ಹೆಗಡೆ ಬಗ್ಗೆ ಹೇಳಿಕೆ; ಸ್ಪಷ್ಟನೆ ಕೊಟ್ಟ ಆನಂದ್ ಅಸ್ನೋಟಿಕರ್
ಕಾರವಾರ, ಏಪ್ರಿಲ್ 07; "ನಾನು ಸಂಸದ ಅನಂತಕುಮಾರ್ ಹೆಗಡೆ ಸಾಯಲಿ ಎಂಬ ಅರ್ಥದಲ್ಲಿ ಹೇಳಿಲ್ಲ. ಕೆಲವರು ಇದನ್ನ ತಪ್ಪಾಗಿ ತಿಳಿದುಕೊಂಡಿದ್ದಾರೆ" ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಹೇಳಿದರು.
ಬುಧವಾರ ಕಾರವಾರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಆರು ಬಾರಿ ಸಂಸದರಾಗಿ ಆಯ್ಕೆಯಾದ ಅನಂತಕುಮಾರ್ ಹೆಗಡೆ ಜಿಲ್ಲೆಯಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ಅದಕ್ಕಾಗಿ ಅವರು ಇದ್ದರೇನು, ಹೋದರೇನು ಅಂದಿದ್ದೆ. ನನ್ನ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತೇನೆ. ಆದರೆ ಅವರು ಸಾಯಲಿ ಎಂದು ನಾನು ಬಯಸಿಲ್ಲ" ಎಂದರು.
"ನಾನು ಮೋದಿ ಅಭಿಮಾನಿ, ಸಂಸತ್ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಕಣಕ್ಕೆ ಇಳಿದಾಗ ಮೋದಿ ವಿರುದ್ಧ ಒಂದೇ ಒಂದು ಮಾತನ್ನೂ ಹೇಳಿರಲಿಲ್ಲ. ಅನಂತಕುಮಾರ್ ಬಾಯಿಗೆ ಬಂದಂತೆ ಮಾತನಾಡಿ ಮೋದಿಯವರಿಗೆ ಮುಜುಗರ ತಂದಿದ್ದಾರೆ" ಎಂದು ತಿಳಿಸಿದರು.

"ಈ ಹಿಂದೆ ಹಾಲಿ ವಿಧಾನಸಭಾಧ್ಯಕ್ಷ ವಿಶ್ವೇಶರ ಹೆಗಡೆ ಕಾಗೇರಿ, ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಕಾರವಾರದ ಜಗದೀಶ್ ಬಿರ್ಕೋಡಿಕರ್ ಎನ್ನುವವರ ಮೇಲೂ ಅನಂತಕುಮಾರ್ ಹೆಗಡೆ ಹಲ್ಲೆ ಮಾಡಿದ್ದರು" ಎಂದರು.
"ಅನಂತಕುಮಾರ್ ಬಗ್ಗೆ ಮಾತನಾಡಿದೆ ಎಂದು ನನ್ನ ನಡತೆ ಬಗ್ಗೆ ಬಿಜೆಪಿಯ ಕೆಲವು ಮರಿ ಪುಢಾರಿಗಳು ಮಾತನಾಡುತ್ತಾರೆ. ಈ ಮೂವರು ಅನಂತಕುಮಾರ್ ನಮ್ಮ ಮೇಲೆ ಹಲ್ಲೆ ಮಾಡಿಲ್ಲವೆಂದು ದೇವರ ಬಳಿ ಬಂದು ಪ್ರಮಾಣ ಮಾಡಲಿ. ಅವಾಗ ಯಾರ ನಡತೆ ಏನು ಎಂದು ಎಲ್ಲರಿಗೂ ಗೊತ್ತಾಗಲಿದೆ" ಎಂದು ಸವಾಲು ಹಾಕಿದರು.
"ತನ್ನ ತಾಯಿಯ ಚಿಕಿತ್ಸೆಗೆ ಒಂದೈದು ನಿಮಿಷ ತಡವಾಯಿತೆಂದು ಶಿರಸಿ ಟಿಎಸ್‌ಎಸ್ ಆಸ್ಪತ್ರೆಯ ವೈದ್ಯರಿಗೇ ಅನಂತಕುಮಾರ್ ಹಿಗ್ಗಾಮುಗ್ಗ ಹೊಡೆದಿದ್ದರು. ಇದು ಅವರ ಸಂಸ್ಕೃತಿಯನ್ನು ತಿಳಿಸುತ್ತದೆ. ನಾನು ಯಾರಿಗೂ ಹೆದರುವ ಮನುಷ್ಯನಲ್ಲ" ಎಂದು ವಿವರಣೆ ನೀಡಿದರು.
"ಒಂದು ಕಾಲದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧವೇ ಹೋರಾಟ ಮಾಡಿದವನು ನಾನು. ನನ್ನ ಜಿಲ್ಲೆಗಾಗಿ ನಾನು ಹೋರಾಟ ಮಾಡುತ್ತೇನೆ. ನಾನು ಹಾಗೂ ನನ್ನ ಮಾನಸಿಕ ಸ್ಥಿತಿ ಸರಿಯಾಗಿಯೇ ಇದೆ" ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications