ಅನಂತಕುಮಾರ ಹೆಗಡೆ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್

Posted By: ಡಿ.ಪಿ.ನಾಯ್ಕ
Subscribe to Oneindia Kannada

ಕಾರವಾರ, ನವೆಂಬರ್ 20: ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಹಾಗೂ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಕುರಿತು ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಪೊಲೀಸ್ ಠಾಣೆಯಲ್ಲಿ ಗಣೇಶ ಶಿರಾಲಿ ಎಂಬುವವರು ದೂರು ದಾಖಲಿಸಿದ್ದಾರೆ.

ಸಿಎಂ ಅಭ್ಯರ್ಥಿಯೆಂದು ಹರಿದಾಡುತ್ತಿದ್ದ ಸುದ್ದಿಗೆ ಅನಂತ್ ಕುಮಾರ್ ಹೆಗಡೆ ಸ್ಪಷ್ಟನೆ

ದೂರಿನಲ್ಲಿ ಏನಿದೆ?: "ನಮ್ಮದೇವದುರ್ಗ" ಹೆಸರಿನ ಫೇಸ್‌ ಬುಕ್‌ನಲ್ಲಿ ಉತ್ತರಕನ್ನಡ ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವರಾದ ಅನಂತಕುಮಾರ ಹೆಗಡೆ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಲಾಗಿದೆ. ಇಂಥ ಪೋಸ್ಟ್‌ಗಳಿಂದ ಅವರನ್ನು ಅವಹೇಳನಕಾರಿಯಾಗಿ ಬಿಂಬಿಸುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ.

Ananth kumar hegade

ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು, ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಹಿಂಬರಹ ನೀಡಿರುವ ಪೊಲೀಸರು, 'ಅರ್ಜಿಯು ಮಾನನಷ್ಟ ವಿಷಯಕ್ಕೆ ಸಂಬಂಧಿಸಿದೆ. ಆದ್ದರಿಂದ ಅರ್ಜಿದಾರರು ಸಂಬಂಧಿಸಿದ ನ್ಯಾಯಾಲಯದಲ್ಲಿ ದೂರು ದಾಖಲಿಸಬೇಕು' ಎಂದು ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Derogatory post about central minister Ananthakumar hegade on facebook by Namma Devadurga ID.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