• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಸತ್ಯಕ್ಕೆ ದೂರ ಎಂದ ಶಿವರಾಮ್ ಹೆಬ್ಬಾರ್

|

ಕುಮಟಾ, ಮಾರ್ಚ್.03: ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ಬಿಡುಗಡೆ ಪ್ರಕರಣವು ಸತ್ಯಕ್ಕೆ ದೂರಾವಾಗಿದ್ದು ಎಂದು ಶಾಸಕ ಶಿವರಾಮ್ ಹೆಬ್ಬಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಮಾತನಾಡಿದ ಅವರು, ಈ ಹಿಂದೆ ಸಚಿವ ಸ್ಥಾನಕ್ಕಾಗಿ ಬಂಡಾಯವೆದ್ದ ಪ್ರಕರಣಕ್ಕೂ ಇಂದಿನ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವ ಸ್ಥಾನದ ಬಂಡಾಯದ ವಿಚಾರ ಈಗ ಮುಗಿದ ಅಧ್ಯಾಯ ಎಂದರು.

ಜಾರಕಿಹೊಳಿ ಸಿಡಿ ಪ್ರಕರಣ: ದಿನೇಶ್ ಕಲ್ಲಹಳ್ಳಿಗೆ ಪೊಲೀಸ್‌ ನೋಟಿಸ್

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಗೋಪಾಲಯ್ಯ, ನಾರಾಯಣಗೌಡ, ವಿಶ್ವನಾಥ್, ಹಾಗೂ ನಾನು ಎಲ್ಲರೂ ಒಟ್ಟಾಗಿಯೇ ಇದ್ದವರು. ನಾವೆಲ್ಲ ಇದೀಗ ಬಿಜೆಪಿ ಕಾರ್ಯಕರ್ತರು ಅಷ್ಟೇ. ರಮೇಶ್ ಜಾರಕಿಹೊಳಿ ರಾಸಲೀಲಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಡಿಸಿಎಂ ಅಭಿಪ್ರಾಯವೇ ನನ್ನ ಅಭಿಪ್ರಾಯ ಎಂದರು.

ಏನಿದು ರಾಸಲೀಲೆ ಪ್ರಕರಣ:

   'ಸಿಡಿ ವಿಚಾರ ನಿಜವಾಗಿದ್ದರೆ ರಮೇಶ್‌ ಜಾರಕಿಹೊಳಿಯಿಂದ ರಾಜೀನಾಮೆ ಕೊಡಿಸುತ್ತೇನೆ'- ಬಾಲಚಂದ್ರ ಜಾರಕಿಹೊಳಿ | Oneindia Kannada

   ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಯುವತಿಯೊಬ್ಬರಿಗೆ ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ರಾಸಲೀಲೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ತಮ್ಮ ಆರೋಪಕ್ಕೆ ಸಂಬಂಧಿಸಿದ ರಾಸಲೀಲೆಯ ವಿಡಿಯೋವನ್ನು ಬಿಡುಗಡೆಗೊಳಿಸಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

   English summary
   BJP MLA Shivaram Hebbar Reaction About Minister Ramesh Jarkiholi CD Row
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X