ಅಂಡಮಾನ್-ನಿಕೋಬಾರ್‌ನಲ್ಲಿ ಅಂಕೋಲಾ ಮೂಲದ ನೌಕಾಸೇನಾ ಸಿಬ್ಬಂದಿ ಸಾವು
ಕಾರವಾರ, ಜನವರಿ, 04: ಅಂಡಮಾನ್-ನಿಕೋಬಾರ್ ದ್ವೀಪ ಪ್ರದೇಶದಲ್ಲಿ ನೌಕಾಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಕೋಲಾ ತಾಲೂಕಿನ ಲಕ್ಷ್ಮೀಶ್ವರ ಮೂಲದ ನೌಕಾಸೇನಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ಅಂಕೋಲಾದ ನೌಕಾಸೇನಾ ಸಿಬ್ಬಂದಿ ಸಾವು
ನೌಕಾಸೇನಾ ಸಿಬ್ಬಂದಿ ನಾಗರಾಜ ಮುಕುಂದ ಕಳಸ (33) ಎನ್ನುವವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಕಳೆದ 4 ದಿನಗಳ ಹಿಂದೆ ಆಕಸ್ಮಿಕ ದುರಂತದಲ್ಲಿ ನಾಗರಾಜ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಾಗರಜ ಅವರ ಪಾರ್ಥಿವ ಶರೀರವನ್ನು ಗುರುವಾರ (ಜನವರಿ 5) ಹುಟ್ಟೂರಿಗೆ ತರಲಾಗುತ್ತಿದೆ.
ಅಧಿಕಾರಿಗಳ ಮಲತಾಯಿ ಧೋರಣೆ ಆರೋಪ: ಸಾಂಪ್ರದಾಯಿಕ ಮೀನುಗಾರಿಕೆಗೆ ಹೊಡೆತ
ಭುವನೇಶ್ವರದಲ್ಲಿರುವ ಐಎನ್ಎಸ್ ಚಿಲಕ ನೌಕಾದಳ ತರಬೇತಿ ಕೇಂದ್ರದಲ್ಲಿ 2010ರಲ್ಲಿ ತರಬೇತಿಯನ್ನು ಪಡೆದು, ಕಾರವಾರದ ಕದಂಬ ನೌಕಾನೆಲೆಯಲ್ಲಿ ಭಾರತೀಯ ನೌಕಾಸೇನೆಗೆ ಸೇರ್ಪಡೆ ಆಗಿದ್ದರು. ಬಳಿಕ ಮುಂಬೈನಲ್ಲಿ ಸೇವೆ ಸಲ್ಲಿಸಿ ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ತಮ್ಮ ಸೇವೆಯನ್ನು ಮುಂದುವರಿಸಿದ್ದರು. ಸೇವಾ ನಿವೃತ್ತಿಗೆ ಎರಡು ವರ್ಷ ಬಾಕಿ ಇರುವಾಗಲೇ ದುರ್ದೈವವಶಾತ್ ಅಸುನೀಗಿದ್ದಾರೆ.

ಪಾರ್ಥಿವ ಶರೀರವನ್ನು ಗುರುವಾರ ಬೆಳಗಿನ ಜಾವ ಅಂಕೋಲಾಕ್ಕೆ ತಲುಪಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಲಕ್ಷ್ಮೀಶ್ವರದ ಮೂಲ ಮನೆಯಲ್ಲಿ ಬೆಳಗ್ಗೆ 7 ಗಂಟೆಯಿಂದ 2 ಗಂಟೆಗಳ ಕಾಲ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದರ. ಬಳಿಕ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.












Click it and Unblock the Notifications