳಿದಾಗ ಅಲೆಗೆ ಎರಡು ಜನ ಕೊಚ್ಚಿಹೋಗಿದ್ದರು.

2 students are rescued in Gokarna beach in Kumata, Uttara Kannada

ಈ ಸಂದರ್ಭದಲ್ಲಿ ಸಮಯ ಪ್ರಜ್ಞೆ ಮೆರೆದ ಜೀವರಕ್ಷಕ ಸಿಬ್ಬಂದಿ ಮೋಹನ್ ಅಂಬಿ, ರಾಜು ಅಂಬಿ, ಚಂದ್ರಕಾಂತ್ ಹಾಗೂ ಪುರುಷೋತ್ತಮ್ ಹರಿಕಾಂತ್ ಎಂಬುವವರು ಉತ್ತರ ಪ್ರದೇಶ ಮೂಲದ ರಮೇಶ್ ಯಾದವ್, ಮದ್ಯಪ್ರದೇಶ ಮೂಲದ ಕಮಲೇಶ್ ಕುಮಾರ್ ರನ್ನು ರಕ್ಷಿಸಿದ್ದಾರೆ ಈ ಸಂಬಂಧ ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
2 students are rescued in Gokarna beach in Kumata taluk in Uttara Kannada district. 7 students from Bengaluru went to Gokarna for tour.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