ಅಂಕೋಲಾದ ಮೋದಿ ಕಾರ್ಯಕ್ರಮಕ್ಕೆ 485 ಬಸ್ ಬುಕ್ಕಿಂಗ್: ಪ್ರಯಾಣಿಕರಿಗೆ ತೊಂದರೆ ಸಾಧ್ಯತೆ
ಕಾರವಾರ, ಮೇ 2: ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬರದ ಸಿದ್ದತೆ ನಡೆಸಲಾಗುತ್ತಿದೆ. ಸಮಾವೇಶಕ್ಕೆ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ನಾನಾ ಭಾಗಗಳಿಂದ ಜನಸಾಗರವೇ ಹರಿದುಬರುವ ನಿರೀಕ್ಷೆ ಇರುವ ಹಿನ್ನಲೆಯಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿನ ಸುಮಾರು 485ಕ್ಕೂ ಹೆಚ್ಚು ಬಸ್‌ಗಳನ್ನು ಕಾಯ್ದಿರಿಸಿದ್ದು, ಜಿಲ್ಲೆಯಲ್ಲಿ ಬಸ್ ಕೊರತೆ ಎದುರಾಗಲಿದೆ.
ಮೇ.3 ರಂದು ಅಂಕೋಲಾದ ಹಟ್ಟಿಕೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಮಾವೇಶಕ್ಕೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 40 ಎಕರೆಗೂ ಹೆಚ್ಚು ವಿಸ್ತಾರವಾದ ಪ್ರದೇಶದಲ್ಲಿ ಪ್ರಚಾರ ವೇದಿಕೆ, ಹೆಲಿಪ್ಯಾಡ್, ಆಸನ ವ್ಯವಸ್ಥೆಗಳನ್ನು ಸಿದ್ಧಪಡಿಸಲಾಗಿದೆ. ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಸೇರುವ ನಿರೀಕ್ಷೆ ಇರುವ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳಲ್ಲಿನ ಸುಮಾರು 485ಕ್ಕೂ ಹೆಚ್ಚು ಬಸ್‌ಗಳನ್ನು ಕಾಯ್ದಿರಿಸಲಾಗಿದೆ.

ಜಿಲ್ಲೆಯಲ್ಲಿ 550 ಬಸ್‌ಗಳಿದ್ದು ಅದರಲ್ಲಿ ಪ್ರಚಾರ ಸಮಾವೇಶಕ್ಕೆ ತೆರಳಲು 175 ಬಸ್ ಕಾಯ್ದಿರಿಸಲಾಗಿದೆ. ಇದಲ್ಲದೆ ಧಾರವಾಡ, ಹಾವೇರಿ, ಮಂಗಳೂರು, ಶಿವಮೊಗ್ಗ ಸೇರಿದಂತೆ ಇತರೆ ವಿಭಾಗದಿಂದಲೂ ಸುಮಾರು 310 ಬಸ್‌ಗಳನ್ನು ಈಗಾಗಲೇ ಕಾಯ್ದಿರಿಸಲಾಗಿದೆ. ಅಲ್ಲದೆ ಇನ್ನು ಕೂಡ ಬುಕಿಂಗ್ ಮಾಡುತ್ತಿರುವುದರಿಂದ ಹೆಚ್ಚಾಗುವ ಸಾಧ್ಯತೆ ಕೂಡ ಇದೆ ಎಂದು ಡಿಪೋ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಸ್ಥಳೀಯವಾಗಿ ಸಂಚಾರ ಮಾಡುವ ಬಸ್‌ಗಳು ಎಂದಿನಂತೆ ಸಂಚಾರ ಮಾಡಲಿವೆ. ಆದರೆ ಹೊರ ಭಾಗಗಳಿಗೆ ತೆರಳುವ ಕೆಲ ಬಸ್‌ಗಳನ್ನು ಪ್ರಧಾನಿ ಸಮಾವೇಶಕ್ಕೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಜನರಿಗೆ ಸ್ವಲ್ಪ ತೊಂದರೆಯಾಗುವ ಸಾಧ್ಯತೆ ಇದೆ. ಆದರೆ ಇತರೆ ಬಸ್‌ಗಳ ಮೂಲಕ ವ್ಯವಸ್ಥೆ ಕಲ್ಪಿಸುವುದಾಗಿ ಶಿರಸಿ ವಿಭಾಗದ ನಿಯಂತ್ರಣಾಧಿಕಾರಿ ಕೆ.ಎಚ್ ಶ್ರೀನಿವಾಸ್ ತಿಳಿಸಿದರು.

