ಹೈಸ್ಕೂಲ್ ಹುಡ್ಗಿ ನಾಪತ್ತೆ; ಕಾಡಿನಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆ!
ಯಲ್ಲಾಪುರ, ಫೆಬ್ರವರಿ 26: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯ ವಿದ್ಯಾರ್ಥಿನಿಯೊಬ್ಬಳು ಬುಧವಾರ ಸಂಜೆ ನಾಪತ್ತೆಯಾಗಿದ್ದಳು. ರಾತ್ರಿ ಅರಣ್ಯದಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್ನಲ್ಲಿ ಮನೆಗೆ ಹೊರಟಿದ್ದು, ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ಕುಟುಂಬವರು ದೂರು ನೀಡಿದ್ದರು.
ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ.

ಬೈಕ್ನಲ್ಲಿ ಬಂದ ಮೂವರು ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿ ಅಪಹರಿಸಿದ್ದರು ಎಂದು ಆಕೆ ಹೇಳಿದ್ದಾಳೆ. ರಾತ್ರಿ ವೇಳೆ ಕೈಕಾಲು ಕಟ್ಟಿ ಮನೆಯ ಬಳಿಯ ಕಾಡಿನಲ್ಲಿ ಬಿಟ್ಟು ಹೋಗಿರುವುದಾಗಿ ಹೇಳಿಕೆ ನೀಡಿದ್ದು, ಬೈಕ್ನಲ್ಲಿ ಬಂದವರು ಯಾರು? ಎಂದು ಪತ್ತೆಯಾಗಬೇಕು.
ತನಿಖೆ ಚುರುಕು; ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬುಧವಾರ ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚಿಸಿದರು. ತನಿಖೆಯನ್ನು ಚುರುಕುಗೊಳಿಸಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications