ಭಟ್ಕಳ; ಪ್ರವಾಹಕ್ಕೆ ಸಿಲುಕಿದ ಅಂಗಡಿ, ಮೀನುಗಾರರಿಗೆ ವಿಶೇಷ ಅನುದಾನ
ಕಾರವಾರ, ಆಗಸ್ಟ್, 04: "ಭಟ್ಕಳದಲ್ಲಿ ಭಾರೀ ಮಳೆಯಾಗಿ ಹಾನಿಗೊಳಗಾಗಿರುವ ಪ್ರವಾಹ ಪೀಡಿತ ಪ್ರದೇಶದ ಮನೆಗಳಿಗೆ ಈಗಾಗಲೇ ಪರಿಹಾರ ಒದಗಿಸಲು ಸೂಚಿಸಲಾಗಿದೆ. ಅಂಗಡಿ ಹಾಗೂ ಮೀನುಗಾರರ ಬೋಟ್‌ಗಳಿಗೆ ವರದಿ ಪಡೆದು ವಿಶೇಷ ಅನುದಾನ ಒದಗಿಸುವುದಾಗಿ" ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿಗಳು ಬುಧವಾರ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವನ್ನಪ್ಪಿದ್ದ ಭಟ್ಕಳದ ಮುಟ್ಟಳ್ಳಿ ಗ್ರಾಮಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, "ಭಟ್ಕಳ ಪಟ್ಟಣ ಹಾಗೂ ಮುಟ್ಟಳ್ಳಿ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಮೇಘಸ್ಫೋಟಗೊಂಡ ಕಾರಣ ಭಾರೀ ಮಳೆಯಾಗಿ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರುತ್ತೇವೆ" ಎಂದರು.
"ಚಿರೆಕಲ್ಲು ಗಣಿಗಾರಿಕೆ ನಡೆಸಿದ ಪ್ರದೇಶದಲ್ಲಿ ಮಣ್ಣು ಸಡಿಲಗೊಂಡು ಗುಡ್ಡ ಕುಸಿದು ಮೇಲ್ನೋಟಕ್ಕೆ ಅವಘಡ ಸಂಭವಿಸಿರುವುದು ಕಂಡುಬಂದಿದೆ. ಈ ಪ್ರದೇಶದಲ್ಲಿ ಜಿಯೋಲಾಜಿಕಲ್ ಸರ್ವೇ ನಡೆಸಿ ಇನ್ನು ಯಾವ ಮನೆಗಳಿಗೆ ತೊಂದರೆ ಆಗಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ. ನಂತರ ಹಾನಿಗೊಳಗಾದ ಪ್ರದೇಶಗಳ ಜನರನ್ನು ಸ್ಥಳಾಂತರ ಮಾಡಲು ಮೊದಲು ಕ್ರಮ ಕೈಗೊಳ್ಳುವುದಾಗಿ" ತಿಳಿಸಿದರು.

"ಭಟ್ಕಳದಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮನೆ, ಸಾವಿರಕ್ಕೂ ಹೆಚ್ಚು ಅಂಗಡಿಗಳು, ನೂರಾರು ಬೋಟ್‌ಗಳು, ರಸ್ತೆ, ಸೇತುವೆಗಳಿಗೆ ಜಲಾವೃತವಾಗಿರುವ ಮಾಹಿತಿ ಇದೆ. ಪ್ರಾಥಮಿಕ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಅಲ್ಲದೆ ಜಿಲ್ಲಾಡಳಿತದ ಬಳಿ 38 ಕೋಟಿ ರೂಪಾಯಿ ಹಣ ಇದ್ದು, ಎನ್‌ಡಿಆರ್‌ಎಫ್ ಮೂಲಕ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು" ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
"ನೆರೆ ನೀರು ನುಗ್ಗಿ ಹಾನಿಗೊಳಗಾಗಿರುವ ಅಂಗಡಿಗಳಿಗೆ ವಿಶೇಷ ಅನುದಾನ ಅಗತ್ಯ ಇದೆ. ಹಾನಿಗೊಳಗಾದ ಬಗ್ಗೆ ವರದಿ ಕಳುಹಿಸಿದರೆ ಅನುಮೋದನೆ ನೀಡಿ ಪರಿಹಾರ ಒದಗಿಸಲಾಗುವುದು" ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

"ಮೀನುಗಾರರ ಬೋಟ್‌ಗಳಿಗೂ ಸಾಕಷ್ಟು ಹಾನಿಯಾಗಿದ್ದು, ತಾಂತ್ರಿಕ ಪರಿಣಿತರಿಂದ ವಿವರವಾದ ವರದಿ ಪಡೆಯಲಾಗುತ್ತದೆ. ನಂತರ ಅವರಿಗೂ ವಿಶೇಷ ಅನುದಾನ ನೀಡಿ ರಿಪೇರಿ ಮಾಡಿಸಿಕೊಡಲಾಗುತ್ತದೆ. ಐಆರ್‌ಬಿ ಹೆದ್ದಾರಿ ಕಾಮಗಾರಿಯಿಂದ ಅವಾಂತರಗಳು ಆಗುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಎನ್‌ಎಚ್‌ಐ ಮುಖ್ಯ ಇಂಜಿನಿಯರ್‌ಗಳನ್ನು ಕರೆಸಿ ಚರ್ಚಿಸಲಾಗುತ್ತದೆ" ಎಂದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications