ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿಂದೂ ಕಾರ್ಯಕರ್ತನ ಕೊಲೆ: ಬಿಜೆಪಿ, ವಿಹಿಂಪ ದಿಂದ ಹೆದ್ದಾರಿ ತಡೆ

By Manjunatha
|
Google Oneindia Kannada News

Recommended Video

ಉತ್ತರ ಕನ್ನಡ ಜಿಲ್ಲೆಯ ಪ್ರತಿಭಟನೆ ಬಗ್ಗೆ ಮಾತನಾಡಿದ ಬಿ ಎಸ್ ಯಡಿಯೂರಪ್ಪ

ಕಾರವಾರ, ಡಿಸೆಂಬರ್ 11 : ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಅವರ ಹತ್ಯೆಗೈದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66 ತಡೆದು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ.

ಪರೇಶ್ ನಿಗೂಢ ಸಾವಿನ ನಂತರ ಕಟ್ಟೆಯೊಡೆಯಿತೇ ಹಿಂದುಗಳ ತಾಳ್ಮೆ?ಪರೇಶ್ ನಿಗೂಢ ಸಾವಿನ ನಂತರ ಕಟ್ಟೆಯೊಡೆಯಿತೇ ಹಿಂದುಗಳ ತಾಳ್ಮೆ?

ಕಳೆದ ಬುಧವಾರ ಕಾಣೆಯಾಗಿದ್ದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಹೊನ್ನಾವರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಪರೇಶ್ ಮೇಸ್ತ ಕೊಲೆ ವಿಷಯ ಹರಡುತ್ತಿದ್ದಂತೆ ಕಾರವಾರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು.

BJP and VHP protest against state govt to arrest quickley arrest Paresh mestha murderers

ಸ್ವಯಂ ಪ್ರೇರಿತ ಬಂದ್ ಗೆ ಬಿಜೆಪಿ ಕರೆ ಹಿನ್ನೆಲೆಯಲ್ಲಿ ನಗರದ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಆದರೆ ಶಾಲೆ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಸಾರಿಗೆ ಬಸ್ ಗಳು ಸಂಚಾರ ಬಲವಂತವಾಗಿ ಪ್ರತಿಭಟನಾಕಾರರು ಸ್ಥಗಿತಗೊಳಿಸಿದ್ದಾರೆ.

ಪರೇಶ್ ಮೇಸ್ತ ಶವ ಪತ್ತೆ: ಹೊನ್ನಾವರದಲ್ಲಿ ಉದ್ವಿಗ್ನ ವಾತಾವರಣಪರೇಶ್ ಮೇಸ್ತ ಶವ ಪತ್ತೆ: ಹೊನ್ನಾವರದಲ್ಲಿ ಉದ್ವಿಗ್ನ ವಾತಾವರಣ

ಕಾರವಾರ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲ ಕಾಲ ಪ್ರತಿಭಟನೆ, ಹೆದ್ದಾರಿ ತಡೆ ನಡೆಸಿ. ಮುಸ್ಲಿಮರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಾನಾಕಾರರು ಘೋಷಣೆ ಕೂಗುತ್ತಿದ್ದಾರೆ.

ಪ್ರತಿಭಟನಾಕಾರರಿಗೆ ಬಿಜೆಪಿಯ ಪ್ರಮುಖ ಮುಖಂಡರು ಬೆಂಬಲ ಸೂಚಿಸಿದ್ದಾರೆ, ಪರೇಶ್ ಹತ್ಯೆ ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿಯೂ ಚರ್ಚೆ ಕಾವೇರಿದೆ.

English summary
BJP and Vishwa Hindu Parishad protest by closing highway 66 against govt to quickly arrest Paresh mestha murderers. VHP member Paresh mesta dead body found three days back in Honnavara lake. BJP and VHP accusing that Muslims killed Paresh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X