ಕಾರವಾರದಲ್ಲಿ 'ವೆಲ್ಕಂ ಟು ಮಹಾರಾಷ್ಟ್ರ' ಎನ್ನುತ್ತಿದೆ ಬಿಎಸ್ಎನ್ಎಲ್!
ಕಾರವಾರ, ಡಿಸೆಂಬರ್ 03: ರಾಜ್ಯದ ಗಡಿ ಜಿಲ್ಲೆ ಉತ್ತರ ಕನ್ನಡದ ಕಾರವಾರವನ್ನು ಕರ್ನಾಟಕದ ಕಾಶ್ಮೀರ ಅಂತಲೇ ಕರೆಯಲಾಗುತ್ತದೆ. ಗೋವಾ ರಾಜ್ಯ ಸಮೀಪದಲ್ಲೇ ಇದ್ದು, ಕಾರವಾರವನ್ನು ಗೋವಾಕ್ಕೆ ಸೇರಿಸಬೇಕು ಎಂದು ಕೆಲ ಮರಾಠಿ ಸಂಘಟನೆಗಳು ಹಿಂದಿನಿಂದಲೂ ಕ್ಯಾತೆ ತೆಗೆದುಕೊಂಡು ಬಂದಿದ್ದಾರೆ. ಕೆಲ ದಿನಗಳ ಹಿಂದೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ ಪವಾರ್ ಸಹ ಕಾರವಾರ, ಬೆಳಗಾವಿ, ನಿಪ್ಪಾಣಿ ಸೇರಿದಂತೆ ಕರ್ನಾಟಕದ ಗಡಿ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಹೇಳಿಕೆ ನೀಡಿ ಟೀಕೆಗೊಳಗಾಗಿದ್ದರು.
ಇದರ ಬೆನ್ನಲ್ಲೇ ಕಳೆದ ಕೆಲ ದಿನಗಳಿಂದ ಕಾರವಾರದ ವಿವಿಧೆಡೆ ಓಡಾಟ ನಡೆಸಿದ ಬಿಎಸ್ ಎನ್‌ಎಲ್ ಗ್ರಾಹಕರ ಮೊಬೈಲ್‌ಗೆ ವೆಲ್ ಕಮ್ ಟು ಮಹಾರಾಷ್ಟ್ರ ಬಿಎಸ್ ಎನ್‌ಎಲ್ ನೆಟ್ವರ್ಕ್ ಎನ್ನುವ ಸಂದೇಶ ಬರುತ್ತಿರುವುದು ಗೊಂದಲ ಮೂಡಿಸಿದೆ.
ಈ ಸಂದೇಶ ನೋಡಿದ ಸ್ಥಳೀಯರು ಒಮ್ಮೆ ಕಕ್ಕಾಬಿಕ್ಕಿಯಾಗಿದ್ದು, ಸದ್ದಿಲ್ಲದೇ ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರಿಸಿದರಾ? ಅನ್ನುವ ಅನುಮಾನ ಮೂಡುವಂತಾಗಿದೆ. ಈ ವಿಚಾರ ಕನ್ನಡಪರ ಸಂಘಟನೆಗಳ ಪಿತ್ತ ನೆತ್ತಿಗೇರುವಂತೆ ಮಾಡಿದ್ದು ಕೂಡಲೇ ಉಂಟಾಗಿರುವ ಸಮಸ್ಯೆಯನ್ನು ಸರಿಪಡಿಸಿ ಎಂದು ಬಿಎಸ್ ಎನ್‌ಎಲ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರವಾರಕ್ಕೆ ಗೋವಾ ಗಡಿ ಕೆಲವೇ ಕಿಲೋ ಮೀಟರ್‌ಗಳ ಅಂತರದಲ್ಲಿದ್ದು ಈ ಮೊದಲು ಗಡಿ ಭಾಗದ ಗ್ರಾಮಗಳಲ್ಲಿ ಕೆಲವೊಮ್ಮೆ ಮಾತ್ರ ಮಹಾರಾಷ್ಟ್ರಕ್ಕೆ ಸ್ವಾಗತ ಎನ್ನುವ ಸಂದೇಶ ಬರುತ್ತಿತ್ತು. ಆದರೆ ಇದೀಗ ಕಾರವಾರದ ಕೆಎಚ್ ಬಿ ಕಾಲೋನಿ, ಹಬ್ಬುವಾಡ ಹಾಗೂ ಬೀಚ್‌ನಲ್ಲಿ ತಿರುಗಾಡಿದ ಬಿಎಸ್ ಎನ್‌ಎಲ್ ಗ್ರಾಹಕರಿಗೂ ಈ ರೀತಿ ಸಂದೇಶ ಬರುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ.
ಈ ಬಗ್ಗೆ ಬಿಎಸ್ ಎನ್‌ಎಲ್ ಅಧಿಕಾರಿಗಳನ್ನು ವಿಚಾರಿಸಿದರೆ, ತಾಲ್ಲೂಕಿನ ಅಸ್ನೋಟಿ, ಮಾಜಾಳಿ ಹಾಗೂ ನಗರದಲ್ಲಿ ನೆಟ್ವರ್ಕ್ ಗಳನ್ನ ಮೇಲ್ದರ್ಜೆಗೇರಿಸುವ ಕಾರ್ಯ ಕೈಗೊಳ್ಳಲಾಗಿದ್ದು ಈ ವೇಳೆ ತಾಂತ್ರಿಕ ತೊಂದರೆಯಿಂದ ಈ ಸಂದೇಶ ಬಂದಿರುವ ಸಾಧ್ಯತೆಗಳಿವೆ. ದೂರುಗಳು ಕೇಳಿಬಂದ ಕೂಡಲೇ ಪರಿಶೀಲಿಸಿ ಸಮಸ್ಯೆ ಪರಿಹರಿಸಲಾಗಿದೆ ಎಂದಿದ್ದಾರೆ.

ಗಡಿ ವಿಚಾರವಾಗಿ ಕರ್ನಾಟಕ ಮಹಾರಾಷ್ಟ್ರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಈ ಸಂದರ್ಭದಲ್ಲೇ ಬಿಎಸ್ ಎನ್‌ಎಲ್ ನೆಟ್ವರ್ಕ್ ನ ಎಡವಟ್ಟು ಸಾಕಷ್ಟು ಟೀಕೆಗೂ ಗುರಿಯಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications