ಡಿ.5 ರಂದು ಖಾಸಗಿ, ಸರ್ಕಾರಿ ಸಂಸ್ಥೆಗಳಿಗೆ ವೇತನ ಸಹಿತ ರಜೆ ಘೋಷಣೆ

ಕಾರವಾರ, ಡಿಸೆಮಬರ್ 03: ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಇದೇ ಡಿಸೆಂಬರ್ 05 ರಂದು ಉಪ ಚುನಾವಣೆ ನಡೆಯಲಿರುವ ಕಾರಣ ಚುನಾವಣಾ ಆಯೋಗವು ಈ ಕ್ಷೇತ್ರದ ಎಲ್ಲಾ ಖಾಸಗಿ ಮತ್ತ ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಟ್ಟ ಪ್ರದೇಶ ಹಾಗೂ ಇತರೆಡೆ ಸರ್ಕಾರಿ, ಖಾಸಗಿ, ವ್ಯಾಪಾರ, ವ್ಯವಹಾರ ಮುಂತಾದ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತದಾರ ಕಾರ್ಮಿಕರಿಗೆ ಸಂಬಳ ಸಹಿತ ರಜೆ ಕೊಡಬೇಕೆಂದು ಹೇಳಿದ್ದಾರೆ.

ಮತದಾರರು ರಜೆಯ ಸೌಲಭ್ಯವನ್ನು ಪಡೆದುಕೊಂಡು ಡಿಸೆಂಬರ್ 05 ರಂದು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ.

Declaration of Leave with Salary to Private and Government Institutions on Dec.5

ಮತದಾನ ಮಾಡುವ ಕಾರ್ಮಿಕರಿಗೆ ಅಥವಾ ನೌಕರರಿಗೆ ಸಂಬಳ ಪಾವತಿಸಿದ ರಜೆ ನಿರಾಕರಿಸುವ ಸಂಸ್ಥೆಯ ಮಾಲೀಕರು/ಮುಖ್ಯಸ್ಥರ ವಿರುದ್ದ ಜನಪ್ರತಿನಿಧಿ ಕಾಯ್ದೆ 1951 ಕಲಂ 135 ಬ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಉಪ ಚುನಾವಣೆಯು ಡಿಸೆಂಬರ್ 05 ರಂದು ನಡೆಯಲಿದ್ದು, ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+