ಇಂದು ಕೂಡ ಬಸ್ ವ್ಯತ್ಯಯ
ಇನ್ನು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ನೇಮಕವಾಗಿರುವ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಸಂಬಂಧಿತ ಮೇ.2 ರಂದು ಜಿಲ್ಲಾ ಕೇಂದ್ರ ಕಾರವಾರ ಸೇರಿದಂತೆ ವಿವಿಧೆಡೆಯಿಂದ ತೆರಳಲು ಶಿರಸಿ ವಿಭಾಗದಿಂದ ಸುಮಾರು 80 ಬಸ್‌ಗಳನ್ನು ಬುಕ್ ಮಾಡಲಾಗಿದೆ. ಅಲ್ಲದೇ ದಾಂಡೇಲಿ ವಿಭಾಗದಿಂದಲೂ 13 ಬಸ್ ಬುಕ್ ಮಾಡಲಾಗಿದೆ. ಚುನಾವಣಾ ತರಬೇತಿಗೆ ತೆರಳುವುದರಿಂದ ಸಂಜೆವರೆಗೂ ಆಯಾ ಭಾಗದಲ್ಲಿಯೇ ಇರುವ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ ಬಸ್ ಕೊರತೆ ಎದುರಾಗುವ ಸಾಧ್ಯತೆ ಇದೆ.
ಸಮಾವೇಶಕ್ಕೆ ಜನ ಸೇರಿಸುವ ಗುರಿ
ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಜನ ಸೇರಿಸುವ ಗುರಿಯನ್ನು ಎಲ್ಲ ಬಿಜೆಪಿ ಅಭ್ಯರ್ಥಿಗಳು ಹಾಗೂ ನಾಯಕರ ಹೆಗಲಿಗೆ ಹಾಕಲಾಗಿದೆ. ಲಕ್ಷಕ್ಕೂ ಅಧಿಕ ಮಂದಿ ಸೇರಿಸುವ ಟಾರ್ಗೇಟ್ ನೀಡಲಾಗಿದೆ ಎನ್ನಲಾಗಿದ್ದು ಇದರಿಂದ ಪ್ರತಿ ಹಳ್ಳಿ ಹಳ್ಳಿಗಳಿಗೂ ಬಸ್ ಕಳುಹಿಸಿ ಜನರನ್ನು ಕರೆತರುವ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಾಧ್ಯತೆ
ಇನ್ನು ಜಿಲ್ಲೆಯಲ್ಲಿ ಎರಡು ದಿನ ಬಸ್ ಸಂಚಾರ ವ್ಯತ್ಯಯವಾಗಲಿದೆ. ಅಲ್ಲದೆ ರಾಷ್ಟ್ರೀಯ ಹೆದ್ದಾರಿಯಂಚಿನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಇರುವ ಕಾರಣ ಇದೆ. ಇದರಿಂದ ತುರ್ತು ಕೆಲಸದ ಹೊರತಾಗಿ ಜನರು ಪ್ರಯಾಣವನ್ನು ಮುಂದೂಡುವುದು ಇಲ್ಲವೇ ಬದಲಿ ವ್ಯವಸ್ಥೆ ಮಾಡಿಕೊಂಡು ಪ್ರಯಾಣ ಕೈಗೊಳ್ಳುವುದು ಉತ್ತಮವಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications