ಉತ್ತರ ಕನ್ನಡಕ್ಕೆ ಭೇಟಿ ಕೊಡುವವರಿಗೆ ಮಹತ್ವದ ಸೂಚನೆ

ಉತ್ತರ ಕನ್ನಡ, ಜುಲೈ 06 : ಕೊರೊನಾ ವೈರಸ್ ಭೀತಿಯ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುವ ಜನರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 354.

ಬೇರೆ ರಾಜ್ಯಗಳಿಂದ ಅಥವ ಕರ್ನಾಟಕದ ಹೊರ ಜಿಲ್ಲೆಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುವವರು ಕಡ್ಡಾಯವಾಗಿ ಸ್ಥಳೀಯ ಜ್ವರ ತಪಾಸಣೆ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಜಿಲ್ಲೆಗೆ ಮೂರು ಅಥವ ಅದಕ್ಕಿಂತ ಮೇಲ್ಪಟ್ಟ ಅವಧಿಗೆ ವಾಸ್ತವ್ಯ ಮಾಡುವ ಉದ್ದೇಶದಿಂದ ಆಗಮಿಸುವ ಎಲ್ಲರೂ ಸಹ ಸ್ಥಳೀಯ ಜ್ವರ ತಪಾಸಣೆ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಡ್ಡಾಯಗೊಳಿಸಲಾಗಿದೆ.

Fever Clinic Test Compulsory For People Who Visiting Uttara Kannada

2005ರ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ - 19 ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ತಕ್ಷಣದಿಂದ ಜಾರಿಗೆ ಬರುವಂತೆ Fever clinicನಲ್ಲಿ ತಪಾಸಣೆಯನ್ನು ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

14 ದಿನ ಕ್ವಾರಂಟೈನ್ : ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿ ಜ್ವರ ತಪಾಸಣೆ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳದಿದ್ದರೆ 14 ದಿನಗಳ ಕಾಲ ಗೃಹ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಅವರ ವಿರುದ್ಧ ಕಾನೂನು ಕ್ರಮ ಸಹ ಕೈಗೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+