• search
  • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಟ್ಕಳದಲ್ಲಿ ಮತ್ತೆ ಏಳು ಜನರಿಗೆ ಕೊರೊನಾ ಪಾಸಿಟಿವ್

By ಕಾರವಾರ ಪ್ರತಿನಿಧಿ
|

ಕಾರವಾರ, ಮೇ 10: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಇಂದು ಮತ್ತೆ ಏಳು ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ ಖಚಿತಗೊಂಡಿದೆ.

ಈಗಾಗಲೇ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿರುವವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಮೂವರು ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದ ನಾಲ್ವರು ಸೇರಿದಂತೆ ಏಳು ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 50 ವರ್ಷದ ವೃದ್ಧೆ, 15, 16 ವರ್ಷದ ಬಾಲಕರು, 42 ವರ್ಷದ ಪುರುಷ, 21 ವರ್ಷದ ಯುವತಿ, 31 ವರ್ಷದ ಮಹಿಳೆ ಹಾಗೂ 60 ವರ್ಷದ ವೃದ್ಧನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಭಟ್ಕಳದ ಮತ್ತೋರ್ವ ಮಹಿಳೆಗೆ ಕೊರೊನಾ ಸೋಂಕು

ಈಗಾಗಲೇ ಜಿಲ್ಲೆಯಲ್ಲಿ 21 ಜನ ಸಕ್ರಿಯ ಸೋಂಕಿತರಿದ್ದು, ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ಕೋವಿಡ್-19 ವಿಶೇಷ ವಾರ್ಡ್ ನಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಸಕ್ರಿಯ ಸೋಂಕಿತರ ಸಂಖ್ಯೆ 28 ಕ್ಕೆ ಏರಿದ್ದು, ಒಟ್ಟು ಸೋಂಕಿತರ ಸಂಖ್ಯೆ 39 ಆಗಿದೆ. ಈ ಪೈಕಿ 11 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

English summary
The Health Bulletin of the State Health Department has confirmed that seven people have been infected with coronavirus in Bhatkal town at Uttara Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X