ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯಲ್ಲೇ ತೆರಳಿ ನಾಮಪತ್ರ ಸಲ್ಲಿಸಿದ ಅನಂತಕುಮಾರ್ ಹೆಗಡೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಏಪ್ರಿಲ್ 02:ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆಯವರು ಮಂಗಳವಾರ ಜಿಲ್ಲಾ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ನಗರದ ಬಾಡ ಮಹಾದೇವಸ್ಥಾನದಲ್ಲಿ ಕುಟುಂಬ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಅಲ್ಲಿಂದ ಗ್ರೀನ್ ಸ್ಟ್ರೀಟ್ ನಲ್ಲಿನ ಬಿಜೆಪಿ ಕಚೇರಿಗೆ ಆಗಮಿಸಿದರು. ಅಲ್ಲಿಂದ ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯಲ್ಲೇ ಚುನಾವಣಾ ಅಧಿಕಾರಿ ಬಳಿಗೆ ತೆರಳಿದರು.

ಅನಂತಕುಮಾರ್ ಹೆಗಡೆಗೆ ಏಳನೇ ಬಾರಿ ಸ್ಪರ್ಧೆಗೆ ಟಿಕೆಟ್ ನೀಡಿದ ಬಿಜೆಪಿಅನಂತಕುಮಾರ್ ಹೆಗಡೆಗೆ ಏಳನೇ ಬಾರಿ ಸ್ಪರ್ಧೆಗೆ ಟಿಕೆಟ್ ನೀಡಿದ ಬಿಜೆಪಿ

ಪತ್ನಿ ಶ್ರೀರೂಪಾ ಹೆಗಡೆ, ಹುಬ್ಬಳ್ಳಿ- ಧಾರವಾಡ ಕೇಂದ್ರದ ಶಾಸಕ ಜಗದೀಶ್ ಶೆಟ್ಟರ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ, ವಕೀಲ ಬಿ.ಎಸ್‌.ಪೈ ಅವರೊಂದಿಗೆ ತೆರಳಿ ಏಳನೇ ಬಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

Ananthkumar Hegde filed nomination to district election officer

ಕಾರವಾರ ಶಾಸಕಿ ರೂಪಾಲಿ ನಾಯ್ಕ, ಭಟ್ಕಳ ಶಾಸಕ ಸುನೀಲ್ ನಾಯ್ಕ, ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ವೆಂಕಟ್ರಮಣ ಹೆಗಡೆ ಸೇರಿದಂತೆ ಸಾವಿರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ನೆರೆದಿದ್ದರು.

ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಸಿ ಹೊರ ಬರುವವರೆಗೂ ಕಾರ್ಯಕರ್ತರು ಮೋದಿ... ಮೋದಿ... ಎಂದು ಘೋಷಣೆ ಕೂಗುತ್ತಿದ್ದರು.

 'ಮಾತಿನ ಮಲ್ಲ'ನಿಗೆ ಮಾತಲ್ಲೇ ಟಕ್ಕರ್ ಕೊಡ್ತಾರಾ ಆನಂದ್ ಅಸ್ನೋಟಿಕರ್? 'ಮಾತಿನ ಮಲ್ಲ'ನಿಗೆ ಮಾತಲ್ಲೇ ಟಕ್ಕರ್ ಕೊಡ್ತಾರಾ ಆನಂದ್ ಅಸ್ನೋಟಿಕರ್?

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ವ್ಯಾಪಕ ಬದಲಾವಣೆಯಾಗಿದೆ. ಅವುಗಳನ್ನು ಪ್ರಜ್ಞಾವಂತ ಮತದಾರರು ಬೆಂಬಲಿಸುತ್ತಾರೆ. ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನಗಳನ್ನು ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Ananthkumar Hegde filed nomination to district election officer

ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದವರು ಭ್ರಮೆಯಿಂದ ಹೊರಗೆ ಬರಲಿ. ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ಹಾಸನ, ಮೈಸೂರು, ತುಮಕೂರು, ದಾವಣಗೆರೆ, ಧಾರವಾಡದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಹೇಗಿದೆ ಎಂದು ಎಲ್ಲರಿಗೂ ತಿಳಿದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಗೆ ಟಿಕೆಟ್ ಕೊಡಬಾರದಿತ್ತು. ನನಗೆ ಬೇಸರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾಗಿ ಕೇಳಿದ್ದೇನೆ. ಒಟ್ಟಿನಲ್ಲಿ ಗೊಂದಲದಲ್ಲಿದ್ದಾರೆ. ಮತದಾರರು ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

English summary
Lok Sabha Elections 2019: Uttara Kannada Lok Sabha constituency BJP candidate Ananthkumar Hegde filed nomination to district election officer on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X