ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೋಕರ್ಣ, ಮುರ್ಡೇಶ್ವರ ಖಾಲಿ ಖಾಲಿ; ರಜಾ ಸಮಯದಲ್ಲೂ ಜನ ಇಲ್ಲ

|
Google Oneindia Kannada News

ಕಾರವಾರ, ಮಾರ್ಚ್ 9: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ವೈರಸ್ ಭಾರತಕ್ಕೂ ಕಾಲಿಟ್ಟು ಎಲ್ಲರನ್ನು ಕಂಗೆಡಿಸಿದೆ. ರಾಜ್ಯದಲ್ಲೂ ಕೊರೊನಾ ಭೀತಿ ಎದುರಾಗಿದ್ದು, ಸಾರ್ವಜನಿಕರು ಹೊರಗೆ ಅಡ್ಡಾಡುವುದಕ್ಕೂ ಹೆದರುವಂತಾಗಿದೆ. ಇಷ್ಟೇ ಅಲ್ಲ, ಪ್ರವಾಸೋದ್ಯಮದ ಮೇಲೂ ಕೊರೊನಾ ವೈರಸ್ ಕರಿಛಾಯೆ ಬಿದ್ದಿದ್ದು, ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ.

ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಮುರ್ಡೇಶ್ವರ, ಗೋಕರ್ಣದಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಪ್ರವಾಸೋದ್ಯಮದ ಮೇಲೆ 'ಕೊರೊನಾ' ಪ್ರಭಾವ ಬೀರಿದೆ. ಗೋಕರ್ಣಕ್ಕೆ ವಿದೇಶಿ ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಾರೆ. ಆದರೆ, ಕಳೆದ ಮೂರ್ನಾಲ್ಕು ದಿನಗಳಿಂದ ಭಾರತಕ್ಕೆ ಕೊರೊನಾ ಕಾಲಿಟ್ಟ ಸುದ್ದಿಗಳು ಹೆಚ್ಚು ಹೆಚ್ಚಾಗಿ ಪ್ರಸಾರ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಪ್ರವಾಸಿ ತಾಣದತ್ತ ಮುಖ ಮಾಡುತ್ತಿಲ್ಲ.

 ರಜಾ ತಿಂಗಳಾದ ಮಾರ್ಚ್, ಏಪ್ರಿಲ್ ನಲ್ಲೂ ಜನರಿಲ್ಲ

ರಜಾ ತಿಂಗಳಾದ ಮಾರ್ಚ್, ಏಪ್ರಿಲ್ ನಲ್ಲೂ ಜನರಿಲ್ಲ

ಸಾಮಾನ್ಯವಾಗಿ ಮಾರ್ಚ್ ಹಾಗೂ ಏಪ್ರಿಲ್ ತಿಂಗಳು ಪ್ರವಾಸಿಗರನ್ನು ಅತಿ ಹೆಚ್ಚಾಗಿ ಆಕರ್ಷಿಸುವ ಸಮಯ. ಆದರೆ, ಈ ಬಾರಿ ಕೊರೊನಾ ಭೀತಿಯಿಂದ ಇದೇ ಸಮಯದಲ್ಲಿ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖವಾದಂತಾಗಿದೆ.

ಕೊರೊನಾ ಭೀತಿ: ತಿರುಪತಿ ಬರುವ ಭಕ್ತಾದಿಗಳಿಗೆ ಸೂಚನೆಕೊರೊನಾ ಭೀತಿ: ತಿರುಪತಿ ಬರುವ ಭಕ್ತಾದಿಗಳಿಗೆ ಸೂಚನೆ

ಕೊರೊನಾ ಭೀತಿಯಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದ್ದು, ಪ್ರವಾಸಿ ತಾಣಗಳಲ್ಲಿ ವ್ಯಾಪಾರ ವ್ಯವಹಾರ ಸಹ ಇಳಿಮುಖವಾಗಿದೆ. ಮಾರ್ಚ್, ಏಪ್ರಿಲ್ ನಲ್ಲಿ ಹೆಚ್ಚಾಗಿ ಪ್ರವಾಸಿಗರು ಆಗಮಿಸುತ್ತಿದ್ದರಿಂದ ವ್ಯಾಪಾರ ವ್ಯವಹಾರ ಚೆನ್ನಾಗಿ ನಡೆದು ವ್ಯಾಪಾರಿಗಳು ಲಾಭ ಗಳಿಸುತ್ತಿದ್ದರು. ಈ ಬಾರಿ ಪ್ರವಾಸಿಗರ ಸಂಖ್ಯೆ ಅತಿ ಕಡಿಮೆಯಾಗಿದ್ದು ವ್ಯಾಪಾರಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

