ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಲ್ಲಾಪುರ: ಕಾರು-ಲಾರಿ ಡಿಕ್ಕಿ ಒಂದೇ ಕುಟುಂಬದ ಮೂವರು ಸಾವು

By Nayana
|
Google Oneindia Kannada News

ಕಾರವಾರ, ಜೂನ್‌ 26: ಕಾರು ಲಾರಿ ಮಧ್ಯೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 62ರ ಕಿರುವತ್ತಿ ಕ್ರಾಸ್ ಬಳಿಯ ಚಿಕ್ಕಮಾವಳ್ಳಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ವಿನಾಯಕ ಹೆಗಡೆ(35), ಅರ್ಚನ(30) ಹಾಗೂ 2 ವರ್ಷದ ಮಗು ಶ್ರಾವಣಿ ಮೃತ ದುರ್ದೈವಿಗಳು. ಕಾರಿನಲ್ಲಿ ನಾಲ್ಕು ಜನ ಕಾರಿನಲ್ಲಿ ಶಿರಸಿಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದರು. ಲಾರಿ ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ ಬರುತ್ತಿತ್ತು.

ಬೈಕ್ ಅಪಘಾತದಲ್ಲಿ ಬೆಳಗಾವಿ ಜೈನ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾವುಬೈಕ್ ಅಪಘಾತದಲ್ಲಿ ಬೆಳಗಾವಿ ಜೈನ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾವು

ಈ ವೇಳೆ ಚಿಕ್ಕಮಾವಳ್ಳಿ ಗ್ರಾಮದಲ್ಲಿ ವೇಗವಾಗಿ ಬಂದು ಕಾರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Car-Lorry collision: three died

ಇನ್ನು ಈ ಅಪಘಾತದಿಂದ ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಮಗುವನ್ನು ಸಮೀಪದ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Including a two years old boy, three were died in a car and Lorry collision near Kiravatti in Yellapura taluk of Uttar Kannada district on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X