• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರವಾರ; ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಜೂನ್ 24; ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಗುರುವಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿ ನೀಡಿದರು. ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.

   ಕಾರವಾರಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ | Oneindia Kannada

   ರಾಜನಾಥ್ ಸಿಂಗ್ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್‌ ಜೊತೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‌ಗೆ ಆಗಮಿಸಿದರು. ಈ ಸಮಯದಲ್ಲಿ ಕಾಮಗಾರಿಗಳ ವೈಮಾನಿಕ ಸಮೀಕ್ಷೆ ಮಾಡಿದರು.

   ನೌಕಾನೆಲೆಗೆ ಆಗಮಿಸಿದ ಸಚಿವರನ್ನು ವೆಸ್ಟರ್ನ್ ನೇವಲ್ ಕಮಾಂಡ್, ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೈಸ್ ಅಡ್ಮಿರಲ್ ಆರ್. ಹರಿ ಕುಮಾರ ಮತ್ತು ಕರ್ನಾಟಕ ನೌಕಾ ಪ್ರದೇಶದ ಧ್ವಜ ಅಧಿಕಾರಿ, ರಿಯರ್ ಅಡ್ಮಿರಲ್ ಮಹೇಶ ಸಿಂಗ್ ಸ್ವಾಗತಿಸಿದರು.

   ಕೋವಿಡ್: ಕಾರವಾರ ನೌಕಾನೆಲೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ವ್ಯವಸ್ಥೆ ಕೋವಿಡ್: ಕಾರವಾರ ನೌಕಾನೆಲೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ವ್ಯವಸ್ಥೆ

   ಬಳಿಕ ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್‌ಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು‌. ಜೊತೆಗೆ ನೌಕಾ ಜಟ್ಟಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನ ಪರಿಶೀಲಿಸಿದರು.

   ನೌಕಾನೆಲೆ ವ್ಯಾಪ್ತಿಯಲ್ಲಿ ಅಕ್ರಮ ಪ್ರವೇಶ; ಪೊಲೀಸರ ವಶಕ್ಕೆ ವಿದೇಶಿಗನೌಕಾನೆಲೆ ವ್ಯಾಪ್ತಿಯಲ್ಲಿ ಅಕ್ರಮ ಪ್ರವೇಶ; ಪೊಲೀಸರ ವಶಕ್ಕೆ ವಿದೇಶಿಗ

   ಬಳಿಕ ನೌಕಾನೆಲೆ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾದ ವಸತಿಗೃಹಕ್ಕೆ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿದ್ದು ಅಲ್ಲಿನ ಮೂಲಭೂತ ಸೌಕರ್ಯಗಳು, ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ವೀಕ್ಷಿಸಿದರು. ಈ ವೇಳೆ ನೌಕಾನೆಲೆಯ ಎರಡನೇಯ ಹಂತದ ಕಾಮಗಾರಿಯ ಕಾಂಟ್ರ್ಯಾಕ್ಟರ್, ಎಂಜಿನಿಯರ್, ಅಧಿಕಾರಿಗಳು ಹಾಗೂ ನೌಕಾನೆಲೆ ಸಿಬ್ಬಂದಿಯೊಂದಿಗೂ ಮಾತುಕತೆ ನಡೆಸಿದರು.

   English summary
   Defence Minister of India Rajnath Singh visited Karwar on June 24. He review the ongoing infrastructure development at Karwar through project seabird.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X