ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಬಾಂಬ್‌ ಕಾರ್ಖಾನೆ ಮಾತ್ರ ಪ್ರಾರಂಭ: ನಳಿನ್ ಕುಮಾರ್ ಕಟೀಲ್‌ ಟೀಕೆ

ಕಾರವಾರ, ಡಿಸೆಂಬರ್, 20: ಒಡೆದು ಆಳುವ, ತುಷ್ಠೀಕರಣ ರಾಜನೀತಿಯಿಂದಾಗಿ ಕಾಂಗ್ರೆಸ್ ಮೂಲೆ ಗುಂಪಾಗುತ್ತಿದೆ. ಮುಂದಿನ ಚುನಾವಣೆಯಲ್ಲೂ ಕುಟುಂಬ, ಪರಿವಾರ ರಾಜಕಾರಣ ಹೋಗಿ ಅಭಿವೃದ್ಧಿ ರಾಜಕಾರಣ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಮುರುಡೇಶ್ವರದಲ್ಲಿ ಭವಿಷ್ಯ ನುಡಿದರು. ಅಲ್ಲದೇ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಬರೀ ಬಾಂಬ್‌ ಕಾರ್ಖಾನೆಯನ್ನು ಮಾತ್ರ ಆರಂಭಿಸಿದ್ದರು ಎಂದು ಆರೋಪಿಸಿದರು.

ಮುರುಡೇಶ್ವರದ ಆರ್‌ಎನ್ಎಸ್ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಭಯೋತ್ಪಾದನೆಯನ್ನು ಸಮರ್ಥನೆ ಮಾಡುತ್ತಿರುವ, ಭಯೋತ್ಪಾದಕರಿಗೆ ಬೆಂಗಾವಲಾಗಿ ನಿಂತಿರುವ ಕಾಂಗ್ರೆಸ್ ಇದೊಂದು ಭಯೋತ್ಪಾದಕ ಪಕ್ಷವಾಗಿದೆ. ಉಗ್ರನ ಎನ್‌ಕೌಂಟರ್ ಮಾಡಿದಾಗ ಕಾಂಗ್ರೆಸ್ ರಾಷ್ಟ್ರೀಯ ಮುಖಂಡರೊಬ್ಬರು ಕಣ್ಣೀರು ಹಾಕುತ್ತಾರೆ. ಸೈನಿಕರು ಸತ್ತಾಗ ಇವರು ಕಣ್ಣೀರು ಹಾಕುವುದಿಲ್ಲ. ಭ್ರಷ್ಟಾಚಾರಕ್ಕೆ ಅತಿ ಹೆಚ್ಚು ಆದ್ಯತೆ ಕೊಟ್ಟಿದ್ದು ಕಾಂಗ್ರೆಸ್ ಆಗಿದೆ. ಮೋದಿ ಬಂದ ಮೇಲೆ ಭ್ರಷ್ಟಾಚಾರ ಇಲ್ಲವಾಗಿದೆ ಎಂದು ಹೇಳಿದರು.

ಉದ್ಯೋಗದ ಬಗ್ಗೆ ಮಾತನಾಡುವ ಕಾಂಗ್ರೆಸ್ ಆಡಳಿತದಲ್ಲಿ ಕೇವಲ ಬಾಂಬಿನ‌ ಕಾರ್ಖಾನೆಗಳು ಮಾತ್ರ ಪ್ರಾರಂಭವಾಗಿದ್ದವು. ಭಯೋತ್ಪಾದನೆಗೆ ಪ್ರೇರಣೆ ನೀಡಲಾದ ಅಲ್ಪಸಂಖ್ಯಾತರ ತುಷ್ಟಿಕರಣ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಒಡೆದು ಆಳುವ ನೀತಿಯನ್ನು ಅನುಸರಿಸಿದೆ. ಇದೇ ಮಾನಸಿಕತೆಯಲ್ಲಿ ಇಸ್ಲಾಂನಲ್ಲಿ ಜಯಂತಿಗೆ ಬೇಡಿಕೆ ಇರಲಿಲ್ಲ. ಆದರೂ ಟಿಪ್ಪುವಿನ ಜಯಂತಿ ಆಚರಣೆಗೆ ಸಿದ್ದರಾಮಯ್ಯ ಮುಂದಾಗಿದ್ದರು. ಸಾವರ್ಕರ್ ವಿರೋಧ ಮಾಡುವ ಅವರು ಇತಿಹಾಸ ಓದಬೇಕು ಎಂದರು.

 ಕಾಂಗ್ರೆಸ್‌ ವಿರುದ್ಧ ಕಟೀಲ್‌ ಆರೋಪ

ಕಾಂಗ್ರೆಸ್‌ ವಿರುದ್ಧ ಕಟೀಲ್‌ ಆರೋಪ

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪೀಕರ್ ಕಾಗೇರಿ ಅವರು ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರ ಫೋಟೋ ಅನಾವರಣ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಿದ್ದಾರೆ. ಆದರೆ ಕಾಂಗ್ರೆಸ್ ಈ ಬಗ್ಗೆ ಟೀಕೆ ಮಾಡುತ್ತಿದೆ. ಯಾವುದೋ ಒಂದು ಕುಟುಂಬ ಸ್ವಾತಂತ್ರ್ಯ ತಂದುಕೊಟ್ಟಿದ್ದು ಎಂದು ತಿಳಿದುಕೊಂಡಿರುವ ಕಾಂಗ್ರೆಸ್ಸಿಗರಿಗೆ ಇಂತಹ ಅನೇಕ ಹೋರಾಟಗಾರರು ಕಣ್ಣಿಗೆ ಕಂಡಿಲ್ಲ. ಅಲ್ಲದೆ ಆ ಕುಟುಂಬದ ಹೆಸರಿನಲ್ಲಿ ಅಧಿಕಾರ ಪಡೆಯುವ ಉದ್ದೇಶದಿಂದ ಕಾಂಗ್ರೆಸ್ಸಿಗರು ಹೋರಾಟಗಾರರನ್ನೇ ಮರೆಯುವಂತಾಗಿದೆ. ಆದರೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದ ಮೇಲೆ ಅವರೆಲ್ಲರನ್ನು ನೆನೆಯುವ ಕೆಲಸ ಮಾಡಿದೆ ಎಂದರು.

 ಈಗ ಇರುವುದು ನಕಲಿ ಕಾಂಗ್ರೆಸ್ ಮಾತ್ರ

ಈಗ ಇರುವುದು ನಕಲಿ ಕಾಂಗ್ರೆಸ್ ಮಾತ್ರ

ಕಾಂಗ್ರೆಸ್‌ ಮನಸ್ಥಿತಿ ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ಬದಲಾವಣೆ ಆಗಿದೆ. ಇದೀಗ ನಕಲಿ ಕಾಂಗ್ರೆಸ್ ಮಾತ್ರ ಇದೆ. ಇದೇ ಕಾರಣಕ್ಕೆ ಮಹತ್ಮಾಗಾಂಧಿ ಅವರು ವಿಸರ್ಜನೆ ಮಾಡಬೇಕು ಎಂದಿದ್ದರು. ಗಾಂಧೀಜಿ‌ ರಾಮ ರಾಜ್ಯದ ಪರಿಕಲ್ಪನೆ ನೀಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಆದಮೇಲೆ ಗಾಂಧಿ ಅವರ ಕನಸು ನನಸ್ಸಾಗಿದೆ. ಇದೇ ಕಾರಣಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ, ಕಾಶಿ ಕಾರಿಡಾರ್ ನಿರ್ಮಾಣವಾಗುತ್ತಿದೆ. ಇನ್ನು ಗುಂಡಾಗಿರಿ ರಾಜಕಾರಣದಿಂದ ಬಂದ ಡಿ.ಕೆ.ಶಿವಕುಮಾರ್‌ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಭಯೋತ್ಪಾದನೆಯನ್ನೇ ಸಮರ್ಥನೆ ಮಾಡುವ ಕೆಲಸಕ್ಕಿಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಗೋ ಹಂತಕರಿಗೆ ಕಾಂಗ್ರೆಸ್‌ನಿಂದ ಪರಿಹಾರ

