ಉತ್ತರ ಕನ್ನಡ; 6 ಕಡೆ ಶುಕ್ರವಾರ ಕೋವಿಡ್ ಲಸಿಕೆ ಡ್ರೈ ರನ್

ಕಾರವಾರ, ಜನವರಿ 07: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲನೇ ಹಂತದ ಕೊರೋನಾ ಲಸಿಕೆ ನೀಡುವ ಕುರಿತಾಗಿ ಶುಕ್ರವಾರ ತಾಲೀಮು (ಡ್ರೈ ರನ್) ನಡೆಯಲಿದೆ. ಜಿಲ್ಲೆಯ 6 ಸ್ಥಳಗಳಲ್ಲಿ ಈ ತಾಲೀಮು ನಡೆಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಾಲೀಮು ನಡೆಸಲಾಗಿದೆ. ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿಯೂ ಶುಕ್ರವಾರ ತಾಲೀಮು ನಡೆಯಲಿದೆ. ಕಾರವಾರದ ಜಿಲ್ಲಾ ಆಸ್ಪತ್ರೆ, ಬೈತಖೋಲ್ ಪ್ರಾಥಮಿಕ ಆರೋಗ್ಯ ಕೇಂದ್ರ, ಶಿರಸಿ ಟಿಎಸ್ಎಸ್ ಆಸ್ಪತ್ರೆ, ಹೆಗಡೆ ಕಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರ, ಹೊನ್ನಾವರ ತಾಲೂಕು ಆಸ್ಪತ್ರೆ, ದಾಂಡೇಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಾಲೀಮು ನಡೆಯಲಿದೆ.

ತಾಲೀಮಿನ ವೇಳೆ ಸಾಧಕ-ಬಾಧಕಗಳ ಕುರಿತು ಪರಿಶೀಲಿಸಿ, ಸ್ಪಷ್ಟ ಅಭಿಪ್ರಾಯ ಹಾಗೂ ಸಲಹೆಗಳನ್ನು ಅಧಿಕಾರಿಗಳು ಪಡೆದು ಜಿಲ್ಲಾಡಳಿತಕ್ಕೆ ನೀಡಬೇಕಿದೆ. ತಾಲೀಮಿನ ವೇಳೆ ಯಾವುದಾದರೂ ನ್ಯೂನ್ಯತೆ ಕಂಡುಬಂದಲ್ಲಿ ಅವುಗಳನ್ನು ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಸರಿಪಡಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿ ಸಲ್ಲಿಸಲು ಈಗಾಗಲೇ ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

COVID-19 Vaccine Dry Run In Uttara Kannada District

ಲಸಿಕೆ ನೀಡಲು ಸಜ್ಜು; ಲಸಿಕೆ ಬಂದ ಬಳಿಕ ಸಂಗ್ರಹಕ್ಕೆ ಜಿಲ್ಲಾ ಆಸ್ಪತ್ರೆ, ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದೆ. ಇದಲ್ಲದೆ ಹೆಚ್ಚಿನ ಲಸಿಕೆ ಸಂಗ್ರಹಕ್ಕೆ ಪಶು ಆಸ್ಪತ್ರೆಗಳಲ್ಲಿನ 18 ರೆಫ್ರಿಜರೇಟರ್ ಗಳನ್ನು ಗುರುತಿಸಲಾಗಿದೆ.

'ಈಗಾಗಲೇ ಎಲ್ಲಾ ರೆಫ್ರಿಜರೇಟರ್ ಪರಿಶೀಲನೆ ನಡೆಸಿದ್ದು, ಎಲ್ಲವು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆ" ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮೊದಲು ಆರೋಗ್ಯ ಕಾರ್ಯಕರ್ತರಿಗೆ, ನಂತರ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುತ್ತದೆ. ಬಳಿಕ 55 ವರ್ಷ ದಾಟಿದವರಿಗೆ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳಲಾಗಿದೆ.

ಲಸಿಕೆ ನೀಡಲು ಜಿಲ್ಲೆಯಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂರು ಕೊಠಡಿಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಒಂದು ಸಾವಿರಕ್ಕೂ ಹೆಚ್ಚು ಶಾಲೆಗಳು, ಸಮುದಾಯ ಭವನಗಳನ್ನು ಬಳಸಿಕೊಳ್ಳಲು ಗುರುತಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+