ಶಿರಸಿಯಲ್ಲಿ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ

ಕಾರವಾರ, ಏಪ್ರಿಲ್ 23: ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಶಿರಸಿಯ ವಿವೇಕಾನಂದ ನಗರದ ಮತಗಟ್ಟೆಯಲ್ಲಿ ಪತ್ನಿ ಶ್ರೀರೂಪಾ ಹೆಗಡೆ ಅವರೊಂದಿಗೆ ತೆರಳಿ ಮತ ಚಲಾಯಿಸಿದರು.

ಕಾರವಾರ ಸೇರಿದಂತೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮತದಾನ ಆರಂಭವಾಗಿದೆ. ಕ್ಷೇತ್ರದ ಒಟ್ಟು 1,922 ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದ್ದು, ಸರತಿ ಸಾಲಿನಲ್ಲಿ ನಿಂತು ಮತದಾರರು ಮತ ಚಲಾಯಿಸುತ್ತಿದ್ದಾರೆ. ಮುಂಜಾನೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಮತಗಟ್ಟೆಗೆ ಮತದಾರರು ಬಂದಿದ್ದಾರೆ.

ಮತಗಟ್ಟೆಗಳಲ್ಲಿ ನಸುಕಿನಿಂದಲೇ ಮತದಾನದ ಪ್ರಕ್ರಿಯೆ ಆರಂಭವಾಗಿತ್ತು. ಬೆಳಗ್ಗೆ 6ರಿಂದ ಅಣಕು ಮತದಾನ ನಡೆಯಿತು. ಎಲ್ಲಾ ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಅಣಕು ಮತದಾನ ನಡೆಯಿತು. ಕಣದಲ್ಲಿರುವ ಎಲ್ಲಾ ಅಭ್ಯರ್ಥಿಗಳು ಕನಿಷ್ಠ ಒಂದೊಂದು ಮತಹಾಕಿ ಪರಿಶೀಲನೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

Anant Kumar Hegde cast their vote at Vivekananda Nagar booth in Sirsi

ಅಣಕು ಮತದಾನಕ್ಕೆ ಗರಿಷ್ಠ 50 ಮತಗಳನ್ನು ಹಾಕಲು ಅವಕಾಶವಿತ್ತು. ಜಿಲ್ಲೆಯ 1,922 ಮತಗಟ್ಟೆಗಳ ಪೈಕಿ 286 ಸೂಕ್ಷ್ಮ ಮತ್ತು 78 ಅತಿಸೂಕ್ಷ್ಮ ಮತಗಟ್ಟೆಗಳು ಇವೆ. ಈ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ. 96 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಕಾರವಾರದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಕನ್ನಡ ಶಾಲೆಯಲ್ಲಿರುವ (ಬಾಯಿ ಕುವರಾಬಾಯಿ) ಮತಗಟ್ಟೆ ಸಂಖ್ಯೆ 99ರ ಮತಯಂತ್ರದಲ್ಲಿ ದೋಷ ಹಿನ್ನೆಲೆಯಲ್ಲಿ ಅರ್ಧ ಗಂಟೆ ತಡವಾಗಿ ಆರಂಭವಾದ ಮತದಾನ ಆರಂಭವಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+