ಗೋ ಹಂತಕರಿಗೆ ಕಾಂಗ್ರೆಸ್‌ನಿಂದ ಪರಿಹಾರ

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 24 ಹಿಂದೂಗಳ ಹತ್ಯೆಯಾದರೂ ಪರಿಹಾರ ನೀಡಿಲ್ಲ. ಆದರೆ ಶೃಂಗೇರಿಯಲ್ಲಿ ಹತ್ಯೆಯಾದ ಗೋ ಹಂತಕರಿಗೆ ಪರಿಹಾರ ನೀಡಿದೆ. ಲ್ಯಾಂಡ್ ಮಾಫಿಯಾ, ಡ್ರಗ್ಸ್ ಮಾಫಿಯಾಗೆ ಬೆಂಬಲ ನೀಡಿತ್ತು. ಆದರೆ ಇದೀಗ ಬೊಮ್ಮಾಯಿ ಸರ್ಕಾರ ಎಲ್ಲವನ್ನು ನಿಯಂತ್ರಣ ಮಾಡಿದೆ. ಮತ್ತೊಂದೆಡೆ ಖರ್ಗೆಯನ್ನು ಮುಗಿಸಿ, ಪರಮೇಶ್ವರ್‌ ಅವರನ್ನು ಸೋಲಿಸಿದ್ದು ಸಿದ್ದರಾಮಯ್ಯನವರೇ ಆಗಿದ್ದಾರೆ ಎಂದರು.

 ಅಹಿಂದ ಹೆಸರಿನಲ್ಲೇ ಅಧಿಕಾರ ಕಬಳಿಕೆ

ಅಹಿಂದ ಹೆಸರಿನಲ್ಲೇ ಅಧಿಕಾರ ಕಬಳಿಕೆ

ಅಂಬೇಡ್ಕರ್ ಫೋಟೋ ಕೂಡ ಇಡಲು ಬಿಡದ ಸಿದ್ದರಾಮಯ್ಯ ಅಹಿಂದ ಹೆಸರಿನಲ್ಲೇ ಅಧಿಕಾರ ಪಡೆದುಕೊಂಡಿದ್ದರು. ಕುಮಾರಣ್ಣ ನಮ್ಮ‌ ಮುಖ್ಯಮಂತ್ರಿ ಮುಸಲ್ಮಾನ ಎಂದು ಹೇಳುತ್ತಾರೆ. ಮತ್ತೊಂದು ಕಡೆ ಮಹಿಳಾ‌ ಮುಖ್ಯಮಂತ್ರಿ, ಇನ್ನೊಂದೆಡೆ ದಲಿತ ಮುಖ್ಯಮಂತ್ರಿ ಎನ್ನುತ್ತಾರೆ ಎಂದರು. ಅಭ್ಯರ್ಥಿಯ ಹೆಸರು ಹೇಳಿದರೆ ಕುಮಾರಣ್ಣನ ಹೆಂಡತಿ ಬಿಟ್ಟು ಹೋಗುತ್ತಾರೆ. ಕುಮಾರಣ್ಣ ಹಾಗೂ ರೇವಣ್ಣನ ನಡುವೆ ಜಗಳವಾಗಿದ್ದು, ಅವರಲ್ಲಿ ಅಭ್ಯರ್ಥಿಗಳಿಲ್ಲ ಎಂದು ಟೀಕಿಸಿದರು.

ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಬಿಜೆಪಿ ಈ ಬಾರಿ 150 ಸ್ಥಾನಗಳನ್ನು ಗೆಲ್ಲಲಿದೆ. ಎಂದೂ ಆಗದಷ್ಟು ಅಭಿವೃದ್ಧಿ ಕೆಲಸಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಆಗಿದೆ. ಎಲ್ಲ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಜವಬ್ದಾರಿಗಳನ್ನು ಪಾಲಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಸುನೀಲ್ ನಾಯ್ಕ, ರೂಪಾಲಿ ನಾಯ್ಕ, ದಿನಕರ ಶೆಟ್ಟಿ ಸೇರಿದಂತೆ ರಾಜ್ಯದಿಂದ ಆಗಮಿಸಿದ 160ಕ್ಕೂ ಹೆಚ್ಚು ಪದಾಧಿಕಾರಿಗಳು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+