ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ ವಾಹನ ಸವಾರರಿಗೆ ಗುಡ್ ನ್ಯೂಸ್
National Highway 766E: ರಾಜ್ಯದ ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ವಾಹನ ಸಂಚಾರಕ್ಕೆ ಅಡೆತಡೆಯದಂತಾಗಿದೆ. ಇನ್ನೂ ಕೆಲವೆಡೆ ಕಾಮಗಾರಿ ನಡೆಯುತ್ತಿರುವ ಮಾರ್ಗಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ಅನುವು ಮಾಡಿಕೊಡಲಾಗಿದೆ. ಈ ನಡುವೆಯೇ ಇದೀಗ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ-766 ಇ ವಾಹನ ಸವಾರರಿಗೆ ಗುಡ್ ನ್ಯೂಸ್ವೊಂದು ಇದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ-766 ಇ ರಸ್ತೆಯಲ್ಲಿ ನಿಷೇಧಿಸಲಾದ ಬಸ್ ಸಂಚಾರವನ್ನು ಮತ್ತೆ ಪುನಃ ಆರಂಭಿಸಲಾಗಿದೆ. ಇದಕ್ಕೆ ಕಾರಣವೂ ಇದೆ. ಶಿರಸಿ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಹಿನ್ನೆಲೆ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಹಾಗೂ ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರವಾರ ಅವರ ವರದಿ ಆಧಾರದ ಮೇಲೆ ಸದರಿ ರಸ್ತೆಯಲ್ಲಿ ಡಿಸೆಂಬರ್, 30, 2025ರಿಂದ ಬಸ್ ಸಂಚಾರಕ್ಕೆ ಅನುವು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಹಾಗಾದ್ರೆ ಯಾವೆಲ್ಲಾ ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಯಾವ ವಾಹನಗಳ ಸಂಚಾರಕ್ಕೆ ಅವಕಾಶ?: ಸಂಚಾರ ಸಮಯದಲ್ಲಿ ಬಸ್ ಹೊರತುಪಡಿಸಿ ಬೇರೆ ಯಾವುದೇ ಭಾರಿ ವಾಹನಗಳಿಗೆ ಈ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಮತ್ತು ಕಾಮಗಾರಿ ಪ್ರಗತಿಯಲ್ಲಿರುವ ಪ್ರದೇಶದಲ್ಲಿ ವೇಗದ ಮೀತಿ 20 ಕಿಲೋ ಮೀಟರ್ಗೆ ಸೀಮಿತ ಆಗಿರಬೇಕು. ಪೊಲೀಸ್ ಇಲಾಖೆ ವತಿಯಿಂದ ಅವಶ್ಯ ಇರುವ ಕಡೆಗಳಲ್ಲಿ ಬ್ಯಾರಿಕೇಡ್ಗಳನ್ನು ಕಡ್ಡಾಯವಾಗಿ ಅಳವಡಿಕೆ ಮಾಡಬೇಕು. ಸಂಚಾರ ದಟ್ಟಣೆ ಆಗದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಸ್ತೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ವೇಗದ ಮಿತಿ ಫಲಕ, ರಸ್ತೆ ತಿರುವು ಪ್ರದೇಶದಲ್ಲಿ ಅಗತ್ಯ ಸೂಚನಾ ಫಲಕಗಳು, ಇನ್ನೀತರ ಅಗತ್ಯ ಸರಕ್ಷಾ ಕ್ರಮಗಳನ್ನು ಅಳವಡಿಕೆ ಮಡುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.
ವಾಹನ ಸಂಚಾರಕ್ಕೆ ಅವಕಾಶ: ಇನ್ನೂ ಆದೇಶವು ಡಿಸೆಂಬರ್ 30ರಿಂದ ಜಾರಿಗೆ ಬಂದಿದೆ. ಭಕ್ತಾದಿಗಳು ಮತ್ತು ಸಾರ್ವಜನಿಕರಿಗೆ ದೊಡ್ಡ ಮಟ್ಟದ ಅನುಕೂಲ ಆದಂತಾಗಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೀಡಿದ ವರದಿಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳು ಈ ತೀರ್ಮಾನ ಕೈಗೊಂಡಿದ್ದಾರೆ.
ವಾಹನ ಸಂಚಾರ ನಿರ್ಬಂಧ ಏಕೆ?: ಈ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಬಸ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ, ಜಾತ್ರೆಯ ಸಮಯದಲ್ಲಿ ವಾಹನ ದಟ್ಟಣೆ ಹಾಗೂ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ ಎನ್ನುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಯಾವೆಲ್ಲಾ ಪ್ರದೇಶಗಳಲ್ಲಿ ಹಾದುಹೋಗಲಿದೆ?: ರಾಷ್ಟ್ರೀಯ ಹೆದ್ದಾರಿ 766 E ಕುಮಟಾ, ಯಲ್ಲಾಪುರ, ಶಿರಸಿ ಮೇಲೆ ಹಾದುಹೋಗುತ್ತದೆ. ಒಟ್ಟಿನಲ್ಲಿ ಇದು ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ನಡುವಿನ ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಂಪರ್ಕವನ್ನು ಹೆಚ್ಚಿಸಿದೆ. ಅದರಲ್ಲೂ ಪ್ರಮುಖ ಪಟ್ಟಣಗಳು ಹಾಗೂ ಗಿರಿಧಾಮಗಳಗೆ ಪ್ರವಾಸ ಮಾಡಲು ತುಂಬಾ ಅನುಕೂಲವಾಗಿದೆ.
ಏನೆಲ್ಲಾ ಪ್ರಯೋಜನಗಳಿವೆ?
* ಸುಗಮ, ಸುರಕ್ಷಿತ ಪ್ರಯಾಣಕ್ಕೆ ಅನುಕೂಲ
* ವ್ಯಾಪಾರಕ್ಕೆ ಉತ್ತೇಜನ
* ಪ್ರವಾಸೋದ್ಯಮದ ಅಭಿವೃದ್ಧಿ
* ಉದ್ಯೋಗ ಹಾಗೂ ಆರ್ಥಿಕ ವೃದ್ಧಿ
* ಗ್ರಾಮೀಣ ಸಂಪರ್ಕ ಸುಧಾರಣೆ
ಇಷ್ಟೆಲ್ಲಾ ಪ್ರಯೋಜನಗಳನ್ನು ನೀಡುವ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೀಗ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಇಲ್ಲಿ ಬಸ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ, ಇದೀಗ ಶಿರಸಿ ಮಾರಿಕಾಂಬ ಜಾತ್ರೆ ಹಿನ್ನೆಲೆ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಇಲ್ಲಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications