ಭಟ್ಕಳದ ಇಬ್ಬರಲ್ಲಿ ಕೊರೊನಾ ಸೋಂಕು ಕನ್ಫರ್ಮ್

ಕಾರವಾರ, ಮಾರ್ಚ್ 24: ದುಬೈನಿಂದ ಭಟ್ಕಳಕ್ಕೆ ಬಂದಿದ್ದ ಇಬ್ಬರು ವ್ಯಕ್ತಿಗಳಲ್ಲಿ ಕೋವಿಡ್- 19 ವೈರಾಣು ಇರುವುದು ದೃಢಪಟ್ಟಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, '40 ವರ್ಷದ ಭಟ್ಕಳ ಮೂಲದ ವ್ಯಕ್ತಿ ದುಬೈನಿಂದ ವಿಮಾನದಲ್ಲಿ ಬಂದು 21ಕ್ಕೆ ಮಂಗಳೂರಿನಲ್ಲಿ ಬೆಳಿಗ್ಗೆ 6.30ಕ್ಕೆ ಇಳಿದಿದ್ದರು. ಅವರ ಸಂಬಂಧಿಯೊಬ್ಬರ ಕಾರಿನಲ್ಲಿ ಭಟ್ಕಳಕ್ಕೆ ಬಂದಿದ್ದ ಅವರು, ಮಧ್ಯಾಹ್ನ ಸ್ವಯಂಪ್ರೇರಿತವಾಗಿ ಭಟ್ಕಳ ತಾಲೂಕಿನ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಕೊರೊನಾ ಲಕ್ಷಣ ಕಂಡು ಬಂದಿದ್ದರಿಂದ ಗಂಟಲಿನ ದ್ರವವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸೋಮವಾರ ವರದಿ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ' ಎಂದು ತಿಳಿಸಿದರು.

'ಎರಡನೇ ವ್ಯಕ್ತಿ, 65 ವರ್ಷದ ಭಟ್ಕಳ ಮೂಲದವರಾಗಿದ್ದು, ದುಬೈನಿಂದ 19ಕ್ಕೆ ಮುಂಬೈಗೆ ಬಂದು ಇಳಿದಿದ್ದರು. ಅಲ್ಲಿಂದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಟ್ಕಳಕ್ಕೆ 20ಕ್ಕೆ ಬಂದು ಇಳಿದಿದ್ದರು. ರೈಲು ನಿಲ್ದಾಣದಿಂದ ಆಟೊ ರಿಕ್ಷಾದಲ್ಲಿ ಮಗನ ಜೊತೆಗೆ ಮನೆಗೆ ತೆರಳಿದ್ದರು‌. 21ರಂದು ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ಮಾಡಿದ್ದರು. ಆದರೆ, ಯಾವುದೇ ಲಕ್ಷಣ ಕಂಡು ಬಂದಿರಲಿಲ್ಲ. ಎರಡು ದಿನದ ಬಳಿಕ ಜ್ವರ ಸೇರಿದಂತೆ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಭಟ್ಕಳ ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದರು. ಅವರ ಗಂಟಲಿನ ದ್ರವವನ್ನೂ ಬೆಂಗಳೂರಿಗೆ ಕಳುಹಿಸಲಾಗಿತ್ತು. ಸೋಮವಾರ ವರದಿ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ' ಎಂದು ಅವರು ತಿಳಿಸಿದರು.

Two Corona Cases Confirmed In Bhatkal

'ಈ ಇಬ್ಬರೂ ವ್ಯಕ್ತಿಗಳ ಸಂಪರ್ಕದಲ್ಲಿದ್ದವರನ್ನು ಸಂಪರ್ಕಿಸಲಾಗುತ್ತಿದೆ. ಭಟ್ಕಳ ಪಟ್ಟಣವನ್ನು ಕ್ಲಸ್ಟರ್ ಎಂದು ಪರಿಗಣಿಸಿ, ಅಲ್ಲಿ ಜಿಲ್ಲಾ ಪಂಚಾಯತಿ ಸಿಇಒ ಮೊಹಮ್ಮದ್ ರೋಶನ್ ಅವರು ಮೊಕ್ಕಾಂ ಹೂಡಿದ್ದಾರೆ. ಪಟ್ಟಣವನ್ನು ಲಾಕ್ ಡೌನ್ ಮಾಡಲಾಗಿದ್ದು, ಅಗತ್ಯ ಚಟವಟಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲವನ್ನು ನಿಷೇಧಿಸಲಾಗಿದೆ. ಅಗತ್ಯ ಬಿದ್ದರೆ ಮನೆಮನೆಗಳಿಗೆ ಅಗತ್ಯ ವಸ್ತುಗಳನ್ನು ಜಿಲ್ಲಾಡಳಿತದಿಂದಲೇ ಪೂರೈಸಲಾಗುವುದು' ಎಂದು ತಿಳಿಸಿದರು.

'ಜಿಲ್ಲಾಡಳಿತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ, ಮಾಧ್ಯಮ, ಆಕಾಶವಾಣಿಯಲ್ಲಿ ಮಾಹಿತಿಗಳನ್ನು ಹಂಚಿಕೊಳ್ಳಲಿದೆ. ಸಾರ್ವಜನಿಕರು ಮನೆಯಲ್ಲಿದ್ದು, ಜಾಗರೂಕರಾಗಿರಿ. ಸುಳ್ಳು ಸುದ್ದಿಗಳಿಗೆ ಗಮನ ಕೊಡಬೇಡಿ' ಎಂದು ಅವರು ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+