ಕಾರವಾರ- ಬೆಂಗಳೂರು ಸೂಪರ್ಫಾಸ್ಟ್ ರೈಲು ಇನ್ನು ಪಂಚಗಂಗಾ ಎಕ್ಸ್ಪ್ರೆಸ್
ಉಡುಪಿ, ಜುಲೈ 3: ಕರಾವಳಿಯ ಜೀವನಾಡಿಯಾದ ಕಾರವಾರ- ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ಫಾಸ್ಟ್ ರೈಲಿಗೆ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ನಾಮಕರಣ ಮಾಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಐದು ಪ್ರಮುಖ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ 'ಪಂಚ ಗಂಗಾವಳಿ' ನದಿಯ ಹೆಸರಿನಿಂದ ಆಯ್ದ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ಕೇಂದ್ರ ರೈಲ್ವೆ ಸಚಿವಾಲಯ ನಾಮಕರಣ ಮಾಡಿ ಆದೇಶಿಸಿದೆ.
ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು.

ಕರಾವಳಿಯ ಬಹುಮುಖ್ಯ ಪುಣ್ಯ ಕ್ಷೇತ್ರಗಳ ಮೂಲಕ ಹರಿಯುವ ಪಂಚಗಂಗಾ, ಉಡುಪಿ ಜಿಲ್ಲೆಯ ತೀರ್ಥ ಕ್ಷೇತ್ರಗಳು, ಪ್ರವಾಸೊದ್ಯಮ, ಮೀನುಗಾರಿಕೆ, ಕೃಷಿ ಹಾಗೂ ಜನಜೀವನಕ್ಕೆ ಆಧಾರವಾಗಿದೆ. ಈ ಕಾರಣದಿಂದ ನೂತನ ಬೆಂಗಳೂರು- ಕಾರವಾರ ರೈಲಿಗೆ ಪಂಚಗಂಗಾ ಎನ್ನುವ ಹೆಸರಿಡಬೇಕು ಎಂದು ಕೇಳಿಕೊಂಡಿದ್ದರು.

Recommended Video
ಜನರ ಅಪೇಕ್ಷೆಯನ್ನು ಗೌರವಿಸಿ, ಉಡುಪಿ ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ "ಪಂಚಗಂಗಾ ಎಕ್ಸ್ಪ್ರೆಸ್' ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು- ಕಾರವಾರ ರೈಲಿಗೆ ಇಟ್ಟಿರುವ ಕೇಂದ್ರ ಸರಕಾರಕ್ಕೆ ಹಾಗೂ ರೈಲ್ವೆ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications