• search
  • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರಿಯ ಕವಿ, ಲೇಖಕ ಬಿ‌ಎ ಸನದಿ ನಿಧನ

By ಕಾರವಾರ ಪ್ರತಿನಿಧಿ
|

ಕಾರವಾರ, ಮಾರ್ಚ್ 31: ಹಿರಿಯ ಕವಿ ಡಾ. ಬಾಬಾ ಸಾಹೇಬ ಅಹಮದ್‌ ಸಾಹೇಬ ಸನದಿಯವರು (86) ಭಾನುವಾರ ಬೆಳಗಿನ ಜಾವ ಕುಮಟಾದ ನಿವಾಸದಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಭಾನುವಾರ ಬೆಳಗಿನ ಜಾವ ಕುಮಟಾದ ಹೆರವಟ್ಟಾದಲ್ಲಿ ಅವರು ವಿಧಿವಶರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಬೆಳಗಾವಿಯ ಸಿಂದೋಳಿಯ ಮೂಲ ನಿವಾಸಕ್ಕೆ ಸಾಗಿಸಲಾಗುತ್ತಿದೆ. ಅಲ್ಲಿ ಸಂಜೆ 5ಕ್ಕೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.

ಬ್ಯಾರಿ ಆಂದೋಲನದ ರೂವಾರಿ ಅಬ್ದುಲ್ ರಹೀಮ್ ಮಂಗಳೂರಿನಲ್ಲಿ ನಿಧನ

ಬೆಳಗಾವಿ ಜಿಲ್ಲೆಯ ಸಿಂಧೋಳಿ ಎಂಬಲ್ಲಿ 1933 ರ ಆಗಸ್ಟ್ 18 ರಂದು ಜನಿಸಿದ್ದ ಅವರು, ಕಥೆಗಾರ, ಅನುವಾದಕ, ವಿಮರ್ಶಕ, ನಾಟಕಕಾರ ಎಲ್ಲಕ್ಕಿಂತ ಹೆಚ್ಚಾಗಿ ಆದರ್ಶ ಶಿಕ್ಷಕರೆನಿಸಿದ್ದರು. ರಾಜ್ಯ ಸರಕಾರದ ಹುದ್ದೆಗೆ ಆಯ್ಕೆಯಾಗಿ ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ ಸಮಾಜ ಶಿಕ್ಷಣಾಧಿಕಾರಿಯಾಗಿ, ವಾರ್ತಾ ಇಲಾಖೆಗೆ ಸೇರಿ (ಬೆಂಗಳೂರು) ಪಂಚಾಯತ್ ರಾಜ್‌ ಪತ್ರಿಕೆಯ ಸಹಾಯಕ ಸಂಪಾದಕರಾಗಿ, ಕಲಬುರ್ಗಿಗೆ ವರ್ಗಾವಣೆಗೊಂಡು ವಿಭಾಗದ ಕ್ಷೇತ್ರ ಪ್ರಚಾರಾಧಿಕಾರಿಯಾಗಿ, ಅಹಮದಾಬಾದಿಗೆ ವರ್ಗವಾಗಿ ಪಶ್ಚಿಮ ವಲಯದ ಪ್ರದರ್ಶನಾಧಿಕಾರಿಯಾಗಿ, ಮುಂಬೈ ಆಕಾಶವಾಣಿಯ ಕುಟುಂಬ ಕಲ್ಯಾಣ ಅಧಿಕಾರಿಯಾಗಿ, ವಿಸ್ತರಣಾಧಿಕಾರಿಯಾಗಿ ಸೇವೆ ಸಲ್ಲಿಸಿ 1991ರಲ್ಲಿ ಅವರು ನಿವೃತ್ತರಾಗಿದ್ದರು.

ಸನದಿ ಅವರು 'ಆಶಾಕಿರಣ', 'ನೆಲಸಂಪಿಗೆ', 'ತಾಜಮಹಲು', 'ಹಿಮಗಿರಿಯ ಮುಡಿಯಲ್ಲಿ'ಯಿಂದ ಹಿಡಿದು 'ನಮ್ಮ ಪ್ರೀತಿ'ಯವರೆಗೆ 18 ಕವನ ಸಂಕಲನಗಳು ಮತ್ತು THIRSTY WORDS ಎಂಬ ಒಂದು ಇಂಗ್ಲಿಷ್‌ ಕವನ ಸಂಕಲನವನ್ನು ಪ್ರಕಟಿಸಿದ್ದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸನದಿಯವರ ವೈವಿಧ್ಯಮಯ ಸಾಹಿತ್ಯ ಕೊಡುಗೆಗಾಗಿ ರಾಜ್ಯ ಸರಕಾರದ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಭಾರತ ಸರಕಾರದ ಪುರಸ್ಕಾರ, ಕಾವ್ಯಾನಂದ ಪುರಸ್ಕಾರ ಮುಂತಾದ ಪ್ರಶಸ್ತಿಗಳಲ್ಲದೆ, ದೆಹಲಿಯ ಕರ್ನಾಟಕ ಸಂಘದಿಂದ ದೆಹಲಿ ಕನ್ನಡಿಗ ಪರವಾಗಿ 'ಶ್ರೇಷ್ಠ ಹೊರನಾಡ ಕನ್ನಡಿಗ' ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿ, ಎಸ್‌.ಎನ್‌.ಭೂಸನೂರಮಠ ಪ್ರಶಸ್ತಿ, ಗೊರೂರು ಸಾಹಿತ್ಯ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಗುರುನಾರಾಯಣ ಪ್ರಶಸ್ತಿಗಳು ಸಂದಿವೆ. ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಕೂಡ ಅವರಿಗೆ ದೊರೆತಿತ್ತು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Senior poet Dr. Baba Saheba Ahmad Saheba Sanadi (86) died at the residence of Kumta on Sunday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more