ಮಂಗನ ಕಾಯಿಲೆ ಹಿನ್ನೆಲೆ ಬನವಾಸಿ ಕದಂಬೋತ್ಸವ ಮುಂದೂಡಿಕೆ
ಕಾರವಾರ, ಫೆಬ್ರವರಿ, 04: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಫೆಬ್ರವರಿ 9 ಮತ್ತು 10ರಂದು ನಡೆಯಬೇಕಿದ್ದ ಕದಂಬೋತ್ಸವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಫೆಬ್ರವರಿ 9 ಮತ್ತು 10ರಂದು ಕದಂಬೋತ್ಸವನ್ನು ನಡೆಸಲು ಜಿಲ್ಲಾಡಳಿತ ಈಗಾಗಲೇ ಅಂತಿಮ ಹಂತದ ಸಿದ್ಧತೆಗಳನ್ನು ನಡೆಸಿತ್ತು. ಬನವಾಸಿ ಮತ್ತು ಸಮೀಪದಲ್ಲಿ ಮಂಗಗಳು ಶಂಕಾಸ್ಪದವಾಗಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ರೋಗ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿರುವುದರಿಂದ ಈ ದಿನಾಂಕಗಳಂದು ನಡೆಯಬೇಕಿದ್ದ ಕದಂಬೋತ್ಸವನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಈಗಾಗಲೇ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಶಂಕಿತ ಪ್ರದೇಶಗಳಲ್ಲಿ ಲಸಿಕೆಗಳನ್ನು ಹಾಕಲಾಗಿದೆ. ಕಾಡಿನ ಸಂಪರ್ಕದಲ್ಲಿರುವ ಗ್ರಾಮಗಳ ಜನರಿಗೆ ಔಷಧಗಳ ವಿತರಣೆ, ಡಿಎಂಪಿ ತೈಲ ಲೇಪನ ಹಾಗೂ ದನ-ಕುರಿ ಕೊಟ್ಟಿಗೆಗಳಿಗೆ ಹುಣ್ಣೆ ನಿಯಂತ್ರಣ ಔಷಧಗಳ ಸಿಂಪಡಣೆ ಸೇರಿದಂತೆ ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಜಿಲ್ಲೆಗೆ ಹೆಚ್ಚುವರಿ ಔಷಧಗಳನ್ನು ಸರಬರಾಜು ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಆದಾಗ್ಯೂ ಕದಂಬೋತ್ಸವ ನಡೆಯಬೇಕಿದ್ದ ಬನವಾಸಿಯಲ್ಲಿ ಇತ್ತೀಚೆಗೆ ಮಂಗವೊಂದು ಮೃತಪಟ್ಟು, ಅದರ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿ ಅದು ಋಣಾತ್ಮಕವಾಗಿರುವುದು ಸ್ಪಷ್ಟವಾಗಿದೆ. ಆದರೆ ಬನವಾಸಿಯಿಂದ 10 ಕಿಲೋ ಮೀಟರ್ ದೂರದಲ್ಲಿ ಮೃತಪಟ್ಟಿರುವ ಮಂಗದ ಮಾದರಿಯಲ್ಲಿ ಧನಾತ್ಮಕ ಫಲಿತಾಂಶ ವ್ಯಕ್ತವಾಗಿದೆ.

ಇದರಿಂದಾಗಿ ಜಿಲ್ಲಾಡಳಿತ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಉಲ್ಬಣವಾಗದಂತೆ ತಡೆಗಟ್ಟುವ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕಿರುವುದರಿಂದ ಈ ಸಂದರ್ಭದಲ್ಲಿ ಕದಂಬೋತ್ಸವ ಆಚರಿಸುವುದು ಕಷ್ಟಸಾಧ್ಯವಿರುವ ಕಾರಣ ಸದ್ಯಕ್ಕೆ ಕದಂಬೋತ್ಸವನ್ನು ಮುಂದೂಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications