ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಸೂಚನೆ

|
Google Oneindia Kannada News

ಕಾರವಾರ, ಮೇ 14: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮೇ 15 ಹಾಗೂ 16 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತೀ ಗಂಟೆಗೆ 70-80 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹಾಗೂ 120-200 ಮಿ.ಮೀ ಮಳೆ ಬೀಳುವ ಮುನ್ಸೂಚನೆಯಿದೆ.

ಉತ್ತರ ಕನ್ನಡ ಜಿಲ್ಲೆಯ ಎಲ್ಲ ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರದ ಕಡೆಗೆ ಬಾರದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಗಾಳಿ, ಮಳೆ ಸಂದರ್ಭದಲ್ಲಿ ಮಕ್ಕಳು/ ಸಾರ್ವಜನಿಕರು ಸಮುದ್ರದ ಕಡೆಗೆ ಬರಬಾರದು. ಜೊತೆಗೆ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳಬೇಕು.

Karwar: Depression Alert In Arabian Sea; Notice For Preventive Action

Recommended Video

Covidನಿಂದ ಗುಣಮುಖರಾದವರು ತಕ್ಷಣ ಲಸಿಕೆ ತೆಗೆದುಕೊಳ್ಳಬೇಡಿ | Oneindia Kannada

ಮಳೆ, ಗಾಳಿಯಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಇರುವಂತಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಇಂತಹ ಸಂದರ್ಭದಲ್ಲಿ ತುರ್ತು ಸೇವೆಗಾಗಿ ಇಲಾಖೆಯ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್‌ ರೂಂನ ಟೋಲ್ ಫ್ರೀ ಸಂಖ್ಯೆ: 1077 ಅಥವಾ ವಾಟ್ಸಪ್ ಸಂಖ್ಯೆ: 9483511015 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್‌.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
In The Uttara Kannada district is forecast to receive 120-200mm of rain on May 15 and 16 during heavy wind depression in the Arabian Sea.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X