ಹೊನ್ನಾವರ: 2 ಗುಂಪು ಮಧ್ಯೆ ಘರ್ಷಣೆ, ಕಲ್ಲು ತೂರಾಟ, ಲಾಠಿ ಚಾರ್ಜ್
ಹೊನ್ನಾವರ, ಡಿಸೆಂಬರ್ 7: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಬುಧವಾರ ತಡರಾತ್ರಿ 2 ಗುಂಪುಗಳ ಮಧ್ಯ ಘರ್ಷಣೆ ನಡೆದಿದೆ. ಗುಡ್ ಲಕ್ ಹೋಟೆಲ್ ಬಳಿ ಅಪಘಾತದ ವಿಚಾರಕ್ಕೆ ಜಗಳ ಆರಂಭವಾಗಿ ಗುಂಪು ಘರ್ಷಣೆಗೆ ತಿರುಗಿದೆ ಎನ್ನಲಾಗಿದೆ.
ಗುಂಪು ಘರ್ಷಣೆ ವೇಳೆ ಕಲ್ಲು ತೂರಾಟ ನಡೆದಿದ್ದು ಹಲವು ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಲಘು ಲಾಠಿ ಚಾರ್ಜ್ ಮಾಡಿದರು.

ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.












Click it and Unblock the Notifications