ಕಾರವಾರ; ಅಯೋಧ್ಯೆ ತೀರ್ಪಿನ ಹಿನ್ನೆಲೆ ಪಟಾಕಿ ಸಿಡಿಮದ್ದುಗಳ ಮಾರಾಟ ನಿಷೇಧ
ಕಾರವಾರ, ನವೆಂಬರ್ 9: ಇಂದು ಅಯೋಧ್ಯಾ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಸಂತೆ ಮಾರುಕಟ್ಟೆಯನ್ನು ರದ್ದುಗೊಳಿಸಲಾಗಿದೆ.
ಪ್ರತಿ ಶನಿವಾರ ಪಟ್ಟಣದಲ್ಲಿ ಸಂತೆ ಮಾರುಕಟ್ಟೆ ನಡೆಯುತ್ತಿದ್ದು, ಇಲ್ಲಿ ರಾಜ್ಯದ ವಿವಿಧ ಭಾಗಗಳಿಂದ ತರಕಾರಿಗಳನ್ನು ತಂದು ರೈತರು ಮಾರಾಟ ಮಾಡುತ್ತಿದ್ದರು. ಆದರೆ ಸಂತೆ ಮಾರುಕಟ್ಟೆ ರದ್ದು ಹಿನ್ನಲೆ ಮಾರುಕಟ್ಟೆ ಬಿಕೋ ಎನ್ನುತ್ತಿದೆ.

ಇದರೊಂದಿಗೆ ಪಟಾಕಿ, ಸಿಡಿಮದ್ದುಗಳ ಬಳಕೆ ಹಾಗೂ ಮಾರಾಟವನ್ನು ಜಿಲ್ಲಾದ್ಯಂತ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಆದೇಶಿಸಿದ್ದಾರೆ. ಈಗಾಗಲೇ ಪಟಾಕಿ ಮಾರಾಟ ಮಳಿಗೆಗಳನ್ನು ಮುಂದಿನ ಆದೇಶದವರೆಗೆ ಮುಚ್ಚಲು ಆದೇಶಿಸಿರುವ ಅವರು, ಯಾವುದೇ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದ್ದು ಸೂಕ್ತ ಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.












Click it and Unblock the Notifications