ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಕೊರೊನಾ ಪಾಸಿಟಿವ್

ಕಾರವಾರ, ಜನವರಿ 7: ಜನವರಿ ಒಂದರಿಂದ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ 18 ಶಿಕ್ಷಕರುಗಳಿಗೆ ಸೋಂಕು ಇರುವುದು ದೃಢಪಟ್ಟಿದೆ.

ಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಂಡೇ ಹೋಗಬೇಕು ಎಂದು ಸರ್ಕಾರ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಈವರೆಗೆ 5223, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 4807 ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಪರೀಕ್ಷೆ ನಡೆಸಲಾಗಿದೆ.

ಎರಡೂ ಜಿಲ್ಲೆಯಲ್ಲಿ ತಲಾ 9 ಶಿಕ್ಷಕರಿಗೆ ಸೋಂಕು ದೃಢಪಟ್ಟಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ನೀಡಿದ್ದಾರೆ. ಜನವರಿ 1ರಿಂದ ಆರಂಭವಾದ ಕೋವಿಡ್ ಪರೀಕ್ಷೆ ಮುಂದುವರೆದಿದ್ದು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಲ್ಲಾ ಶಿಕ್ಷಕರ ಹಾಗೂ ಸಿಬ್ಬಂದಿಗಳ ಪರೀಕ್ಷೆ ಪೂರ್ಣಗೊಂಡಿದೆ. ಆದರೆ ಕಾರವಾರದಲ್ಲಿ ಶೇ.95ರಷ್ಟು ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಪರೀಕ್ಷೆ ನಡೆಸಲಾಗಿದೆ.

Coronavirus Positive For 18 Teachers In Karwar And Sirsi Educational District

ಇನ್ನು ಮೊದಲ ಹಂತದಲ್ಲಿ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಆರ್‌ಟಿ-ಪಿಸಿಆರ್ ಮೂಲಕ ಪರೀಕ್ಷೆ ನಡೆಸಿದ ವೇಳೆಯಲ್ಲಿ 18 ಮಂದಿಗೆ ಸೋಂಕು ದೃಢಪಟ್ಟಿದ್ದು, ಕೆಲ ಶಿಕ್ಷಕರಲ್ಲಿ ಸೋಂಕಿನ ಗುಣಲಕ್ಷಣ ಕಂಡುಬಂದರೂ, ಪರೀಕ್ಷೆಯಲ್ಲಿ ಸೋಂಕು ದೃಢಪಡದ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ಕಳುಹಿಸಲಾಗಿದೆ.

ಇಂಥವರ ವರದಿ ಇನ್ನೂ ಬಂದಿಲ್ಲ ಎನ್ನಲಾಗಿದ್ದು, ಮೂಲಗಳ ಪ್ರಕಾರ ಜ.1ರಿಂದ 5ರವರೆಗೆ ಎರಡೂ ಶೈಕ್ಷಣಿಕ ಜಿಲ್ಲೆಯ 33 ಶಿಕ್ಷಕರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಈ ಪೈಕಿ ಘಟ್ಟದ ಮೇಲ್ಭಾಗದವರದ್ದೇ ಹೆಚ್ಚು ಎನ್ನಲಾಗಿದ್ದು, ಆದರೆ ಬಗ್ಗೆ ಆರೋಗ್ಯ ಅಧಿಕಾರಿಗಳು ದೃಢಪಡಿಸಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+