ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲ್ಲು ಕೊಡುವವರ ಕೈ ಮುರಿಯಿರಿ: ಆರ್.ವಿ.ದೇಶಪಾಂಡೆ

By ಡಿ.ಪಿ.ನಾಯ್ಕ
|
Google Oneindia Kannada News

ಕಾರವಾರ, ಡಿಸೆಂಬರ್ 24: "ಮಕ್ಕಳ ಕೈಯಲ್ಲಿ ಪೆನ್ನು‌ ಇರ್ಬೇಕು. ಅವರ ಕೈಗೆ ಕಲ್ಲು ನೀಡ್ಬಾರ್ದು. ಕಲ್ಲು ಕೊಡುವವರ ಕೈ ಮುರಿಯಬೇಕು," ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಆರ್.ವಿ.ದೇಶಪಾಂಡೆಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಆರ್.ವಿ.ದೇಶಪಾಂಡೆ

ಅವರು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ವಿದ್ಯಾಭ್ಯಾಸ ನಡೆಸಿದ ಸಿದ್ದಾಪುರ ತಾಲ್ಲೂಕಿನ ದೊಡ್ಮನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಂದರ್ಭ ಈ ಹೇಳಿಕೆ ನೀಡಿದರು. ವಿಶೇಷ ಶಾಲಾಭಿವೃದ್ಧಿ ಯೋಜನೆಯಡಿ ಮಂಜೂರಾದ 36.28 ಲಕ್ಷ ರೂ. ಅನುದಾನದಲ್ಲಿ ಶಾಲೆಯಲ್ಲಿ ಕೈಗೆತ್ತಿಕೊಳ್ಳಲಾದ ಕೊಠಡಿ ಕಾಮಗಾರಿಗಳನ್ನು ಶನಿವಾರ ದೇಶಪಾಂಡೆ ಪರಿಶೀಲಿಸಿದರು.

Break the hand of stone-providers: RV Deshpande

ನಂತರ ಮಾತನಾಡಿದ ಅವರು, "ಹೊಡಿ, ಬಡಿ, ಬೆಂಕಿ ಹಚ್ಚು ಎಂಬುದಕ್ಕೆ ಉತ್ತೇಜನ ನೀಡಕೂಡದು. ಈ ರೀತಿ ಮಾಡುವವರಿಗೆ ಜನರು ಉತ್ತರ ಹೇಳಬೇಕು. ಕಾನೂನು ಕೈಗೆ ತೆಗೆದುಕೊಳ್ಳುವವರಿಗೆ ಶಿಕ್ಷೆ ಆಗಬೇಕು. ಪ್ರಗತಿ ಮಾಡಲು, ಸಾಮಾಜಿಕ ನ್ಯಾಯ ನೀಡಲು, ಬಡವರ, ರೈತರ ಪರ ಕಾರ್ಯಕ್ರಮ ಮಾಡಲು ಸಾಧ್ಯವಾಗದಿದ್ದಾಗ ಇಂತಹ ವಾಮಮಾರ್ಗವನ್ನು ಅನುಸರಿಸುತ್ತಿದ್ದಾರೆ. ಜಾತಿ, ಜಾತಿಯ ಮಧ್ಯೆ ಮತ್ತು ಧರ್ಮ, ಧರ್ಮದ ಮಧ್ಯೆ ಬೆಂಕಿ ಹಚ್ಚಿ ಏನು ಸಾಧನೆ ಮಾಡುತ್ತೀರಿ?" ಎಂದು ಪ್ರಶ್ನಿಸಿದರು.

"ಉತ್ತರ ಕನ್ನಡ ಸುಸಂಸ್ಕೃತ ಜನರ ಜಿಲ್ಲೆ. ಇಲ್ಲಿಯ ಜನರು ಬಡವರಿರಬಹುದು. ಆದರೆ ಗಲಾಟೆ, ಗಲಭೆ ಮಾಡುವವರಲ್ಲ. ಅವರ ನಡುವೆ ವಿಷದ ಬೀಜ ಬಿತ್ತುವ ಕೆಲಸವಾಗುತ್ತಿದೆ." ಎಂದು ದೇಶಪಾಂಡೆ ಕಿಡಿಕಾರಿದರು.

ಶಶಿಭೂಷಣ ಹೆಗಡೆ ಮನೆಗೆ ಭೇಟಿ

ದೊಡ್ಮನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾರ್ಯಕ್ರಮಕ್ಕೆ ಬರುವ ಮೊದಲು ಸಿದ್ದಾಪುರ ಪಟ್ಟಣದಲ್ಲಿರುವ, ವಿಧಾನಸಭೆ ಚುನಾವಣೆಯಲ್ಲಿ ಸಿದ್ದಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂದು ಹೇಳಲಾಗಿರುವ ಶಶಿಭೂಷಣ ಹೆಗಡೆ ಅವರ ಮನೆಗೆ ಭೇಟಿ ನೀಡಿದರು.

ಈ ಕುರಿತು ಮಾಧ್ಯಮದವರು ಪ್ರಶ್ನಿಸಿದರೆ, "ಇದರಲ್ಲಿ ರಾಜಕೀಯ ತರಬೇಡಿ. ನನಗೆ ರಾಜಕೀಯ ಎಂಬುದು ದಂಧೆ ಅಲ್ಲ. ಶಶಿಭೂಷಣ ಹೆಗಡೆ ಅವರ ಮನೆಯಲ್ಲಿ ಅಮ್ಮ (ಗಣೇಶ ಹೆಗಡೆ ಅವರ ಪತ್ನಿ) ಇದ್ದಾರೆ. ಶಶಿ ನನಗೆ ಮಗ ಇದ್ದ ಹಾಗೆ. ಆದ್ದರಿಂದ ಅವರನ್ನು ನೋಡಲು ಹೋಗಿದ್ದೆ. ನನಗೆ ಎಸ್‌.ಎಂ.ಕೃಷ್ಣ ಸೇರಿದಂತೆ ಹಲವು ಬೇರೆ ಪಕ್ಷಗಳ ರಾಜಕೀಯ ಧುರೀಣರೊಂದಿಗೆ ಉತ್ತಮ ಸಂಬಂಧ ಇದೆ," ಎಂದು ಪ್ರತಿಕ್ರಿಯೆ ನೀಡಿದರು.

ಗಲಭೆಗೆ ಮುಖ್ಯಮಂತ್ರಿ ಉತ್ತೇಜನವಿಲ್ಲ

"ನಾನು ಹಲವು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ್ದೇನೆ. ಸಿದ್ದರಾಮಯ್ಯ ಒಳ್ಳೆ ಮುಖ್ಯಮಂತ್ರಿ. ರಾಜ್ಯದಲ್ಲಿ ಯಾವುದೇ ಮುಖ್ಯಮಂತ್ರಿ ಕೂಡ ಗಲಭೆ, ಗಲಾಟೆಗೆ ಉತ್ತೇಜನ ನೀಡಿಲ್ಲ," ಎಂದು ದೇಶಪಾಂಡೆ ಹೇಳಿದರು.

English summary
"We have a pen in the hands of the children, we should not give them a stone," said RV Deshpande in Siddapur, Uttara Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X