ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾರವಾರದಲ್ಲಿ ಭಾರತ ಬಂದ್ ಪ್ರತಿಭಟನೆ ವೇಳೆ ಅಂಗನವಾಡಿ ಕಾರ್ಯಕರ್ತೆ ಸಾವು

|
Google Oneindia Kannada News

ಕಾರವಾರ, ಜನವರಿ 8: ಭಾರತ ಬಂದ್ ಪ್ರತಿಭಟನೆ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮೃತಪಟ್ಟಿರುವ ಘಟನೆ ಕಾರವಾರದಲ್ಲಿ ಮಂಗಳವಾರ ನಡೆದಿದೆ.

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕಾರವಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಈ ವೇಳೆ ಅಂಗನವಾಡಿ ಕಾರ್ಯಕರ್ತೆ ಶಾಂತವ್ವ ಚಕ್ರಸಾಲಿ(57) ಮೃತಪಟ್ಟಿದ್ದಾರೆ.

ಜನವರಿ 8-9 ರಂದು ಭಾರತ್ ಬಂದ್ ಯಾಕಾಗಿ? ಜನವರಿ 8-9 ರಂದು ಭಾರತ್ ಬಂದ್ ಯಾಕಾಗಿ?

ಮೃತ ಮಹಿಳೆಯನ್ನು ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಅಂಗನವಾಡಿಯ ಸಹಾಯಕಿ ಶಾಂತವ್ವ ಚಕ್ರಸಾಲಿ (57) ಎಂದು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ತಾಲೂಕು ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಶಾಂತವ್ವ ಏಕಾಏಕಿ ಕುಸಿದು ಬಿದ್ದಿದ್ದಾರೆ.

Anganwadi worker died during Bharat bandh protest in Karwar

ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಳಿ ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಸ್ಥಳದಲ್ಲಿ ಜಮಾಯಿಸಿದ್ದಾರೆ, ಪ್ರತಿಭಟನೆ ಕಾವು ಇನ್ನೂ ಹೆಚ್ಚಾಗಿದೆ.

English summary
Anganwadi worker Shantavva Chakrasali(57) died in mundagodu during Bharath bandh protest. She was protesting in front of Tahsildar office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X