ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳೆ ಹಾನಿಯ ತುರ್ತು ಪರಿಹಾರಕ್ಕಾಗಿ 500 ಕೋಟಿ ರೂ. ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ

By ಉತ್ತರ ಕನ್ನಡ ಪ್ರತಿನಿಧಿ
|
Google Oneindia Kannada News

ಕಾರವಾರ, ಆಗಸ್ಟ್‌ 3 : ರಾಜ್ಯದಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ತುರ್ತು ಪರಿಹಾರಕ್ಕಾಗಿ 500 ಕೋಟಿ ಬಿಡುಗಡೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಭಟ್ಕಳ ತಾಲ್ಲೂಕಿನ ಮುಠಳ್ಳಿಗೆ ಬುಧವಾರ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 14 ಜಿಲ್ಲೆಗಳ 115 ಹಳ್ಳಿಗಳಗೆ ಭಾರಿ ಮಳೆಯಿಂದಾಗಿ ನೆರೆ ಹಾನಿ ಸಂಭವಿಸಿದೆ. ಬುಧವಾರ ಮತ್ತೆ ತುಮಕೂರಿನಲ್ಲಿ ನಾಲ್ಕು ಜನ ಹಾಗೂ ವಿಜಯನಗರದಲ್ಲಿ ಓರ್ವರು ಸಾವನ್ನಪ್ಪಿದ್ದಾರೆ.

ಮಲೆನಾಡು-ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ನಿರೀಕ್ಷೆಮಲೆನಾಡು-ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ನಿರೀಕ್ಷೆ

ಇನ್ನು ಭಟ್ಕಳದಲ್ಲಿಯೂ ಭಾರಿ ಮಳೆಯಿಂದಾಗಿ ಮನೆಗಳಿಗೆ, ಅಂಗಡಿಗಳಿಗೆ ಹಾಗೂ ಬೋಟ್ ಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಸುಮಾರು 40 ಕೋಟಿ ರೂ ಹಾನಿಯಾಗಿರುವ ಬಗ್ಗೆ ಸದ್ಯ ಅಂದಾಜಿಸಲಾಗಿದೆ. ಇದು ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಎಷ್ಟೇ ಹಾನಿಯಾದರೂ ಮನೆ, ಅಂಗಡಿ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸರಕಾರ ಕೂಡಲೇ ಪರಿಹಾರ ಒದಗಿಸಲು ಸಿದ್ದವಿದೆ ಎಂದು ಹೇಳಿದರು.

 21,431 ಹೆಕ್ಟೇರ್ ಪ್ರದೇಶ ಬೆಳೆ

21,431 ಹೆಕ್ಟೇರ್ ಪ್ರದೇಶ ಬೆಳೆ

ರಾಜ್ಯದಲ್ಲಿ 600 ಮನೆಗಳು ಸಂಪೂರ್ಣ, 2 ಸಾವಿರಕ್ಕೂ ಹೆಚ್ಚು ಮನೆಗಳು ತೀವ್ರತರ ಹಾಗೂ 14 ಸಾವಿರಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಯಾಗಿದೆ. ಎಲ್ಲದಕ್ಕೂ ಕೂಡ ಅನುದಾನ ಬಿಡುಗಡೆ ಮಾಡಲು ಈಗಾಗಲೇ ಸೂಚಿಸಲಾಗಿದೆ. 21,431 ಹೆಕ್ಟೇರ್ ಪ್ರದೇಶ ಬೆಳೆ ನಾಶವಾಗಿದ್ದು, ಇದು ಇನ್ನೂ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಜಂಟಿ ಸಮೀಕ್ಷೆ ಮಾಡಬೇಕಾಗಿರುವುದರಿಂದ ವರದಿ ಬಂದ ತಕ್ಷಣ ಪರಿಹಾರ ವಿತರಿಸಲಾಗುವುದು ಎಂದರು.

 ಭಟ್ಕಳದಲ್ಲುಂಟಾದ ಹಾನಿಗೆ ಪರಿಹಾರ

ಭಟ್ಕಳದಲ್ಲುಂಟಾದ ಹಾನಿಗೆ ಪರಿಹಾರ

ಇನ್ನು ಭಟ್ಕಳದಲ್ಲಿಯೂ ಭಾರಿ ಮಳೆಯಿಂದಾಗಿ ಮನೆಗಳಿಗೆ, ಅಂಗಡಿಗಳಿಗೆ ಹಾಗೂ ಬೋಟ್ ಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ಸುಮಾರು 40 ಕೋಟಿ ರೂ ಹಾನಿಯಾಗಿರುವ ಬಗ್ಗೆ ಸದ್ಯ ಅಂದಾಜಿಸಲಾಗಿದೆ. ಇದು ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಎಷ್ಟೇ ಹಾನಿಯಾದರೂ ಮನೆ, ಅಂಗಡಿ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸರಕಾರ ಕೂಡಲೇ ಪರಿಹಾರ ಒದಗಿಸಲು ಸಿದ್ದವಿದೆ ಎಂದು ಹೇಳಿದರು.

