ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜು.16ರಂದು ಕಾರವಾರಕ್ಕೆ ಸಿಎಂ ಯಡಿಯೂರಪ್ಪ ಆಗಮನ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಜುಲೈ 10: ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಕಾರವಾರ ನಗರಕ್ಕೆ ಬಿ.ಎಸ್. ಯಡಿಯೂರಪ್ಪ ಆಗಮಿಸುತ್ತಿದ್ದಾರೆ. ಜುಲೈ 16ರಂದು ನಗರಕ್ಕೆ ಸಿಎಂ ಆಗಮಿಸಲಿದ್ದು, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಮಾರ್ಚ್ ತಿಂಗಳನಲ್ಲಿಯೇ ಶಾಸಕಿ ರೂಪಾಲಿ ನಾಯ್ಕ ಮುಖ್ಯಮಂತ್ರಿ ಯಡಿಯೂರಪ್ಪಗೆ ಲಿಖಿತ ಮನವಿ ಮಾಡಿ, ಕ್ಷೇತ್ರಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸುವಂತೆ ಕೋರಿದ್ದರು. ಆ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿಎಸ್‌ವೈ ಕಾರವಾರಕ್ಕೆ ಆಗಮಿಸಿ ಉದ್ಘಾಟನೆ ನೆರವೇರಿಸಲು ಸಮ್ಮತಿಸಿದ್ದರು.

ಆದರೆ ಬೆಳಗಾವಿ ಉಪ ಚುನಾವಣೆ, ಕೊರೊನಾ ಹೆಚ್ಚಳ ಇನ್ನಿತರ ಕಾರಣದಿಂದ ಸಿಎಂಗೆ ಬರಲು ಸಾಧ್ಯವಾಗಿರಲಿಲ್ಲ. ಮತ್ತೆ ಸಿಎಂಗೆ ಶಾಸಕಿ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಜುಲೈ 16ರಂದು ಮುಖ್ಯಮಂತ್ರಿ ಕಾರವಾರಕ್ಕೆ ಬರಲಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೂ ಮುಖ್ಯಮಂತ್ರಿ ಕಾರ್ಯಾಲಯದಿಂದ ಪತ್ರ ಬರೆದು ಅಧಿಕೃತ ಮಾಹಿತಿ ನೀಡಲಾಗಿದೆ.

CM Yediyurappa Will Arrives To Karwar On July 16

ಸಿಎಂ ಯಡಿಯೂರಪ್ಪ ಕಾರವಾರ ಮೆಡಿಕಲ್ ಕಾಲೇಜು ಆವರಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ 450 ಹಾಸಿಗೆ ಸುಸಜ್ಜಿತ ಆಸ್ಪತ್ರೆ ಕಟ್ಟಡ ಕಾಮಗಾರಿ, ಮಾಲಾದೇವಿ ಮೈದಾನ ಮೇಲ್ದರ್ಜೆಗೇರಿಸುವ ಕಾಮಗಾರಿ, ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಕಾಮಗಾರಿ, ಲೋಕೋಪಯೋಗಿ ಇಲಾಖೆ ನೂತನ ಕಟ್ಟಡ ಹಾಗೂ ಪ್ರವಾಸಿ ಮಂದಿರ ನೂತನ ಕಟ್ಟಡ ಕಾಮಗಾರಿ, ರಾಮನಗುಳಿ ಕಲ್ಲೇಶ್ವರ ನಡುವಿನ ಸೇತುವೆ ಕಾಮಗಾರಿ, ಸುಂಕಸಾಳ ಹಾಗೂ ಡೋಂಗ್ರಿ ನಡುವೆ ತೂಗು ಸೇತುವೆ ಕಾಮಗಾರಿ, ಇಂದಿರಾ ಗಾಂಧಿ ವಸತಿ ಶಾಲೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

"ಸುಮಾರು 200 ಕೋಟಿಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಅಂಕೋಲಾ ತಾಲೂಕಿನಲ್ಲಿ ಸುಮಾರು 15 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ,'' ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಚನ್ನಬಸವೇಶ ತಿಳಿಸಿದ್ದಾರೆ.

Recommended Video

ಸಲುಗೆ ಕೊಟ್ಟಿದ್ದು ಜಾಸ್ತಿ ಆಯ್ತಾ ಎಂದು ಅಭಿಮಾನಿ ತಲೆಗೆ ಹೊಡೆದ ಡಿಕೆಶಿ | Oneindia Kannada

English summary
CM Yediyurappa will arrives in Karwar on July 16 to participate in the inauguration of various works.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X