ಶರಾವತಿ ನದಿ ಉಳಿವಿಗೆ ಆಗ್ರಹಿಸಿ ಹೊನ್ನಾವರದಲ್ಲಿ ಬಂದ್
ಕಾರವಾರ, ಜುಲೈ 10: ಶರಾವತಿ ನದಿ ಉಳಿವಿಗೆ ಆಗ್ರಹಿಸಿ ಹೊನ್ನಾವರ ತಾಲ್ಲೂಕಿನಲ್ಲಿ ಇಂದು ಬಂದ್ ಆಚರಿಸಲಾಗುತ್ತಿದೆ. ಜೀವನದಿ ಶರಾವತಿ ಉಳಿಸಿ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದ್ದು, ಶರಾವತಿ ನದಿ ನೀರನ್ನು ಬೆಂಗಳೂರಿಗೆ ತರುವ ಯೋಜನೆಯನ್ನು ವಿರೋಧಿಸಿ ಬಂದ್ ಕೈಗೊಳ್ಳಲಾಗಿದೆ.
ಬೆಂಗಳೂರಿಗೆ ಶರಾವತಿ ನೀರು : ಜುಲೈ 10ರಂದು ಶಿವಮೊಗ್ಗ ಬಂದ್
ಬಂದ್‌ಗೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವರ್ತಕರೂ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ನಗರದ ಶರಾವತಿ ಸರ್ಕಲ್ ಬಳಿ ಪ್ರತಿಭಟನಾಕಾರರು ಸೇರಿದ್ದು, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.
ಬಸ್, ಟೆಂಪೋ, ಆಟೋ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ. ಬಂದ್ ಹಿನ್ನಲೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.