 ಸಾವನ್ನಪ್ಪಿದವರಿಗೆ ಪರಿಹಾರ

ಸಾವನ್ನಪ್ಪಿದವರಿಗೆ ಪರಿಹಾರ

ಇನ್ನು ಭೀಕರ ಮಳೆಯಿಂದ ಗುಡ್ಡ ಕುಸಿದು ಸಾವನ್ನಪ್ಪಿದ ಕುಟುಂಬಕ್ಕೆ ಸಾಂತ್ವನ ಹೇಳಿ ಸಾವನ್ನಪ್ಪಿದ ಪ್ರತಿಯೊಬ್ಬರಿಗೂ ತಲಾ 5 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ಅವರ ಕುಟುಂಬದ ಮಕ್ಕಳಿಗೆ ಪಿ.ಜಿ ವರೆಗೆ ಉಚಿತ ಶಿಕ್ಷಣ ಮತ್ತು ವಸತಿ ಸೌಕರ್ಯವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
‌ಗುಡ್ಡ ಕುಸಿತದಿಂದ ಸಾವಿಗೀಡಾದ ಪ್ರದೇಶವಾದ ಇಂತಹ ಘಟನೆ ನಿಜಕ್ಕೂ ವಿಷಾದನೀಯ, ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಯಾವ ಮನೆಗಳಿಗೆ ತೊಂದರೆ ಇದೆ ಅಂತಹ ಮನೆಯವವರನ್ನು ಈಗಾಗಲೇ ಸ್ಥಳ ಬದಲಾವಣೆ ಮಾಡಲು ನೋಟಿಸ್ ನೀಡಲಾಗಿದೆ ಎಂದರು.

ಜಿಲ್ಲೆಯ ಬಹು ದಿನಗಳ ಬೇಡಿಕೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣದ ಸಂಪೂರ್ಣ ಮಾಹಿತಿ ತೆಗೆದುಕೊಂಡು ಅದಕ್ಕೆ ಸಂಬಂಧಿಸಿದಂತೆ ಕಾರ್ಯ ಕೈಗೊಳ್ಳಲಾಗುವುದು ಹಾಗೂ ಈಗ ಇರುವ ಆಸ್ಪತ್ರೆಗಳಿಗೆ ವೈದ್ಯರ ಕೊರತೆಯಿದ್ದು ಅದನ್ನು ಕೂಡ ನಿವಾರಿಸಲಾಗುವುದು ಎಂದು ಹೇಳಿದರು.

 ನೆರೆ ಹಾವಳಿ ಇದ್ದಾಗ ಉತ್ಸವ ಬೇಕಿತ್ತೇ?

ನೆರೆ ಹಾವಳಿ ಇದ್ದಾಗ ಉತ್ಸವ ಬೇಕಿತ್ತೇ?

ಸಿದ್ದರಾಮಯ್ಯ ಅವರು ಸಿದ್ದರಾಮೋತ್ಸವ ಮಾಡಿಕೊಳ್ಳುತ್ತಿರುವುದು ಸಂತೋಷ. ಅವರು ಇನ್ನು ಹೆಚ್ಚು ಕಾಲ ಬಾಳಲಿ ಎಂದ ಅವರು, ಇಷ್ಟು ಸಮಸ್ಯೆ, ನೆರೆ ಹಾವಳಿ ಇದ್ದಾಗ ಈ ರೀತಿ ವಯಕ್ತಿಕ ಉತ್ಸವ ಮಾಡಿಕೊಳ್ಳಬೇಕೋ? ಬೇಡವೋ ಎಂಬುದರ ಬಗ್ಗೆ ಸಿದ್ದರಾಮಯ್ಯರೇ ಯೋಚನೆ ಮಾಡಬೇಕು ಎಂದು ಹೇಳಿದರು. ಕಂದಾಯ ಇಲಾಖೆ ಸಚಿವ ಆರ್. ಅಶೋಕ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಇಲಾಖೆ ಸಚಿವ ಶಿವರಾಂ ಹೆಬ್ಬಾರ್, ಹಾಗೂ ಇನ್ನಿತರ ಶಾಸಕರು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.

English summary
Karnataka Chief Minister Basavaraj Bommai on Wednesday announced sum of Rs 500 crore will be released as an immediate measure to restore basic amenities and infrastructure damaged during the heavy rains in across Karnataka,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X