ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಟ್ಕಳದಲ್ಲಿ ಕೊರೊನಾ ಶಂಕಿತ ಯುವಕ ಆಸ್ಪತ್ರೆಯಿಂದ ಪರಾರಿ

|
Google Oneindia Kannada News

ಕಾರವಾರ, ಮಾರ್ಚ್ 30: ಭಟ್ಕಳದಲ್ಲಿ ಕೊರೊನಾ ಶಂಕಿತ ಯುವಕ ರಾತ್ರೋರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ಮಾರ್ಚ್ 27ರಿಂದ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾತ್ರೋ ರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಪೊಲೀಸರು ಆತನ ಹುಡುಕಾಟ ಆರಂಭಿಸಿದ್ದಾರೆ.

ದೇಶದ ಮೊದಲ ಕೊರೊನಾ ಟೆಸ್ಟಿಂಗ್ ಕಿಟ್ ತಯಾರಿಸಿದ ತುಂಬು ಗರ್ಭಿಣಿ ದೇಶದ ಮೊದಲ ಕೊರೊನಾ ಟೆಸ್ಟಿಂಗ್ ಕಿಟ್ ತಯಾರಿಸಿದ ತುಂಬು ಗರ್ಭಿಣಿ

ಕೊವಿಡ್ 19 ಪೀಡಿತರ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನೂ ಈಗಾಗಲೇ ಸರ್ಕಾರ ಗುರುತಿಸಿರುವ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡಲಾಗಿದೆ.

Coronavirus Suspected Youth Escaped From Hospital In Bhatkal

ಭಟ್ಕಳದಲ್ಲಿ ಈಗ ಒಟ್ಟು ಆರು ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಇವರ ಸಂಪರ್ಕಕ್ಕೆ ಬಂದಿದ್ದ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.

ಈ ನಡುವೆ ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಮನೆ ಮನೆ ಸಮೀಕ್ಷೆ ಆರಂಭಿಸಿದೆ. ಭಾನುವಾರ ಬೆಳಗ್ಗೆಯಿಂದಲೇ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇಂದೂ ಕೂಡ ಅದು ಮುಂದುವರೆಯಲಿದೆ.

ಪ್ರತಿ ಮನೆಯಲ್ಲಿ ಜ್ವರದಿಂದ ಬಳಲುತ್ತಿರುವವರು ಮತ್ತು ಇತರೆ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಿರುವವರು , ಇತ್ತೀಚೆಗೆ ವಿದೇಶ ಪ್ರವಾಸ ಮಾಡಿ ಬಂದವರು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬಂದವರ ಮಾಹಿತಿ ಕಲೆ ಹಾಕಲಾಗುತ್ತಿದೆ.'ಸಮೀಕ್ಷೆಯ ವೇಳೆ ಜ್ವರದಿಂದ ಬಳಲುತ್ತಿರುವವರು ಕಂಡು ಬಂದರೆ ಅವರನ್ನು ಹತ್ತಿರದ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತದೆ.

English summary
Coronavirus suspect in Bhatkal escapes from Government hospital overnight.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X