 ಜೊತೆಯಾಗಿದೆ ಮಂಗನ ಕಾಯಿಲೆ ಭೀತಿ

ಜೊತೆಯಾಗಿದೆ ಮಂಗನ ಕಾಯಿಲೆ ಭೀತಿ

ಒಂದೆಡೆ ಕೊರೊನಾ ಭೀತಿಯಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖ ಕಂಡಿದ್ದರೆ, ಮತ್ತೊಂದೆಡೆ ಮಲೆನಾಡಿನಲ್ಲಿ ಮಂಗನ ಕಾಯಿಲೆ ಭೀತಿ ಎದುರಾಗಿದೆ. ಹೀಗಾಗಿ ಜಿಲ್ಲೆಯ ಕರಾವಳಿ ಪ್ರವಾಸಿ ತಾಣಗಳಲ್ಲಷ್ಟೇ ಅಲ್ಲದೇ, ಮಲೆನಾಡಿಗೂ ಪ್ರವಾಸಿಗರು ಭೇಟಿ ನೀಡಲು ಭಯ ಬೀಳುತ್ತಿದ್ದಾರೆ. ಜಿಲ್ಲೆಯ ಮುಂಡಗೋಡ ಹಾಗೂ ಗೋಕರ್ಣವನ್ನು ಕ್ಲಸ್ಟರ್ ಎಂದು ಆರೋಗ್ಯ ಇಲಾಖೆಯಿಂದ ಗುರುತಿಸಲಾಗಿದ್ದು, ಇಲ್ಲಿ ಪ್ರವಾಸಕ್ಕೆ ಬಂದಿರುವ ವಿದೇಶಿ ಪ್ರವಾಸಿಗರ ಮಾಹಿತಿ ಹಾಗೂ ಕೊರೊನಾ ವೈರಸ್ ಲಕ್ಷಣದ ಕುರಿತು ಸಮೀಕ್ಷೆ ನಡೆಸುವ ಸಲುವಾಗಿ ಎಲ್ಲಾ ರೆಸಾರ್ಟ್ ಮತ್ತು ಲಾಡ್ಜ್ ಗಳಿಗೆ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.

 ಗೋಕರ್ಣದಲ್ಲಿ 37 ತಂಡಗಳ ರಚನೆ

ಗೋಕರ್ಣದಲ್ಲಿ 37 ತಂಡಗಳ ರಚನೆ

ಕೊರೊನಾ ಕುರಿತು ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಗೋಕರ್ಣದಲ್ಲಿ 37 ತಂಡಗಳನ್ನು ರಚಿಸಲಾಗಿದ್ದು, ಮುಂಡಗೋಡದಲ್ಲಿ 13 ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಗೋಕರ್ಣ, ಮುಂಡಗೋಡ ಸುತ್ತಮುತ್ತಲಿನಲ್ಲಿ ವಾಸ ಹೂಡಿರುವ ವಿದೇಶಿ ಪ್ರವಾಸಿಗರ ಮಾಹಿತಿಗಳನ್ನು ಸಂಗ್ರಹಿಸಿದೆ. ವಿವಿಧ ಪ್ರದೇಶದಲ್ಲಿ ತಂಗಿರುವ ಪ್ರವಾಸಿಗರನ್ನು ಭೇಟಿಯಾಗಿ, ಮಾಹಿತಿಗಳನ್ನು ಕಲೆ ಹಾಕಿದೆ.

ಕೊರೊನಾ ವೈರಸ್ ಆತಂಕ; ಇಂದಿನಿಂದ ಗಣಪತಿ ಆಶ್ರಮದ ಹಲವು ಸ್ಥಳಗಳು ಬಂದ್ಕೊರೊನಾ ವೈರಸ್ ಆತಂಕ; ಇಂದಿನಿಂದ ಗಣಪತಿ ಆಶ್ರಮದ ಹಲವು ಸ್ಥಳಗಳು ಬಂದ್

 ಭಯವಿಲ್ಲದೇ ಜಿಲ್ಲೆಗೆ ಬನ್ನಿ

ಭಯವಿಲ್ಲದೇ ಜಿಲ್ಲೆಗೆ ಬನ್ನಿ

ಉತ್ತರ ಕನ್ನಡ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಯಾವುದೇ ಭಯ ಬೇಡ. ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ನಿರ್ಭೀತರಾಗಿ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ರೋಶನ್ ತಿಳಿಸಿದ್ದಾರೆ.

English summary
Coronavirus has also affected on tourism and the number of tourists in major tourist destinations in Uttara Kannada district is declining significantly
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X