ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಭೀತಿ: ಕಾರವಾರ ಬಂದರಿನಲ್ಲಿ ಹೈ ಅಲರ್ಟ್

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಮಾರ್ಚ 15: ರಾಜ್ಯ ಸೇರಿದಂತೆ ಕಾರವಾರದಲ್ಲೂ ಕೊರೊನಾ ಭೀತಿ ಕಂಡು ಬರುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಕಾರವಾರ ಬಂದರು ಸೇರಿದಂತೆ ಜಿಲ್ಲೆಯ ಎಲ್ಲ ಪ್ರವಾಸಿ ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶ ಕುಮಾರ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಕೋರ್ಟ ಹಾಲ್ ನಲ್ಲಿ ಬುಧವಾರ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಸ್ಪತ್ರೆ ಮುಖ್ಯಸ್ಥರು, ವೈಧ್ಯಕೀಯ ಕಾಲೇಜು ಮುಖ್ಯಸ್ಥರು, ನೌಕಾ ನೆಲೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಕಾರವಾರದಲ್ಲಿ ನಿರ್ಮಾಣವಾಗಲಿದೆಯಾ ಅಂತರಾಷ್ಟ್ರೀಯ ಕ್ರೀಡಾಂಗಣ?ಕಾರವಾರದಲ್ಲಿ ನಿರ್ಮಾಣವಾಗಲಿದೆಯಾ ಅಂತರಾಷ್ಟ್ರೀಯ ಕ್ರೀಡಾಂಗಣ?

ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯ ಸಾಧಿಸಿ ಕೊರೊನಾ ಸೋಂಕು ಜಿಲ್ಲೆಗೆ ಯಾವುದೇ ಮಾರ್ಗದಲ್ಲಿ ಬರದಂತೆ ಎಲ್ಲ ರೀತಿಯ ಸೂಕ್ತ ಕ್ರಮ ಕೈಗೊಂಡು ಕಟ್ಟೆಚ್ಚರ ವಹಿಸಬೇಕೆಂದು ಅವರು ತಿಳಿಸಿದರು.

Corona Panic: High Alert At Karwar Harbor

ಕಾರವಾರ ಬಂದರಿಗೆ ವಿದೇಶಿ ಹಡಗುಗಳು ಆಗಮಿಸುವುದರಿಂದ ಮುಖ್ಯವಾಗಿ ಅಲ್ಲಿ ತೀವ್ರ ನಿಗಾ ಇರಿಸಬೇಕು ಮತ್ತು ಆಗಮಿಸಿದ ಹಡುಗುಗಳಲ್ಲಿ ವೈದ್ಯಕೀಯ ತಪಾಸಣೆಯನ್ನು ಮಾಡುವುದು ಕಡ್ಡಾಯವಾಗಿದ್ದು, ಇದರ ಮಾಹಿತಿಯನ್ನು ಪ್ರತಿ ದಿನ ಜಿಲ್ಲಾ ಆರೋಗ್ಯ ಅಧಿಕಾರಿಗಳು ಪಡೆದು ರಾಜ್ಯ ಸರಕಾರಕ್ಕೆ ಮಾಹಿತಿ ನೀಡಬೇಕೆಂದರು.

ಕಾರವಾರದಲ್ಲಿ ಕಾರವಾರದಲ್ಲಿ "ಟ್ಯುಪೊಲೆವ್' ಮ್ಯೂಸಿಯಂ; ಒಪ್ಪಂದಕ್ಕೆ ಸಹಿ

ಕದಂಬ ನೌಕಾನೆಲೆ ಅಧಿಕಾರಿ ಮಾತನಾಡಿ, ""ನೌಕಾನೆಲೆಯಲ್ಲಿ ರೋಗಿಗಳ ಆರೈಕೆಗಾಗಿ ಸಾಕಷ್ಟು ಹಾಸಿಗೆಗಳ ವ್ಯವಸ್ಥೆ ಇರುವುದರಿಂದ, ಜಿಲ್ಲಾಸ್ಪತ್ರೆಗೆ 100 ಹಾಸಿಗೆಗಳನ್ನು ನೀಡಲು ಸಿದ್ದವಿದೆ. ಅಲ್ಲದೇ ಈಗಾಗಲೇ ಸಾಕಷ್ಟು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ ಮತ್ತು ವಿದೇಶದಿಂದ ಬರುವ ಹಡುಗುಗಳಲ್ಲಿರುವ ಪ್ರಯಾಣಿಕರು ಮತ್ತು ನಾವಿಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಮುಂಚಿತವಾಗಿಯೇ ಎಲ್ಲ ಹಡುಗುಗಳಲ್ಲಿ ವೈದ್ಯಕೀಯ ತಂಡವನ್ನು ಇರಿಸಲಾಗಿದೆ'' ಎಂದು ಮಾಹಿತಿ ನೀಡಿದರು.

Corona Panic: High Alert At Karwar Harbor

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಮುಖವಾಗಿ ಗೋಕರ್ಣಕ್ಕೆ ವಿದೇಶಿ ಪ್ರವಾಸಿಗರು ಆಗಮಿಸುವುದರಿಂದ ಅಲ್ಲಿ ವೈದ್ಯರು ತಂಡ ರಚಿಸಿಕೊಂಡು ಮನೆ ಮನೆಗೆ ಭೇಟಿ ಮಾಡಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕೆಂದು ಹೆಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅವರು ಮಾತನಾಡಿ, ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳಬಹುದಾದ ಎಲ್ಲ ಮುಂಜಾಗ್ರತ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಗೋವಾ ಮತ್ತು ಮಂಗಳೂರು ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರನ್ನು ವೈದ್ಯರ ಸಹಾಯದೊಂದಿಗೆ ತಪಾಸಣೆ ಮಾಡುವ ಮೂಲಕ ಹೆಚ್ಚಿನ ಜಾಗೃತಿ ವಹಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಸ್ಪತ್ರೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

English summary
The District Collector Dr Kumaraswamy said that Precautionary action at all tourist places in the Karwar district, including the Karava Port.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X