ಭೂಕುಸಿತ: ಅಂಕೋಲಾ ಬಳಿಯ ಗಂಗಾವಳಿ ನದಿ ಬಳಿ ನಿಷೇಧಾಜ್ಞೆ ಜಾರಿ
ಉತ್ತರ ಕನ್ನಡ, ಜುಲೈ. 17: ಅಂಕೋಲಾ ಭೂಕುಸಿತ ಪ್ರಕರಣದಿಮದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಇದೇ ವೇಳೆ ಗಂಗಾವಳಿ ನದಿಯಲ್ಲಿ ಟ್ಯಾಂಕರ್ ತೇಲುತ್ತಿರುವುದರಿಂದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಾಸರಕುದ್ರಿಗೆ ಗ್ರಾಮ ಪಂಚಾಯತ ವ್ಯಾಪ್ತಿಗೆ ಬರುವ ಕೊಡ್ಲಣಿ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66 (NH-66) ಪಕ್ಕದ ಗುಡ್ಡ ಕುಸಿದಿದೆ. ಗುಡ್ಡದ ಬಳಿಯ ಹೋಟೆಲ್ ಹಾಗೂ ಮನೆಯ ಸದಸ್ಯರು ಹಾಗೂ ಜಿಲ್ಲೆಯೇ ಹೋಟೆಲ್ ಮುಂಭಾಗದಲ್ಲಿ ನಿಲ್ಲಿಸಿದ ಅಡುಗೆ ಅನೀಲ ಟ್ಯಾಂಕರ ಕೂಡ ಭೂಕುಸಿತದಿಂದ ಉಂಟಾದ ರಭಸಕ್ಕೆ ಗಂಗಾವಳಿ ನದಿಯಲ್ಲಿ ಟ್ಯಾಂಕರ್ ಬಿದ್ದಿದೆ.

ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗಬಹುದಾದ ಸಾಧ್ಯತೆ ಇರುವುದರಿಂದ ಅದನ್ನು ತಡೆಗಟ್ಟುವ ಬಗ್ಗೆ NDRF, Navy ಹಾಗೂ ಆಗ್ನಿಶಾಮಕ ತಂಡಗಳು ಜಂಟಿಯಾಗಿ NHAI, IRB ಜೊತೆಗುಡಿ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಕಾರ್ಯಾಚರಣೆಗೆ ತೊಂದರೆಯಾಗದಂತೆ ಅನಿಲ ಸೋರಿಕೆಯಾದಲ್ಲಿ ಸಂಭವಿಸಬಹುದಾದ ದುರ್ಘಟನೆಯನ್ನು ತಡೆಗಟ್ಟುವಲ್ಲಿ ಜಿಲ್ಲಾಡಳಿತ ಕ್ರಮಗೊಳ್ಳುತ್ತಿದೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಸದರಿ ಪ್ರದೇಶದಲ್ಲಿ ಸಾರ್ವಜನಿಕರ ಚಲನ ವಲನಗಳನ್ನು ನಿರ್ಬಂಧಿಸುವುದು ಸೂಕ್ತ ಎಂದು ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಪರಿಶೀಲನೆ ವೇಳೆಯಲ್ಲಿ ಕಂಡುಬಂದಿರುವುದರಿಂದ ಅಂಕೋಲಾ ತಾಲೂಕಿನ ಸಗಡಗೇರಿ ಗ್ರಾಮದ ಲಗ್ನ ಗಂಗಾವಳಿ ನದಿಯಲ್ಲಿ ಟ್ಯಾಂಕರ ತೇಲುತ್ತಿರುವುದರಿಂದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಬಿ)(ಸಿ) ರನ್ವಯ ಅಧಿಕಾರದ ಮೇರೆಗೆ ನಿಷೇದಾಜ್ಞೆ ಜಾರಿಗೊಳಿಸುವುದು ಸೂಕ್ತವೆಂದು ಮನಗಂಡು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಲಕ್ಷ್ಮೀಪ್ರಿಯಾ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಾಸರಕುದ್ರಿಗೆ ಗ್ರಾಮ ಪಂಚಾಯತ ವ್ಯಾಪ್ತಿಗೆ ಬರುವ ಗಂಗಾವಳಿ ನದಿ ಪಾತ್ರದ ಸುತ್ತಮುತ್ತಲಿನ ಕಿ.ಮೀ ವ್ಯಾಪ್ತಿಯ ಸಾರ್ವಜನಿಕರು ಟ್ಯಾಂಕರ ಸುತ್ತಮುತ್ತಲಿನ ಪ್ರದೇಶದಲ್ಲಿ ಓಡಾಡುವುದನ್ನು ಅಥವಾ ಇನ್ನಾವುದೇ ವಾಹನ ಬಳಸಿ ತಿರುಗಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದಾರೆ.
Government Officials, NDRF, Navy Bharath Petroleum, Hindustan Petroleum, Coast Guard ab ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆಯು ಕಾರ್ಯಾಚರಣೆ ಮುಕ್ತಾಯಗೊಳ್ಳುವವರೆಗೆ ಚಾಲ್ತಿಯಲ್ಲಿರುತ್ತದೆ.












Click it and Unblock the Notifications